Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೂರಾಲು: ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿ ಮತ್ತು ಸಮವಸ್ತ್ರ ವಿತರಣೆ..!!

Dhrishya News by Dhrishya News
13/06/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಕಾರ್ಕಳ; ಜೂನ್ 13:ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಧ್ಯಾರ್ಥಿಗಳಿಗೆ ಕಾರ್ಕಳ ಆಟೋರಿಕ್ಷಾ ಚಾಲಕ ಮಾಲಕರ ಸಂಘದಿಂದ ಉಚಿತ ಬರವಣಿಗೆ ಸಾಮಾಗ್ರಿ ಮತ್ತು ಸೂರಾಲು ಕೆಳಗಿನ ಗುತ್ತು ಶಶಿಧರ್ ಕುಲಾಲ್ ಕೊಡುಗೆಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜೂನ್ 12 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು,

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಉಮೇಶ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಹಿರಿಯ ನ್ಯಾಯವಾದಿ ,ಬಾಲಕೃಷ್ಣ ಶೆಟ್ಟಿ ಮಕ್ಕಳಿಗೆ ಬರವಣಿಗೆ ಸಾಮಾಗ್ರಿ ವಿತರಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನವನ್ನು ನೀಡುವ ಉದ್ದೇಶದಿಂದ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯರ ಸಹಕಾರದಿಂದ ಉಚಿತ ಬರವಣಿಗೆ ಸಾಮಾಗ್ರಿಗಳನ್ನು ವಿತರಿಸಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕು ಎಂದ ಅವರು ಶಾಲಾ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಪೋಷಕರು ತಮ್ಮ ಮನೆಯ ದೈನಂದಿನ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಂಡಾಗ ತಂದೆ ತಾಯಿಯ ದಿನನಿತ್ಯದ ಕಷ್ಟಗಳನ್ನು ಅರಿತುಕೊಳ್ಳುವ ಮೂಲಕ ಮಕ್ಕಳು ಸಂಸ್ಕಾರಯುತ, ಪ್ರಜ್ಞಾವಂತ ನಾಗರಿಕರಾಗಿ ಬೆಳೆಯಲು ಸಾಧ್ಯವಾಗುತ್ತದೆ, ವೈಜ್ಞಾನಿಕ ವರದಿಯ ಪ್ರಕಾರ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಮೆದುಳಿಗೆ ತೀವ್ರತರದ ತೊಂದರೆಯಾಗುತ್ತಿದ್ದು, ಮಕ್ಕಳ ಮೊಬೈಲ್ ಬಳಕೆಯ ಬಗ್ಗೆಯೂ ಪೋಷಕರು ಜಾಗೃತರಾಗಬೇಕಾಗಿದೆ ಎಂದರು. ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಸಂತೋಷ ರಾವ್ ಅವರು ಮಕ್ಕಳಿಗೆ ಭಗವದ್ಗೀತೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು, ಹಿರಿಯರಾದ ಅಣ್ಣಿ ಮೂಲ್ಯ ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ವೇದಿಕೆಯಲ್ಲಿ ಸೂರಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಕಾರ್ಕಳ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ತಾರಾನಾಥ್ ಕೋಟ್ಯಾನ್, ಆಟೋರಿಕ್ಷ ಚಾಲಕ ಮಾಲಕರ ಸಂಘದ ಸಂಘಟನಾ ಕಾರ್ಯದರ್ಶಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಬೀನ.ಇ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಶಾಲಾ ಸಹ ಶಿಕ್ಷಕಿ ಬೇಬಿ ಗೀತ ಸ್ವಾಗತಿಸಿ, ವಿದ್ಯಾಶ್ರೀ ವಂದನಾರ್ಪಣೆಗೈದರು, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

Previous Post

ಹೆಬ್ರಿಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ :ಗ್ರಾಮೀಣ ಜನರಿಗೆ ಅನುಕೂಲ- ಮೋಹನ್ ಶೆಟ್ಟಿ..!!

Next Post

ಉಡುಪಿ :ಪ್ರಾಥಮಿಕ, ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪ್ರಾಥಮಿಕ, ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News