Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತ : ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚನೆ..!!

Dhrishya News by Dhrishya News
14/07/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ತೀರ್ಥಹಳ್ಳಿ:ಜುಲೈ 14:ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು, ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ

ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು, ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

ಕಳೆದ 3 ವರ್ಷಗಳ ಹಿಂದೆ ಕೂಡ 6ನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ಈಗಾಗಲೇ ಕುಸಿದಿದ್ದು, ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ. ಘಾಟಿ ಕುಸಿದ ಪರಿಣಾಮ ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ಘಾಟಿಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ತೆರವು ಕಾರ್ಯಚರಣೆ ಆರಂಭವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಮಣ್ಣು ತೆರವು ಕಾರ್ಯ ನಡೆಸಿದ್ದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ರಸ್ತೆಯ ಅರ್ಥ ಭಾಗದಲ್ಲಿ ಕುಸಿದ ಮಣ್ಣಿದ್ದು ಹೀಗಾಗಿ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ತಿರುವುಗಳಲ್ಲಿ ಮರಗಳು ಬಾಗಿದ್ದು ಭಾರಿ ಮಳೆಯಿಂದ ಮತ್ತಷ್ಟು ಗುಡ್ಡ ಕುಸಿಯಬಹುದಾಗಿದ್ದು ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾಗಿದೆ.

ಇದೇ ರೀತಿ ಮಳೆ ಮುಂದುವರಿದರೆ ಘಾಟಿ ಮತ್ತಷ್ಟು ಕುಸಿಯು ಭೀತಿಯಲ್ಲಿದ್ದು ಘಾಟಿ ಸಂಚಾರ ಬಂದ್‌ ಆಗುವ ಭೀತಿ ಎದುರಾಗಿದೆ. ರಸ್ತೆಗೆ ಬಾಗಿದ ಅಪಾಯಕಾರಿ ಮರಗಳ ತೆರವು ಮಾಡಿರುವುದು ಗುಡ್ಡ ಕುಸಿತಕ್ಕೆ ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಗುಡ್ಡ ಮತ್ತಷ್ಟು ಕುಸಿದರೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಈಗಾಗಲೇ ಈ ಹೆದ್ದಾರಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಹೀಗಾಗಿ ಈ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಸಂಚರಿಸುತ್ತಿವೆ.

Previous Post

ಕಾಪು: ಮೂಳೂರಿನಲ್ಲಿ ಸ್ಕೂಲ್ ಬಸ್ಸಿಗೆ ಕಾರು ಢಿಕ್ಕಿ : ನಜ್ಜುಗುಜ್ಜಾದ ಕಾರು .!!

Next Post

ಜುಲೈ 15 ರಂದು ಭಾರೀ ಮಳೆ ಮುನ್ಸೂಚನೆ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದ  ಹವಾಮಾನ ಇಲಾಖೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜುಲೈ 15 ರಂದು ಭಾರೀ ಮಳೆ ಮುನ್ಸೂಚನೆ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದ  ಹವಾಮಾನ ಇಲಾಖೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved