Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನ್ನಡದ ಖ್ಯಾತ ನಿರೂಪಕಿ, ಅಪರ್ಣಾ ವಿಧಿವಶ..!!

Dhrishya News by Dhrishya News
12/07/2024
in ಸುದ್ದಿಗಳು
0
0
SHARES
140
VIEWS
Share on FacebookShare on Twitter

ಬೆಂಗಳೂರು : ಜುಲೈ 12 :ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ(58) ಅವರು ಗುರುವಾರ (ಜುಲೈ 11)ರಾತ್ರಿ ನಿಧನರಾಗಿದ್ದಾರೆ .

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9.45 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿ ಮೂಲದವರಾಗಿದ್ದರು. ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ಅಪರ್ಣಾ ಅವರು ದೂರದರ್ಶನದಲ್ಲಿ ನಿರೂಪಕಿಯಾಗಿ, ರೇಡಿಯೋ ಜಾಕಿಯಾಗಿ ಕನ್ನಡದ ಜನಪ್ರಿಯ ಮುಖವಾಗಿದ್ದರು. 1990 ರ ದಶಕದಲ್ಲಿ ದೂರ ದರ್ಶನದಲ್ಲಿ ದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಕೆಲಸ ಮಾಡಿದ್ದರು . 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2015 ಮತ್ತು 2021 ರ ನಡುವೆ ಕಾಮಿಡಿ ಶೋ, ಮಜಾ ಟಾಕೀಸ್‌ನಲ್ಲಿ ವರಲಕ್ಷ್ಮಿ ಪಾತ್ರವನ್ನು ನಿರ್ವಹಿಸಿಯೂ ಜನಪ್ರಿಯರಾಗಿದ್ದರು.

ಅಪರ್ಣಾ ಅವರು ಮೂಡಲ ಮನೆ ಮತ್ತು ಮುಕ್ತ ಮುಂತಾದ ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಯಾಗಿ ಕೆಲಸ ಮಾಡಿದ್ದಾರೆ . 2013 ರಲ್ಲಿ, ಅವರು ETV ಕನ್ನಡದಲ್ಲಿ ಪ್ರಸಾರವಾದ ಕನ್ನಡ ರಿಯಾಲಿಟಿ ಟೆಲಿವಿಷನ್ ಶೋ ಬಿಗ್ ಬಾಸ್‌ನ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು

ಅಪರ್ಣಾ ಅವರ ಪತಿ ನಾಗರಾಜ್ ಮಾಧ್ಯಮಗಳಿಗೆ ರಾತ್ರಿ ಭಾವುಕರಾಗಿ ಹೇಳಿಕೆ ನೀಡಿದ್ದು, 2 ವರ್ಷದ ಹಿಂದೆ ಜುಲೈ ನಲ್ಲಿ ಕ್ಯಾನ್ಸರ್ ಎಂದು ತಿಳಿಯಿತು. ಮೊದಲು ನೋಡಿದ ವೈದ್ಯರು ಆರು ತಿಂಗಳೇ ಬದುಕುವುದು ಕಷ್ಟ ಎಂದಿದ್ದರು. ಆಕೆ ಛಲಗಾತಿ. ಒಂದೂವರೆ ವರ್ಷ ಹೋರಾಡಿದಳು. ಅವಳು ಧೀರೆ ಹೋರಾಡಿ ಸೋತಳು. ದೇಹ ಎನ್ನುವುದು ಮಾಯಕ. ನಿಜವಾದ ವಯಸ್ಸು ಯಾವಾಗಲೂ ತೋರಿಸಿಲ್ಲ. ನಮ್ಮ ಖಾಸಗಿ ವಿಚಾರವಾಗಿತ್ತು. ಇದನ್ನು ಮಾಧ್ಯಮದ ಎದುರು ಹೇಳಬೇಕೆಂಬುದು ಆಕೆಯ ಕೊನೆಯಾಸೆ ಯಾಗಿತ್ತು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಸಂತಾಪ

”ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿದ್ದಾರೆ.

Previous Post

ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ 30 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮನವಿ..!!

Next Post

ಕುಂದಾಪುರ : ಬಸ್- ಬೈಕ್ ಢಿಕ್ಕಿ – ಪೌರಕಾರ್ಮಿಕ ಸ್ಥಳದಲ್ಲೇ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಬಸ್- ಬೈಕ್ ಢಿಕ್ಕಿ - ಪೌರಕಾರ್ಮಿಕ ಸ್ಥಳದಲ್ಲೇ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved