Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಅಂಗವಾಗಿ ಕೆಎಂಸಿ ಮಣಿಪಾಲದ ಸಂತಾನೋತ್ಪತ್ತಿ ವಿಜ್ಞಾನ ವಿಭಾಗದ ಕ್ಲಿನಿಕಲ್ ಭ್ರೂಣಶಾಸ್ತ್ರ ಕೇಂದ್ರದಿಂದ ‘ಓಪನ್‌ ಡೇ’ ಕಾರ್ಯಕ್ರಮ..!!

Dhrishya News by Dhrishya News
28/07/2024
in ಸುದ್ದಿಗಳು
0
0
SHARES
121
VIEWS
Share on FacebookShare on Twitter

ಮಣಿಪಾಲ, ಜುಲೈ 28, 2024 – ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿ [ಕೆಎಂಸಿ] ನ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಕ್ಲಿನಿಕಲ್‌ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಆಚರಣೆಯ ಅಂಗವಾಗಿ ‘ಓಪನ್ ಡೇ ಕಾರ್ಯಕ್ರಮ ಜುಲೈ 25, 2024 ರಂದು ಆಯೋಜಿಸಲಾಗಿತ್ತು . ‘ವಿಶ್ವ ಭ್ರೂಣಶಾಸ್ತ್ರಜ್ಞರ ದಿನ’ವನ್ನು ಜಗತ್ತಿನ ಪ್ರಥಮ ಪ್ರನಾಳ ಶಿಶುವಾದ ಲೂಯಿಸ್‌ ಜಾಯ್‌ ಬ್ರೌನ್‌ನ ಜನ್ಮ ದಿನದಂದು ಆಚರಿಸಲಾಗುತ್ತಿದ್ದು, ಮಣಿಪಾಲದ ಸುತ್ತಮುತ್ತಲಿನ ಕಾಲೇಜುಗಳ ಜೀವವಿಜ್ಞಾನದ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವನ್ನು ಮೂಡಿಸಿ, ಪ್ರನಾಳ ಶಿಶು ಫಲೀಕರಣ ಕ್ಷೇತ್ರದಲ್ಲಿರುವ ವ್ಯಾಪಕ ಸಂಶೋಧನ ಅವಕಾಶಗಳ ಬಗ್ಗೆ ಒಳನೋಟಗಳನ್ನು ಒದಗಿಸುವ ಗುರಿಯನ್ನು ಹೊಂದಿತ್ತು  

ಓಪನ್ ಡೇ ಕಾರ್ಯಕ್ರಮವನ್ನು ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿ ಡಾ.ಶರತ್ ರಾವ್ ಉದ್ಘಾಟಿಸಿದರು. ಅವರು ಮಾತನಾಡುತ್ತಾ , “ಸಂತಾನೋತ್ಪತ್ತಿ ಔಷಧದ ಭವಿಷ್ಯವು ಕ್ಲಿನಿಕಲ್ ಭ್ರೂಣಶಾಸ್ತ್ರಜ್ಞರ ಪರಿಣತಿ ಮತ್ತು ಸಮರ್ಪಣೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ವೃತ್ತಿಪರರು ದಂಪತಿಗಳಿಗೆ ಬಂಜೆತನದ ಸವಾಲುಗಳನ್ನು ಜಯಿಸಲು ಮತ್ತು ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡಲಿದ್ದಾರೆ . ಅವರ ಮಹತ್ವಾಕಾಂಕ್ಷೆಯನ್ನು ಹೀಡೇರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯವಾದ ಸಂಪನ್ಮೂಲಗಳು ಮತ್ತು ಜ್ಞಾನವನ್ನು ಹೊಂದಿರುವ ವಿದ್ಯಾರ್ಥಿಗಳು ಸಮಗ್ರ ಶಿಕ್ಷಣ, ತರಬೇತಿ ಮತ್ತು ಅತ್ಯಾಧುನಿಕ ಸಂಶೋಧನೆಗೆ ಒಡ್ಡಿಕೊಳ್ಳುವುದರ ಮೂಲಕ, ಮುಂದಿನ ಪೀಳಿಗೆಯ ಕ್ಲಿನಿಕಲ್ ಭ್ರೂಣಶಾಸ್ತ್ರಜ್ಞರು ಗಮನಾರ್ಹ ಕೊಡುಗೆಗಳನ್ನು ನೀಡಲು ಸಿದ್ಧರಾಗಿದ್ದಾರೆ ಎಂದು ನಾವು ಖಚಿತಪಡಿಸಿಕೊಳ್ಳಬಹುದು. ಈ ಗುರಿಯನ್ನು ಸಾಧಿಸಲು ಇಂದಿನ ಈ ಕಾರ್ಯಕ್ರಮವು ಒಂದು ಮಹತ್ವದ ಹೆಜ್ಜೆಯಾಗಿದೆ, ಏಕೆಂದರೆ ಇದು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಯ ಪ್ರಭಾವವನ್ನು ಮತ್ತು ಜನರ ಜೀವನದಲ್ಲಿ ಅವರು ಮಾಡಬಹುದಾದ ವ್ಯತ್ಯಾಸವನ್ನು ನೇರವಾಗಿ ನೋಡಲು ಅನುವು ಮಾಡಿಕೊಡುತ್ತದೆ” ಎಂದರು. 

ಕೆಎಂಸಿಯ ಡೀನ್‌ ಡಾ. ಪದ್ಮರಾಜ್‌ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತ, ‘ಸಂತಾನೋತ್ಪತ್ತಿ ವಿಜ್ಞಾನದಲ್ಲಿ ಸುಧಾರಿತ ತರಬೇತಿ ಮತ್ತು ಸಂಶೋಧನೆಯ ಮಹತ್ವವನ್ನು ಒತ್ತಿ ಹೇಳಿದರು. ಶಿಕ್ಷಣ ಮತ್ತು ಆವಿಷ್ಕಾರದಲ್ಲಿ ಉತ್ಕೃಷ್ಟತೆಗೆ ಕೇಂದ್ರದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು.’ ಎಂದರು.  

ಪೂರ್ಣ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರನಾಳ ಶಿಶು ಸೃಷ್ಟಿಯ [ಐವಿಎಫ್‌] ವೆಜ್ಞಾನಿಕ ಪ್ರಕ್ರಿಯೆಯನ್ನು ಸನಿಹದಿಂದ ಅವಲೋಕಿಸುವ ಮತ್ತು ಭ್ರೂಣಶಾಸ್ತ್ರದ ತಜ್ಞರೊಂದಿಗೆ ಸಂವಾದಿಸುವ ಅವಕಾಶವನ್ನು ನೀಡಲಾಯಿತು. ಜೊತೆಗೆ, ಕಲಾಪಗಳನ್ನು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸುವ, ಕೆಎಂಸಿಯಲ್ಲಿರುವ ಅತ್ಯಾಧುನಿಕ ಪ್ರಯೋಗಾಲಯಗಳನ್ನು ನೋಡುವ ಸಂದರ್ಭವನ್ನೂ ಕಲ್ಪಿಸಲಾಯಿತು. 

ಐ ವಿ ಎಫ್ ನ ನ ಜಟಿಲತೆಗಳು ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ಕ್ಲಿನಿಕಲ್ ಭ್ರೂಣಶಾಸ್ತ್ರದ ಮಹತ್ವದ ಪ್ರಭಾವದ ಬಗ್ಗೆ ಆಳವಾದ ತಿಳುವಳಿಕೆಯೊಂದಿಗೆ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಮೆರುಗು ತಂದರು.

Previous Post

ಕಾರ್ಕಳ :ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ : ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ.!!

Next Post

ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ : ಮಹಿಳೆಯರ 10 ಮೀ. ಏರ್ ಪಿಸ್ತೂಲ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ಶೂಟರ್ ಮನು ಭಾಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ : ಮಹಿಳೆಯರ 10 ಮೀ. ಏರ್ ಪಿಸ್ತೂಲ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ಶೂಟರ್ ಮನು ಭಾಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News