Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನಸ್ಪಂದನ ಸಭೆಯಲ್ಲಿ ಬಂದ ಜನಸಾಮಾನ್ಯರ ಅಹವಾಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News by Dhrishya News
27/06/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ, ಜೂನ್ 27 : ಜನಸ್ಪಂದನ ಸಭೆಯಲ್ಲಿ ಬಂದಂತಹ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳು ಕಾನೂನು ಪ್ರಕಾರ ವಿಲೇವಾರಿ ಮಾಡಬೇಕು ಒಂದೊಮ್ಮೆ ಅದು ಸರ್ಕಾರ ಹಂತದಲ್ಲಿ ಬಗೆ ಹರಿಸುವಂತಿದ್ದಲ್ಲಿ ಇದ್ದಲ್ಲಿ ಅದನ್ನು ಸರ್ಕಾರದ ಮುಖ್ಯಸ್ಥರಿಗೆ ಪ್ರಸ್ತಾವನೆ ಸಲ್ಲಿಸುವುದರೊಂದಿಗೆ ಅವುಗಳನ್ನು ಫಾಲೋ ಅಪ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಹೆಬ್ರಿಯ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಮೊದಲನೆದಾಗಿ ಹೆಬ್ರಿಯ ಪ್ರಗತಿಪರ ನಾಗರೀಕ ಸೇವಾ ಸಮಿತಿ ಹೆಬ್ರಿ ಪೊಲೀಸ್ ಠಾಣೆ ಸ್ಥಳಾಂತರಗೊAಡು ಕಾಡಿನ ಮದ್ಯೆ ಇರುವುದರಿಂದ ಜನ ಸಾಮಾನ್ಯರಿಗೆ ಮಹಿಳೆಯರಿಗೆ ರಾತ್ರಿ ಸಮಯದಲ್ಲಿ ದೂರು ನೀಡಲು ತೊಂದರೆಯಾಗುತ್ತಿದೆ. ದಾರಿದೀಪಗಳು ಸರಿಯಾಗಿ ಇರುವುದಿಲ್ಲ. ತುರ್ತು ದೂರು ನೀಡಲು ಕಷ್ಟವಾಗಿದೆ ಹಾಗೂ ಹೆಬ್ರಿ ನಗರದಲ್ಲಿ ಮೋಟಾರು ವಾಹನ ಚಾಲಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದು ಸಾಮಾನ್ಯವಾಗಿದೆ. ಇದನ್ನು ಕಡಿವಾಣ ಹಾಕಲು ಈ ಮೊದಲು ಇದ್ದ ಪೊಲೀಸ್ ಠಾಣೆಯಲ್ಲಿ ತೆರೆಯಬೇಕು ಎಂಬ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಇದು ಸರ್ಕಾರ ಮಟ್ಟದಲ್ಲಿ ಆಗಬೇಕಾಗಿರುವುದರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.
ಪ್ರಗತಿಪರ ನಾಗರಿಕ ಸೇವಾ ವೇದಿಕೆಯು ನೂತನವಾಗಿ ರಚನೆಯಾಗಿರುವ ತಾಲೂಕಿಗೆ ಕೆಲವು ತಾಲೂಕು ಮಟ್ಟದ ಕಚೇರಿಗಳು, ನ್ಯಾಯಾಲಯ, ಸಬ್ ರಿಜಿಸ್ಟರ್, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ತಾಲೂಕು ಆಸ್ಪತ್ರೆಯನ್ನಾಗಿಸಬೇಕು ಎಂಬ ಮನವಿಗೆ ಈಗಾಗಲೇ ಕೆಲವು ಸರ್ಕಾರದ ಹಂತದಲ್ಲಿ ಪ್ರಸ್ತಾವನೆ ಇದ್ದು, ಈ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ ಶೀಘ್ರದಲ್ಲೇ ಕಲ್ಪಿಸಲು ಇನ್ನೊಮ್ಮೆ ಪತ್ರ ಬರೆಯಲಾಗುವುದು ಹಾಗೂ ಪ್ರಸ್ತಾವನೆಗಳು ಹೊಸದಾಗಿ ಹೋಗುವುದಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಲು ಸಂಬಧಪಟ್ಟ ಇಲಾಖೆಯ ಅದಿಕಾರಿಗಳಿಗೆ ಸೂಚನೆ ನೀಡಿದರು.
ಚಾರಾ ಗ್ರಾಮದ ಹಿರಿಯಣ್ಣ ಶೆಟ್ಟಿ ಯವರು ಕೃಷಿ ಸಾಲ ಅಡಮಾನ ಪತ್ರ ನೋಂದಾವಣೆಗೆ ಕಾವೇರಿ ತಂತ್ರಾಶದಲ್ಲಿ ನಮೂನೆ 11 ಇ ನಕಾಶೆ ಅವಶ್ಯಕತೆ ಇದೆ ಎಂದು ತಪ್ಪಾಗಿ ಇಂಧೀಕರಣ ಮಾಡಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡು ನಾನು ನನ್ನ ಕೃಷಿ ಅಭಿವೃದ್ಧಿಗೆ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ನನ್ನ ಹಕ್ಕಿನ ಕೃಷಿ ಆಸ್ತಿಗಳ ಜವಾಬ್ದಾರಿಯಿದ ಪಡೆದಿರುವ ಸಾಲದ ಮರು ಪತ್ರವನ್ನು ಕೂಡಲೇ ಬ್ರಹ್ಮಾವರ ಸಬ್ ರಿಜಿಸ್ಟರ್ ಆಫೀಸಿನಲ್ಲಿ ನೋಂದಾಯಿಸಿಕೊಡುವಂತೆ ಸಲ್ಲಿಸಿದ ಅರ್ಜಿಗೆ ಜಿಲ್ಲಾಧಿಕಾರಿಗಳು ಭೂ ದಾಖಲೆಗಳ ಅಧಿಕಾರಿಗಳಿಗೆ ಪರಿಶೀಲಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದರು.

ಮನೆಗಳು ಹಾಗೂ ಜಮೀನಿಗೆ ಹೋಗಲು ರಸ್ತೆ ಸಂಪರ್ಕ ಕಲ್ಪಿಸಿಕೊಡಬೇಕೆಂದು ಬಂದAತಹ ಅಹವಾಲುಗಳಿಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಹಲವು ವರ್ಷಗಳಿಂದ ರಸ್ತೆಗಳಿದ್ದಲ್ಲಿ ನಿಯಮಾನುಸಾರ ರಸ್ತೆ ಮಾಡಿಕೊಡಲು ಮುಂದಾಗಬೇಕು.

ಒಂದೊಮ್ಮೆ ಖಾಸಗಿ ವ್ಯಕ್ತಿಗಳ ಜಾಗ ಇದ್ದಲ್ಲಿ ಅವರೊಂದಿಗೆ ಸೌಹರ್ದಯುತವಾಗಿ ಅನುಮತಿ ಪಡೆದು ರಸ್ತೆ ನಿರ್ಮಾಣ ಮಾಡಬೇಕು. ಅದು ಸಾಧ್ಯವಾಗದೇ ಇದ್ದಲ್ಲಿ ಅರ್ಜಿದಾರರು ಈಸ್‌ಮೆಂಟ್ ಆಕ್ಟ್ ಅನ್ವಯ ನ್ಯಾಯಾಲಯಕ್ಕೆ ಹೋಗಬಹುದಾಗಿದೆ ಎಂದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಇಲಾಖಾವಾರು ಒಟ್ಟು 45 ಅರ್ಜಿಗಳು ಸ್ವೀಕೃತವಾಗಿದ್ದು, ಪೊಲೀಸ್ ಇಲಾಖೆಯ 01, ಆರೋಗ್ಯ ಇಲಾಖೆ-1, ಅರಣ್ಯ ಇಲಾಖೆ-2, ಸರ್ವೇ ಇಲಾಖೆ-2, ಕಂದಾಯ ಇಲಾಖೆ-17, ಕೃಷಿ / ತೊಟಗಾರಿಕೆ ಇಲಾಖೆ-3. ಸಾರಿಗೆ ಇಲಾಖೆ-7, ಆಹಾರ ಇಲಾಖೆ-2, ನೋಂದಣಿ ಇಲಾಖೆ-1, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ-1, ಲೋಕೋಪಯೋಗಿ/ ಮೆಸ್ಕಾಂ-2, ಮೆಸ್ಕಾಂ/ ಸರ್ವೇ ಇಲಾಖೆ-1, ಪಂಚಾಯತ್ ರಾಜ್ ಇಲಾಖೆ-3, ಜಿಲ್ಲಾ ನಿಬಂಧಕರು, ಸಹಕಾರ ಇಲಾಖೆ-1, ಸಾರಿಗೆ/ ಕಂದಾಯ ಇಲಾಖೆ-1 ಅರ್ಜಿಗಳು ಸ್ವೀಕೃತವಾದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್‌ಪಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ರಶ್ಮಿ, ತಹಶೀಲ್ದಾರ್ ಪ್ರಸಾದ್, ತಾಲೂಕು ಪಂಚಾಯತ್ ಇ.ಓ ಶಶಿಧರ್ ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಅರುಣ್ ಭಟ್ ಕಾರ್ಕಳ 

Previous Post

ಉಡುಪಿ :ನಿಲ್ಲಿಸಿದ್ದ ಬಸ್ ಗೆ ಡಿಕ್ಕಿ ಹೊಡೆದ ಹೊಚ್ಚ ಹೊಸ ಫಾರ್ಚೂನರ್ ಕಾರು..!!

Next Post

ಪರ್ಕಳ : ಧಾರಾಕಾರ ಮಳೆ ಮರ ಬಿದ್ದು ಹಾನಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ : ಧಾರಾಕಾರ ಮಳೆ ಮರ ಬಿದ್ದು ಹಾನಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026

Recent News

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved