Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾಹೆಯಲ್ಲಿ ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌ ಉದ್ಘಾಟನೆ..!!

Dhrishya News by Dhrishya News
08/07/2024
in मौसम
0
0
SHARES
18
VIEWS
Share on FacebookShare on Twitter

ಮಣಿಪಾಲ ಜುಲೈ 8, 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಮಾಹೆ-ವನ್ಯಸ್ಥ ವೈದ್ಯಕೀಯ ಮತ್ತು ಸುರಕ್ಷಾ ಸಂಶೋಧನ ಕೇಂದ್ರ [ಮಾಹೆ-ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌]ನ್ನು ಇತ್ತೀಚೆಗೆ ಮಣಿಪಾಲದ ಕಂಚಿನಬೈಲುವಿನಲ್ಲಿ ಆರಂಭಿಸಿತು. ಮಾಹೆಯ ವನ್ಯಸ್ಥ ವೈದ್ಯಕೀಯ ಕೇಂದ್ರ [ ಸೆಂಟರ್‌ ಫಾರ್‌ ವೈಲ್ಡರ್‌ನೆಸ್‌ ಮೆಡಿಸಿನ್‌], ತುರ್ತು ಚಿಕಿತ್ಸಾ ವಿಭಾಗ [ಡಿಪಾರ್ಟ್‌ಮೆಂಟ್‌ ಆಫ್‌ ಎಮರ್ಜನ್ಸಿ ಮೆಡಿಸಿನ್‌] ಮತ್ತು ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗ [ಡಿಪಾರ್ಟ್‌ಮೆಂಟ್‌ ಆಫ್‌ ಎಮರ್ಜನ್ಸಿ ಮೆಡಿಕಲ್‌ ಟೆಕ್ನಾಲಜಿ] ಗಳ ಸಹಭಾಗಿತ್ವದೊಂದಿಗೆ ಕಾರ್ಯನಿರ್ವಹಿಸುವ ಕೇಂದ್ರವು ಸುಧಾರಿತ ವನ್ಯಸ್ಥ ವೈದ್ಯಕೀಯ ಮತ್ತು ಪರಿಸರ ಸಂರಕ್ಷಣೆಯ ಆಶಯಕ್ಕೆ ಬದ್ಧವಾಗಿದೆ. 

ಉದ್ಘಾಟನ ಸಮಾರಂಭದಲ್ಲಿ ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್‌. ಎಸ್‌. ಬಲ್ಲಾಳ್‌, ಉಪಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ. ವೆಂಕಟೇಶ್‌, ಆರೋಗ್ಯ ವಿಜ್ಞಾನ ವಿಭಾಗದ ಸಹ-ಉಪಕುಲಪತಿಗಳಾದ ಡಾ. ಶರತ್‌ ಕೆ. ರಾವ್‌, ಕೆಎಂಸಿಯ ಡೀನ್‌ ಡಾ. ಪದ್ಮರಾಜ್‌ ಹೆಗ್ಡೆ, ಯೋಜನೆ ಮತ್ತು ಡಾ. ರವಿರಾಜ ಎನ್.ಎಸ್ (ಸಿ ಓ ಓ ) ಮಾಹೆ ಮಣಿಪಾಲ ಸೇರಿದಂತೆ ಮಾಹೆಯ ವಿವಿಧ ವಿಭಾಗಗಳ ನಿರ್ದೇಶಕರು, ಪ್ರಾಧ್ಯಾಪಕರು ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಅತಿಥಿಗಳು ಸ್ಥಳೀಯ ತಳಿಯ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಮಾತನಾಡುತ್ತ, ‘ಪ್ರಸ್ತುತ ವೈಲ್ಡರ್‌ನೆಸ್‌ ಮೆಡಿಸಿನ್‌ನ ಉಪಕ್ರಮವು ರಾಷ್ಟ್ರದಲ್ಲಿಯೇ ಗಮನಾರ್ಹ ಪ್ರಯತ್ನವಾಗಿದೆ. ಮಾಹೆಯ ವೈಲ್ಡರ್‌ನೆಸ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌ ಅನ್ಯ ಕೇಂದ್ರಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದರು. 

ಮಾಹೆಯ ಉಪಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ. ವೆಂಕಟೇಶ್‌ ಅವರು ಮಾತನಾಡಿ, ‘ಲಭ್ಯವಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಬಳಸಿ, ಉತ್ತಮ ಕೌಶಲ ಮತ್ತು ಜ್ಞಾನದ ಮೂಲಕ ಹೇಗೆ ವನ್ಯಸ್ಥ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿಸಲು ಸಾಧ್ಯವಿದೆ’ ಎಂದು ವಿವರಿಸಿದರು.

ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ-ಉಪಕುಲಪತಿಗಳಾದ ಡಾ. ಶರತ್‌ ಕೆ. ರಾವ್‌ ಅವರು ಮಾತನಾಡುತ್ತ ‘ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಮುಖ್ಯವಾಗಿ ಸ್ಥಳೀಯವಾಗಿ ಲಭ್ಯವಿರುವ ಮತ್ತು ಮರುಬಳಕೆಯ ವಸ್ತುಗಳನ್ನು ಬಳಸಿ ಸಿದ್ಧಗೊಳಿಸಲಾಗಿದೆ. ಇದು ಪರಿಸರಕ್ಕೆ ಹಾನಿಯಾಗುವುದನ್ನು ತಪ್ಪಿಸುವ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿದೆ’ ಎಂದರು  

ಮಾಹೆಯ ಸೆಂಟರ್‌ ಫಾರ್‌ ವೆಲ್ಡರ್‌ನೆಸ್‌ ಮೆಡಿಸಿನ್‌ ವಿಭಾಗದ ಸಂಚಾಲಕ ಮತ್ತು ಸಹಪ್ರಾಧ್ಯಾಪಕರಾದ ಡಾ. ಫ್ರೆಸ್ಟನ್‌ ಮಾರ್ಕ್‌ ಸಿರೂರ್‌ ಅವರು ಸ್ವಾಗತ ಭಾಷಣ ಮಾಡಿದರೆ, ಡಾ. ವೃಂದಾ ಲಾತ್‌ ಧನ್ಯವಾದ ಸಮರ್ಪಿಸಿದರು. ಆರಂಭದಲ್ಲಿ ಅರುಂಧತಿ ಹೆಬ್ಬಾರ್‌ ಪ್ರಾರ್ಥನ ಗೀತೆ ಹಾಡಿದರು. 

Previous Post

ಉದ್ಯಾವರ : ಆಟೋ, ಟೆಂಪೋ ಮಾಲಕ ಆತ್ಮಹತ್ಯೆ..!!

Next Post

ಕಾರ್ಕಳ : ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ನೇಸರ ವಾರ್ಷಿಕಾಂಕ ಅನಾವರಣ ಹಾಗೂ ಪ್ರತಿಭಾ ಪುರಸ್ಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ನೇಸರ ವಾರ್ಷಿಕಾಂಕ ಅನಾವರಣ ಹಾಗೂ ಪ್ರತಿಭಾ ಪುರಸ್ಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News