Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿರಂತರ ಮಳೆ ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣು ಕುಸಿತ , ಚಾಲಕ ಪಾರು, ಸಂಚಾರ ಸ್ಥಗಿತ..!!

Dhrishya News by Dhrishya News
18/07/2024
in ಸುದ್ದಿಗಳು
0
0
SHARES
75
VIEWS
Share on FacebookShare on Twitter

ಸಕಲೇಶಪುರ: ಸತತ ಮಳೆಯಿಂದಾಗಿ ಶಿರಾಡಿ!! ಘಾಟ್ ರಸ್ತೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮೇಲೆ ಬಿದ್ದು ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಮಳೆಯ ಅಬ್ಬರದ ನಡುವೆ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

KA-17 M 5003 ನಂಬರ್‌ನ ಓಮ್ನಿ ಕಾರು ಮಣ್ಣಿನಡಿ ಸಿಲುಕಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಹಾಸನದ ಕಂದಲಿ ಗ್ರಾಮದ ಬಳಿಯೇ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ ರಸ್ತೆಯಲ್ಲೂ ಪ್ರಯಾಣ ದುಸ್ತರವಾಗಿದ್ದು, ಹಾಸನ ಬಳಿಯೇ ವಾಹನ ನಿಲ್ಲಿಸಲು ಪೊಲೀಸರು ಸೂಚನೆ ನೀಡುತ್ತಿದ್ದಾರೆ.

ಮಂಗಳೂರು ಬಸ್​​ಗಳ ಸಂಚಾರಕ್ಕೆ ತಡೆ: ಸಕಲೇಶಪುರದವರೆಗೆ ತೆರಳುವ ಸಾರಿಗೆ ಬಸ್​​ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗುತ್ತಿದೆ. ಮಂಗಳೂರು ಕಡೆಗೆ ಹೋಗುವ ಬಸ್​​​ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆಯೊಡ್ಡಲಾಗುತ್ತಿದೆ. ವಾಹನಗಳನ್ನು ತಡೆದು ಗುಡ್ಡ ಕುಸಿತದ ಬಗ್ಗೆ ಮಾಹಿತಿ ನೀಡಿ ವಾಪಸ್ ಕಳುಹಿಸಲಾಗುತ್ತಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನಗಳಿಗೆ ತಡೆಯೊಡ್ಡಲಾಗುತ್ತಿದೆ.

Previous Post

ಉಡುಪಿ: ರೈಲು ಹಳಿಯ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

Next Post

ನಾಳೆ (ಜುಲೈ 19) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ , ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ !!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಜುಲೈ 19) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ , ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ !!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved