Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿ. ಎಂ ಸಿದ್ದರಾಮಯ್ಯ ಸಮ್ಮತಿ :ಅಂಗನವಾಡಿಗಳಲ್ಲೇ LKG UKG ಆರಂಭಿಸಲು ಸಹಮತ..!!

Dhrishya News by Dhrishya News
24/06/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಬೆಂಗಳೂರು:ಜೂನ್ 24:ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. 

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು.  

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಹೊಸನಗರ:ಅಬ್ಬಿಫಾಲ್ಸ್ ನಲ್ಲಿ ಕಾಲು ಜಾರಿ ನೀರುಪಾಲದ ಬೆಂಗಳೂರು ಮೂಲದ ಪ್ರವಾಸಿಗನ ಮೃತದೇಹ ಪತ್ತೆ..!!

Next Post

ಉಡುಪಿ :ಅಜ್ಜರಕಾಡು ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದ ಮರದಿಂದ ವಾಹನ ಸಂಚಾರಕ್ಕೆ ಅಡಚಣೆ : ಆಗಬೇಕಿದೆ ತೆರವು ಕಾರ್ಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಜ್ಜರಕಾಡು ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದ ಮರದಿಂದ ವಾಹನ ಸಂಚಾರಕ್ಕೆ ಅಡಚಣೆ : ಆಗಬೇಕಿದೆ ತೆರವು ಕಾರ್ಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News