Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ…!!

Dhrishya News by Dhrishya News
05/07/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ :ಜುಲೈ 05:ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76 ವರ್ಷ)  ಜುಲೈ 04 ರಂದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕ್‍ರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು.

ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್‍ರ ಕೊಡುಗೆ ಮಹತ್ತರವಾದುದು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ. 

ಮೃತರ ಅಂತ್ಯ ಸಂಸ್ಕಾರ ಇಂದು (05-07-2024) ಪೂರ್ವಾಹ್ನ 10.00 ಗಂಟೆಗೆ ಬ್ರಹ್ಮಾವರದಲ್ಲಿ ಜರಗಲಿದೆ.

Previous Post

ನಿಟ್ಟೆ : ಪರಪು ಪಾದೆಯಲ್ಲಿ  ಗಾಳಿ ಮಳೆಗೆ ಮರಗಳು ಬಿದ್ದು  6 ಮನೆಗಳಿಗೆ ಹಾನಿ :ಕಾರ್ಕಳ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ..!!

Next Post

ಉಡುಪಿ : ಜಿಲ್ಲೆಯಲ್ಲಿ ಹಸಿರುಕ್ರಾಂತಿಗೆ ಮುಂದಾದ ವೀಕಲಚೇತನ ತಂಡ ,ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲೆಯಲ್ಲಿ ಹಸಿರುಕ್ರಾಂತಿಗೆ ಮುಂದಾದ ವೀಕಲಚೇತನ ತಂಡ ,ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News