Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಖಾಸಗಿ ವ್ಯಕ್ತಿಗಳಿಂದ ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ..!!

Dhrishya News by Dhrishya News
26/06/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಕಾರ್ಕಳ:ಜೂನ್ 26:ಪಡುಬಿದ್ರೆ ಚಿಕ್ಕಲಗುಡ ರಾಜ್ಯ ಹೆದ್ದಾರಿಯ ಬಂಗ್ಲೆಗುಡ್ಡೆಯಿಂದ ಪುಲ್ಕೆರಿಯವರೆಗೆ ಅಳವಡಿಸಲಾಗಿದ್ದ ಡಿವೈಡರನ್ನು ಖಾಸಗಿ ವ್ಯಕ್ತಿಗಳು ಕೆಲವೊಂದು ಕಡೆ ಅಕ್ರಮವಾಗಿ ಕೆಡವಿರುವ ಬಗ್ಗೆ ಲೋಕೋಪಯೋಗಿ ಇಲಾಖೆಯು ಕಾನೂನು ಕ್ರಮಕ್ಕೆ ಮುಂದಾಗಿದೆ.

ಕಾರ್ಕಳ ಬಂಗ್ಲೆಗುಡ್ಡೆ – ಪುಲ್ಕೇರಿ ಬೈಪಾಸ್ ರಸ್ತೆಯ ಬದಿಗೆ ತಾಗಿಕೊಂಡಿರುವ ಖಾಸಗಿ ವ್ಯಕ್ತಿಗಳ ಜಾಗದಲ್ಲಿ ನಿರ್ಮಿಸಲಾದ ಪೆಟ್ರೋಲ್ ಬಂಕ್ ಮಾಲೀಕರು ಡಿವೈಡರ್ ಅಕ್ರಮವಾಗಿ ತೆರವುಗೊಳಿಸಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯು ಶ್ರೀ ವೇಣುಗೋಪಾಲ ದೇವಸ್ಥಾನದ ಬಳಿಯ ಹೆಚ್‌ಪಿ ಪೆಟ್ರೋಲ್ ಬಂಕ್, ಶಿವತಿಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿರುವ ನಯರ ಪೆಟ್ರೋಲ್ ಬಂಕ್ ಹಾಗೂ ಸರ್ವಜ್ಞ ವೃತ್ತ ಬಳಿಯ ರೋಹಿತ್ ಶೆಟ್ಟಿ ಮಾಲೀಕತ್ವದ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ಗೆ ಕೆಡವಿರುವ ಡಿವೈಡರ್ ಸರಿಪಡಿಸುವಂತೆ ನೋಟೀಸು ಜಾರಿಗೊಳಿಸಿದೆ. 

 ಬಂಕ್ ಮಾಲಕರು ವಿಭಾಜಕವನ್ನು ಸರಿಮಾಡಿರುವ ಬಗ್ಗೆ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ ಪರಿಶೀಲಿಸಿದಾಗ ಬಂಕ್ ಮಾಲಕರು ಲ್ಯಾಟರೈಟ್ ಕಲ್ಲು, ಬ್ಯಾರಿಕೇಡ್‌ಗಳಿಂದ ತಾತ್ಕಾಲಿಕವಾಗಿ ಮುಚ್ಚಿರುವುದು ಕಂಡುಬಂದಿರುವುದರಿಂದ ಲೋಕೋಪಯೋಗಿ ಇಲಾಖೆಯು ಕಾರ್ಕಳ ನಗರ ಠಾಣೆಗೆ ಈ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯು ವಾಹನಗಳ ಹಿತದೃಷ್ಟಿಯಿಂದ ವಿಭಾಜಕವನ್ನು ಯಥಾವತ್ತು ಮುಚ್ಚುವಂತೆ ವರದಿ ನೀಡಿದ್ದು, ಈ ವರದಿಯ ಆಧಾರದ ಮೇಲೆ ತಾತ್ಕಾಲಿಕವಾಗಿ ಮುಚ್ಚಿರುವ ವಿಭಾಜಕವನ್ನು ಸರಿಪಡಿಸುವಂತೆ ಜೂ. ೨೪ರಂದು ಮತ್ತೊಮ್ಮೆ ಬಂಕ್ ಮಾಲಕರಿಗೆ ನೋಟೀಸು ನೀಡಿದ್ದು, ೩ ದಿನಗಳೊಳಗಾಗಿ ಯಥಾ ಮೊದಲಿನ ಸ್ಥಿತಿಗೆ ಸರಿಪಡಿಸುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಸದರಿ ಜಾಗಗಳಲ್ಲಿ ಅಪಘಾತಗಳು ಸಂಭವಿಸಿದ್ದಲ್ಲಿ ಇದಕ್ಕೆ ತಾವೇ ಜವಾಬ್ದಾರರಾಗಿರುತ್ತೀರಿ ಮತ್ತು ಮುಚ್ಚದಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ಎಚ್ಚರಿಕೆ ನೀಡಿದೆ.

ಸಾರ್ವಜನಿಕರ ರಸ್ತೆಯ ಡಿವೈಡರ್ ಕಿತ್ತೆಸೆದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಸಾರ್ವಜನಿಕರ ಹಣವನ್ನು ಹಾಳು ಮಾಡಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.

ತಮ್ಮ ಬಂಕಿಗೆ ಗ್ರಾಹಕರು ಬರಲು ಅನುಕೂಲವಾಗುವಂತೆ ರಸ್ತೆ ವಿಭಾಜಕವನ್ನು ತೆರವುಗೊಳಿಸಿದ್ದಾರೆ .ಆದರೆ ಅದಕ್ಕಾಗಿ ಬಂಕ್ ಮಾಲಕರು ಇಲಾಖೆಯಿಂದ ಅನುಮತಿ ಪಡೆಯಲಿಲ್ಲ. ರಾತ್ರೋರಾತ್ರಿ ರಸ್ತೆ ವಿಭಾಜಕವನ್ನು ಕಾನೂನು ಬಾಹಿರವಾಗಿ ಒಡೆದು ಹಾಕಿ ಸಾರ್ವಜನಿಕರ ಸ್ವತ್ತು ಹಾಳು ಮಾಡಿದ್ದಾರೆ.

ರಾಜ್ಯ ಹೆದ್ದಾರಿ ರಸ್ತೆಗಳಿಗೆ ಅಳವಡಿಸಿರುವ ರಸ್ತೆ ವಿಭಾಜಕವನ್ನು ೫೦೦ ಮೀಟರ್ ಅಂತರದಲ್ಲಿ ತೆರೆಯಬಹುದಾಗಿದೆ. ಇಲ್ಲದಿದ್ದಲ್ಲಿ ತುರ್ತು ಸ್ಥಳಗಳಲ್ಲಿ ೩೦೦ ಮೀಟರ್ ಅಂತರದಲ್ಲಿ ಡಿವೈಡರ್ ತೆರೆಯಲು ಅವಕಾಶವಿದೆ. ಆದರೆ ಇಲ್ಲಿ ಬಂಕ್ ಮಾಲಕರು ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ರಾತ್ರೋರಾತ್ರಿ ತಮ್ಮ ಬಂಕಿನ ಎದುರುಗಡೆ ಇರುವ ರಸ್ತೆ ವಿಭಾಜಕವನ್ನು ಕೆಡವಿ ಹಾಕಿ ಕಾನೂನು ಉಲ್ಲಂಘನೆ ಮಾಡಿದ್ದಾರೆ.

ವರದಿ ಅರುಣ್ ಭಟ್ ಕಾರ್ಕಳ

Previous Post

ಉಡುಪಿ : ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ..!!

Next Post

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಕಿವಿ, ಮೂಗು ಹಾಗೂ ಗಂಟಲು ತಪಾಸಣಾ ಶಿಬಿರ :ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಕಿವಿ, ಮೂಗು ಹಾಗೂ ಗಂಟಲು ತಪಾಸಣಾ ಶಿಬಿರ :ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News