Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರು : ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ  ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ…!!

Dhrishya News by Dhrishya News
21/07/2024
in ಸುದ್ದಿಗಳು
0
0
SHARES
52
VIEWS
Share on FacebookShare on Twitter

ಶಿರೂರು ಜುಲೈ 21: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. 

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು. 

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು. 

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

*ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?*

ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು.

Previous Post

ಕೇದಾರನಾಥ ಪಾದಯಾತ್ರೆಯ ಮಾರ್ಗದಲ್ಲಿ ಗುಡ್ಡದಿಂದ ಬಂಡೆ ಕುಸಿತ; ಮೂವರು ಸಾವು..!!

Next Post

ಚಿಕ್ಕಮಗಳೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ : ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ : ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026

Recent News

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved