Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ತುಳುನಾಡಿನಲ್ಲಿಂದು ಸಂಭ್ರಮದ ಆಟಿ ಅಮಾವಾಸ್ಯೆ:” ಪಾಲೆದ ಕಷಾಯ”ಸೇವನೆ ಇಂದಿನ ವಿಶೇಷತೆ …!!

Dhrishya News by Dhrishya News
04/08/2024
in ಆರೋಗ್ಯ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ : ಆಗಸ್ಟ್ 04:ದ್ರಶ್ಯ ನ್ಯೂಸ್ : ತುಳುನಾಡಿನಲ್ಲಿ ಇಂದು ಸಂಭ್ರಮದ ಆಟಿ ಅಮಾವಾಸ್ಯೆ ಯ ಸಡಗರ ಮನೆಮಾಡಿದ್ದು ಹಿಂದಿನಿಂದಲೂ ಬೆಳೆದು ಬಂದ ಪದ್ದತಿ ಪಾಲೆದ ಕಷಾಯ ಸೇವನೆ ಆಟಿ ಅಮಾವಾಸ್ಯೆಯ ವಿಶೇಷತೆ

ಈ ದಿನ ಪಾಲೆ ಮರ ದಿವ್ಯ ಔಷದಿ ಯಿಂದ ಕೂಡಿರುತ್ತದೆ ಎಂಬುದು ಹಿಂದಿನವರ ನಂಬಿಕೆ..ಏನೇ ಇರಲಿ ಈ ಕಷಾಯವಂತು ದೇಹದ ಆರೋಗ್ಯಕ್ಕೆ ಅತ್ಯುತ್ತಮ ಎನ್ನುದರಲ್ಲಿ ಸಂದೇಹವಿಲ್ಲ

ಹಾಗಾದ್ರೆ ಈ ಪಾಲೆ ಕಷಾಯದ ಮಹತ್ವ ಏನು ಇದರ ಹಿನ್ನೆಲೆ ಏನು ಇದರಿಂದ ಏನೆಲ್ಲಾ ಪ್ರಯೋಜನ ವಿದೆ ಅನ್ನೋದನ್ನ ತಿಳಿಯೋಣ.

ಸಂಪ್ರದಾಯದಂತೆ ಸೂರ್ಯೋದಯಕ್ಕೆ ಮೊದಲೇ ಪಾಲೆ ಮರ (ಹಾಲೆ ಮರ) ದ ಸನಿಹ ಹೋಗಿ ಬಿಳಿ ಕಲ್ಲಿನಿಂದ ಜಜ್ಜಿ ಆ ಮರದ ತೊಗಟೆಯನ್ನು ತೆಗೆದು ಬರಬೇಕು. ತೊಗಟೆಯನ್ನು ತೆಗೆಯುವಾಗ ಕಬ್ಬಿಣದ ಕತ್ತಿಯನ್ನು ತಾಗಿಸಬಾರದು

ಮನೆಮಂದಿಯೆಲ್ಲರೂ ಆರೋಗ್ಯವರ್ಧಕವಾದ ಪಾಲೆಯ ಅತಿ ಕಹಿಯಾದ ರಸವನ್ನು ಕುಡಿಯುತ್ತಾರೆ. ನಂತರ ಮೆಂತೆ ಗಂಜಿ ತಿನ್ನೋದು ವಾಡಿಕೆ

  • ವೈಜ್ಞಾನಿಕವಾಗಿ ಈ ಆಚರಣೆಯ ಮಹತ್ವ 

ಪಾಲೆ ತೊಗಟೆಯ ರಸ ಒಂದು ವರ್ಷದ ಕಾಲ ಯಾವುದೇ ರೋಗ ರುಜಿನಗಳು ದೂರವಾಗುತ್ತದೆ ಎನ್ನುವಂತಹ ನಂಬಿಕೆ ಇದೆ. ಅನ್ಯ ಆಹಾರ ಸೇವನೆಗೆ ಮೂದಲು ಖಾಲಿ ಹೊಟ್ಟೆಗೆ ಸೇವಿಸುವುದು ಅತೀ ಉತ್ತಮವೆಂದು ತಿಳಿವಳಿಕೆ ಇದೆ. ಈ ರೀತಿ ಸೇವಿಸುವುದರಿಂದ ಅನೇಕ ಬಗೆಯ ಔಷಧಿಗಳು ನಮ್ಮ ಶರೀರಕ್ಕೆ ಸೇರಿತು ಎಂಬ ಬಲವಾದ ನಂಬಿಕೆ ಇಲ್ಲಿ ಗಮನೀಯವೆನಿಸುತ್ತದೆ

ಹಿಂದಿನ ಕಾಲದಲ್ಲಿ ಆಟಿತಿಂಗಳಿನಲ್ಲಿ ವಿಪರೀತ ಮಳೆ. ಮಳೆಗಾಲದ ಈ ತಿಂಗಳು ಒಂದು ಹೊತ್ತಿನ ಊಟಕ್ಕೂ ಕಷ್ಟವಿತ್ತಂತೆ. ಮಳೆಯಿಂದಾಗಿ ಶರೀರದಲ್ಲಿ ಕಫ ವೃದ್ಧಿಯಾಗಿ ಅಗ್ನಿ ಕುಂಠಿತವಾಗಿರುತ್ತದೆ. ಅಪೌಷ್ಟಿಕತೆಯಿಂದ ರೋಗಗಳೂ ಹೆಚ್ಚು. ಆದ್ದರಿಂದ ಈ ಮಾಸದಲ್ಲಿ ಆಟಿ ಕಳಂಜ ದೈವವು ಅಮಾವಾಸ್ಯೆಯಂದು ಅನೇಕ ಬಗೆಯ ಔಷಧೀಯ ಗುಣಗಳನ್ನು ತಂದು ಮರದಲ್ಲಿರಿಸುತ್ತದೆ. ಯಾರು ತೊಗಟೆಯ ರಸವನ್ನು ನಂಬಿಕೆಯಿಂದ ಸೇವಿಸುತ್ತಾರೆಯೋ ಅವರು ವರ್ಷಪೂರ್ತಿ ಆರೋಗ್ಯವಾಗಿರುತ್ತಾರೆ ಎಂಬ ನಂಬಿಕೆಯೂ ಬಲವಾಗಿದೆ.

ಹಾಲೆ ಮರವನ್ನು ಆಯುರ್ವೇದದಲ್ಲಿ ಸಪ್ತಪರ್ಣ ಎನ್ನುತ್ತಾರೆ. ಈ ಮರದ ಎಲೆಗಳಲ್ಲಿ ಏಳು ಎಲೆಗಳಿರುವ ಕಾರಣ ಸಪ್ತ ಪರ್ಣ ಎಂದು ಹೆಸರು ಬಂದಿರಬೇಕು. ಹೀಗಾಗಿ ಸಪ್ತಪರ್ಣಿ ಎಂದೂ ಕರೆಯುತ್ತಾರೆ.

ಪಾಲೆ ಮರದಲ್ಲಿ ಜ್ವರ, ಕ್ಯಾನ್ಸರ್‌ ನಂತಹ ಕಾಯಿಲೆಗಳನ್ನು ಗುಣಪಡಿಸುವ ಹಲವು ಬಗೆಯ ಔಷಧೀಯ ಗುಣವಿದೆ. ಆಯುರ್ವೇದ ಔಷಧಿಗಳಲ್ಲಿ ಇದು ಧಾರಾಳವಾಗಿ ಬಳಕೆಯಾಗುತ್ತಿದೆ. ಎಷ್ಟೋ ಔಷಧಿಗಳನ್ನು ಸೇವಿಸುವವರಿಗೆ ಆ ಔಷಧಿಯಲ್ಲಿ ಹಾಲೆ ಮರದ ಅಂಶಗಳಿವೆ ಎನ್ನುವುದೂ ಗೊತ್ತಿರುವುದಿಲ್ಲ. ವಿಶೇಷವೆಂದರೆ ಆಯುರ್ವೇದ ಶಾಸ್ತ್ರದಲ್ಲಿ ಹೇಳಿರುವ ಈ ವಿಚಾರವನ್ನು ಆಯುರ್ವೇದ ತಿಳಿವಳಿಕೆ ಇಲ್ಲದ ಸಾಮಾನ್ಯ ವ್ಯಕ್ತಿಗಳೂ ಪಾಲಿಸುವ ಸಂಸ್ಕೃತಿ ಕಾಣಬಹುದಾಗಿದೆ.

  •  ಎಷ್ಟು ಪ್ರಮಾಣದಲ್ಲಿ ಸೇವಿಸಿದರೆ ಉತ್ತಮ ?

ತೊಗಟೆಯನ್ನು ನೀರು ಮಿಶ್ರ ಮಾಡಿ ಜಜ್ಜಿ ರಸವನ್ನು ತೆಗೆಯುತ್ತಾರೆ. ಇದನ್ನು ವ್ಯಕ್ತಿಯೊಬ್ಬ ಗರಿಷ್ಠ 24 ಮಿ.ಲೀ. ಸೇವಿಸಬಹುದು. ಕುದಿಸಿ ಕಷಾಯ ಮಾಡುವುದಾದರೆ ಗರಿಷ್ಠ 50 ಮಿ.ಲೀ. ಸೇವಿಸಬಹುದು. ಕೆಲವರು ಜೀರಿಗೆ, ಬೆಳ್ಳುಳ್ಳಿ, ಅರಶಿನವನ್ನು ಮಿಶ್ರ ಮಾಡುವುದೂ ಇದೆ.. 

  • ಆಟಿ ಅಮಾವಾಸ್ಯೆ ಪಾಲೆ ಕೆತ್ತೆ ಸಂಗ್ರಹಿಸುವಾಗ ಎಚ್ಚರವಹಿಸೋದು ತುಂಬಾನೇ ಮುಖ್ಯ :

ಪ್ರಾಯಶಃ ಕರಾವಳಿಯಲ್ಲಿ ಮಳೆ ಹೆಚ್ಚಿಗೆ ಬರುವ ಕಾರಣ ಈ ಸಂಪ್ರದಾಯ ಕರಾವಳಿಯಲ್ಲಿ ಮಾತ್ರ ಚಾಲ್ತಿಯಲ್ಲಿದೆ. ಅದೇ ದಿನ ಮುಂಜಾವ ತೊಗಟೆ ತೆಗೆಯಲು ಹೋಗುತ್ತಾರೆ. ನಸುಕಿನಲ್ಲಿ ಸರಿಯಾಗಿ ತೋರದ ಕಾರಣ ಹಾಲೆ ಮರದ ಬದಲು ಬೇರೊಂದು ಮರದ ಕೆತ್ತೆ ತಂದು ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಯೂ ಇರುವುದರಿಂದ ಜಾಗರೂಕತೆ ವಹಿಸಬೇಕು. 

ಹಾಲೆ ಮರದ ರೀತಿ ಕಾಣುವ ಕಾಸರ್ಕ (ಕಾಸಾನು) ಮರದ ತೊಗಟೆ ಯನ್ನು ತಂದು ಜೀವಕ್ಕೆ ಅಪಾಯ ಮಾಡಿಕೊಂಡಿರುವ ಉದಾಹರಣೆಗಳು ಇವೆ 

ಹಿಂದಿನ ದಿನವೇ ಗುರುತಿಸಿ ಮರುದಿನ ಸಂಗ್ರಹಿಸುವುದು ಉತ್ತಮ. ಇಲ್ಲವಾದರೆ ಹಾಲೆ ಮರದ ಎಲೆಯನ್ನು ಸ್ಪಷ್ಟವಾಗಿ ಗುರುತಿಸಿ ಅದರ ತೊಗಟೆಯನ್ನು ತೆಗೆಯಬೇಕು.

ಪಾಲೆದ ಕಷಾಯ ದಿಂದ ಎಷ್ಟೆಲ್ಲ ಪ್ರಯೋಜನವಿದೆ ಅನ್ನೋದು ನಿಮಗೆಲ್ಲ ತಿಳಿದಿದೆ ಕರಾವಳಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಈ ವಿಶಿಷ್ಟ ಆಚರಣೆ ಮುಂದುವರಿಸುತ್ತಾ ನಮ್ಮ ಮುಂದಿನ ಪೀಳಿಗೆಗೆ ಮಹತ್ವ ತಿಳಿಸುತ್ತಾ ಎಲ್ಲರೂ ಹಾಲೆ ಮರದ ತೊಗಟೆಯ ಕಷಾಯ ಕುಡಿದು ಸಂಭ್ರಮಿಸೋಣ 

ವರದಿ : ಮಾಲತಿ ಆಚಾರ್ಯ 

Previous Post

ನಿರಂತರ ಮಳೆ : ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ..!!

Next Post

ಉಡುಪಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ :ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ :ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News