Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಶುಪಾಲನ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ 400 ಪಶುವೈದ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

Dhrishya News by Dhrishya News
14/06/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು : ಜೂನ್ 14:ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ 

ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24 ಆಗಿರುತ್ತದೆ 

ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

AHVS Karnataka Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in).

ಹೆಸರು, ಫೋನ್‌ ನಂಬರ್‌ ನೀಡಿ ನಿಮ್ಮ ಹೆಸರು ನೋಂದಾಯಿಸಿ.

ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

ಅಗತ್ಯ ದಾಖಲೆ, ಫೋಟೊಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.

ಭರ್ತಿ ಮಾಡಿದ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಮಾಸಿಕ ವೇತನಕ್ಕಿಂತ ಹೊರತುಪಡಿಸಿ ಬೇರೆ ಭತ್ಯೆ ನೀಡಲಾಗುವುದಿಲ್ಲ.

ನಿಯುಕ್ತಿಗೊಳಿಸುವ ಸ್ಥಳದಲ್ಲಿಯೇ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸಬೇಕು.

ಉದ್ಯೋಗ ತ್ಯಜಿಸುವುದಿದ್ದರೆ 1 ತಿಂಗಳು ಮುಂಚಿತವಾಗಿಯೇ ತಿಳಿಸಬೇಕು.

ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು.

ಹೆಚ್ಚಿನ ಮಾಹಿತಿಗೆ, ದೂರವಾಣಿ ಸಂಖ್ಯೆ 080-23414446ಕ್ಕೆ ಸಂಪರ್ಕಿಸಿ 

Previous Post

ಉಡುಪಿ :ಅತೀ ವೇಗದ ಚಾಲನೆಯಿಂದಾಗಿ ಅಂಬಾಗಿಲು ಮೀನು ಮಾರುಕಟ್ಟೆ ಬಳಿ ಪಲ್ಟಿಯಾದ ಕಾರು…!!

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ – 2024 ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ - 2024 ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026

Recent News

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved