Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ಯಕ್ಷಗಾನದ ಕುರಿತ ಸಾಕ್ಷ್ಯಚಿತ್ರಕ್ಕೆ ಲಾಸ್‌ಏಂಜಲೀಸ್‌ನ ಪ್ರತಿಷ್ಠಿತ ವರ್ಲ್ಡ್‌ ಕಲ್ಚರ್‌ ಫಿಲ್ಮ್‌ ಫೆಸ್ಟಿವಲ್‌-2024ರಲ್ಲಿ ಸೆಮಿಫೈನಲ್‌ ಸ್ಥಾನ..!!

Dhrishya News by Dhrishya News
22/06/2024
in ಸುದ್ದಿಗಳು
0
0
SHARES
62
VIEWS
Share on FacebookShare on Twitter

ಮಣಿಪಾಲ, ಜೂನ್‌ 22, 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಅಂತರ್‌ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರ [ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆಯಂಡ್‌ ಡಯಲಾಗ್‌-ಸಿಐಎಸ್‌ಡಿ]ವು ಸಿದ್ಧಪಡಿಸಿದ ಕರಾವಳಿ ಕರ್ನಾಟಕದ ಪಾರಂಪರಿಕ ಕಲೆಯಾದ ಯಕ್ಷಗಾನದ ಕುರಿತ ಸಾಕ್ಷ್ಯಚಿತ್ರವು ಯುಎಸ್‌ಎಯ ಲಾಸ್‌ಏಂಜಲೀಸ್‌ನ ಪ್ರತಿಷ್ಠಿತ ವರ್ಲ್ಡ್‌ ಕಲ್ಚರ್‌ ಪಿಲ್ಮ್‌ ಫೆಸ್ಟಿವಲ್‌-2024 ರಲ್ಲಿ ಅಂತಿಮಪೂರ್ವ ಸ್ಪರ್ಧಾ ವಿಜೇತ ಸ್ಥಾನ [ಸೆಮಿ ಫೈನಲ್‌ ಸ್ಟೇಟಸ್‌] ಕ್ಕೆ ಆಯ್ಕೆಯಾಗಿದೆ. ಈ ಚಿತ್ರೋತ್ಸವವು ಜುಲೈ 27 ಮತ್ತು 28, 2024 ರಂದು ನಡೆಯಲಿದೆ.   

ಈ ಸಾಕ್ಷ್ಯಚಿತ್ರವನ್ನು ಸಿಐಎಸ್‌ಡಿಯ ‘ತುಳುನಾಡಿನ ಸಜೀವ ಸಂಸ್ಕೃತಿಗಳು : ಭಾರತದ ಅರಿವು’ [ಡಿಸರ್ನಿಂಗ್‌ ಇಂಡಿಯ: ಲಿವಿಂಗ್‌ ಕಲ್ಚರ್ಸ್‌ ಆಫ್‌ ತುಳುನಾಡು] ಯೋಜನೆಯ ಭಾಗವಾಗಿ ತಯಾರಿಸಲಾಗಿದೆ. ಈ ಚಿತ್ರೋತ್ಸವಕ್ಕೆ ಸುಮಾರು 40 ದೇಶಗಳಿಂದ ಸಾಂಸ್ಕೃತಿಕ ಮಹತ್ವ ಮತ್ತು ಅಮೂಲ್ಯ ದಾಖಲೆಗಳಾಗಿರುವ ಪ್ರವೇಶಗಳು ಬಂದಿದ್ದು, ಪ್ರಸ್ತುತ ಈ ಸಾಕ್ಷ್ಯಚಿತ್ರವು ಕರ್ನಾಟಕದ ಕರಾವಳಿ ಜಿಲ್ಲೆಗಳ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಪ್ರಾದೇಶಿಕ ಕಲೆಯಾದ ಯಕ್ಷಗಾನದ ಭವ್ಯ ಪರಂಪರೆಯನ್ನು ಎತ್ತಿಹಿಡಿಯುತ್ತದೆ.   

ಮಾಹೆಯ ಐರೋಪ್ಯ ಅಧ್ಯಯನ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಐಎಸ್‌ಡಿಯ ಉಪಕ್ರಮ [ಇನಿಶಿಯೇಟಿವ್‌] ವಾಗಿ ‘ಡಿಸರ್ನಿಂಗ್‌ ಇಂಡಿಯ : ಲಿವಿಂಗ್‌ ಕಲ್ಚರ್ಸ್‌ ಆಫ್‌ ತುಳುನಾಡು’ ಯೋಜನೆ ಕ್ರಿಯಾಶೀಲವಾಗಿದ್ದು, ಇದು ಅಂತರ್‌ಸಾಂಸ್ಕೃತಿಕ ಸಂವಾದ ಮತ್ತು ಅರಿವನ್ನು ವಿಸ್ತರಿಸುವಲ್ಲಿ ಆಶಯದತ್ತ ಕೇಂದ್ರೀಕೃತವಾಗಿದೆ. ಈ ಪ್ರಶಸ್ತಿ ಪುರಸ್ಕೃತ ಸಾಕ್ಷ್ಯಚಿತ್ರವು ಸ್ಥಳೀಯ ಸಾಂಸ್ಕೃತಿಕ ಜ್ಞಾನ ಮತ್ತು ಅನನ್ಯ ಪರಂಪರೆಯನ್ನು ದಾಖಲಿಸುವ ಪ್ರಮುಖ ಪ್ರಯತ್ನವಾಗಿದೆ. ಈವರೆಗೆ ವಿವಿಧ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸುಮಾರು 11 ಬಾರಿ ಆಯ್ಕೆಯಾಗಿರುವುದು ಗಮನಾರ್ಹವಾಗಿದೆ. 

ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್‌. ಎಸ್‌. ಬಲ್ಲಾಳ್‌ ಈ ಸಾಧನೆಯ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸುತ್ತ, ‘ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ದೊರೆತ ಮನ್ನಣೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ, ಬೆಳೆಸುವ ಮಾಹೆಯ ಬದ್ಧತೆಗೆ ದೊರೆತ ಮಾನ್ಯತೆಯೆಂದು ಭಾವಿಸುತ್ತೇವೆ. ಈ ಸಾಕ್ಷ್ಯಚಿತ್ರವು ಪಾರಂಪರಿಕ ಕಲೆಯೊಂದರ ಅಮೂಲ್ಯ ದಾಖಲಾತಿಯಷ್ಟೇ ಅಲ್ಲ, ಮಾಹೆಯಲ್ಲಿರುವ ಸಂಶೋಧನ ತಂಡದ ಸಮೂಹ ಪ್ರಯತ್ನಕ್ಕೆ ಸಾಕ್ಷಿಯಾಗಿದೆ’ ಎಂದರು.  

ಮಾಹೆಯ ಉಪಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ; ವೆಂಕಟೇಶ್‌ ಅವರು, ‘ಈ ಅಂತಾರಾಷ್ಟ್ರೀಯ ಮನ್ನಣೆ ದೊರೆತ ಬಗ್ಗೆ ಅಭಿಮಾನವೆನ್ನಿಸುತ್ತದೆ. ಇದು ಅಂತರ್‌ಸಾಂಸ್ಕೃತಿಕ ಸಂವಾದ ಮತ್ತು ಅರಿವನ್ನು ಹೆಚ್ಚಿಸುವ ನಮ್ಮ ಕ್ರಿಯಾಶೀಲತೆಯ ದ್ಯೋತಕವಾಗಿದೆ. ಈ ಸಾಕ್ಷ್ಯಚಿತ್ರದ ಮೂಲ ನಮ್ಮ ಭವ್ಯ ಪರಂಪರೆಯ ಕಥನಗಳು ಇಡೀ ಜಗತ್ತಿಗೆ ತಲುಪುವಂತಾಗಿವೆ. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ತೌಳವ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸುವಲ್ಲಿ ಮಾಹೆಯು ಪ್ರಮುಖ ಪಾತ್ರವನ್ನು ವಹಿಸುತ್ತಿದೆ’ ಎಂದರು.  

ಪ್ರಸ್ತುತ ಸಾಕ್ಷ್ಯಚಿತ್ರವನ್ನು ಡಾ. ಪ್ರವೀಣ್‌ ಶೆಟ್ಟಿ ಮತ್ತು ನಿತೇಶ್‌ ಅಂಚನ್‌ ನಿರ್ದೇಶಿಸಿದ್ದಾರೆ ಈ ಸಾಕ್ಷ್ಯಚಿತ್ರವು ಪಾರಂಪರಿಕ ಕಲಾ ಮಾಧ್ಯಮದ ಬಹುಮುಖ ಪ್ರಸ್ತುತತೆಯನ್ನು ಮತ್ತು ಸ್ಥಳೀಯ ಸಂಸ್ಕೃತಿಯಲ್ಲಿ ಅದರ ಪ್ರಾಮುಖ್ಯವನ್ನು ಎತ್ತಿಹಿಡಿಯುತ್ತದೆ. ಈ ಹಿಂದೆ ವಾರಾಣಸಿಯ ಸಾಂಸ್ಕೃತಿಕ ಪ್ರವಾಸೋದ್ಯಮದ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಈ ಚಿತ್ರವು ತೀರ್ಪುಗಾರರ ಪ್ರಶಸ್ತಿ [ಜೂರಿ ಅವಾರ್ಡ್‌] ಪಡೆದಿರುವುದು ಮತ್ತು ಹೊಸದಿಲ್ಲಿಯ ಯುಜಿಸಿಯ ಕನ್ಸೋರ್ಟಿಯಂ ಫಾರ್‌ ಎಜುಕೇಶನಲ್‌ ಕಮ್ಯುನಿಕೇಶನ್‌ [ಸಿಇಸಿ]ಯಲ್ಲಿ ಅತ್ಯುತ್ತಮ ಚಿತ್ರಕಥೆ [ಸ್ಕ್ರಿಪ್ಟ್‌ ರೈಟಿಂಗ್‌] ಬಹುಮಾನ ಗಳಿಸಿರುವುದು ಗಮನಾರ್ಹ. 

Previous Post

ರಾಜ್ಯದಲ್ಲಿ ಜೂನ್ 25ರ ವರೆಗೆ ಭಾರಿ ಮಳೆ ಸಾಧ್ಯತೆ ;ಆರೆಂಜ್ ಅಲರ್ಟ್ ಘೋಷಣೆ ..!!

Next Post

ಕಾರ್ಕಳದಲ್ಲಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News