Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ :ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ..!!

Dhrishya News by Dhrishya News
04/08/2024
in ಸುದ್ದಿಗಳು
0
0
SHARES
186
VIEWS
Share on FacebookShare on Twitter

ಉಡುಪಿ, ಆ.4: ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಒಟ್ಟು 37ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಶನಿವಾರ ಆದೇಶ ನೀಡಿದೆ.

ಕೋಟ ನಿವಾಸಿ ಸಚಿನ್ ಪೂಜಾರಿ(26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದು, ಆಕೆಯಿಂದ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡು ಮೊಬೈಲ್‌ನಲ್ಲಿ ಚಾಟಿಂಗ್ ಮಾಡಿ, ಬಾಲಕಿಯ ಅಶ್ಲೀಲ ಫೋಟೋವನ್ನು ತರಿಸಿಕೊಂಡಿದ್ದನು. ಅದನ್ನು ವೈರಲ್ ಮಾಡುವುದಾಗಿ ಹೆದರಿಸಿ ನೊಂದ ಬಾಲಕಿಯಿಂದ ಹಲವು ಬಾರಿ ಲಕ್ಷಾಂತರ ರೂ. ಹಣವನ್ನು ಪಡೆದುಕೊಂಡಿದ್ದನು. ಅದೇ ರೀತಿ ಚಿನ್ನಾಭರಣಗಳನ್ನು ತರಿಸಿಕೊಂಡು ಅದನ್ನು ತನ್ನ ಸ್ವಂತ ಉಪಯೋಗಕ್ಕೆ ಬಳಸಿ ಕೆಲವು ಚಿನ್ನಾಭರಣಗಳನ್ನು ಅಡವು ಇಟ್ಟಿದ್ದನು.

ನಂತರ 2020ರ ಸೆಪ್ಟೆಂಬರ್ ಹಾಗೂ ನವೆಂಬರ್ ತಿಂಗಳಲ್ಲಿ ಆಕೆಯನ್ನು ಎರಡು ಮೂರು ಬಾರಿ ಬಲವಂತವಾಗಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಬಳಿಕ ಮತ್ತೆ ಹಣ ಹಾಗೂ ಚಿನ್ನಾಭರಣ ನೀಡುವಂತೆ ಪೀಡಿಸುತ್ತಿದ್ದನು. ಮನೆಯಿಂದ ಕಾಣೆಯಾಗುತ್ತಿರುವ ಚಿನ್ನಾಭರಣ, ಹಣವನ್ನು ಮನೆಯವರು ಹುಡುಕುವಾಗ ಬಾಲಕಿ ಈ ಎಲ್ಲ ಘಟನೆಯ ಬಗ್ಗೆ ಮನೆಯವರಿಗೆ ತಿಳಿಸಿದಳು. ಅದರಂತೆ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಮಹಿಳಾ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಂಜುನಾಥ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 42 ಸಾಕ್ಷಿಗಳ ಪೈಕಿ 24 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ 50 ದಾಖಲೆಗಳನ್ನು ಪರಿಶೀಲಿಸಿತು. ನೊಂದ ಬಾಲಕಿಯ ಸಾಕ್ಷಿ ಮತ್ತು ಸಾಂಧರ್ಭಿಕ ಸಾಕ್ಷಿ ಮತ್ತು ಆರೋಪಿಯಿಂದ ವಶಪಡಿಸಲಾದ ಚಿನ್ನಾಭರಣ ಗಳಿಂದ ಇತರ ಸಾಕ್ಷಿದಾರರೂ ಕೂಡ ಅಭಿಯೋಜನೆ ಪರವಾಗಿ ಸಾಕ್ಷಿ ನುಡಿದಿದ್ದು, ಅದರಂತೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅಭಿಪ್ರಾಯಪಟ್ಟರು.

ಬಾಲಕಿಯನ್ನು ಅಪಹರಿಸಿದಕ್ಕೆ 5ವರ್ಷ ಕಠಿಣ ಜೈಲುಶಿಕ್ಷೆ ಮತ್ತು 5000ರೂ. ದಂಡ, ಅತ್ಯಾಚಾರಕ್ಕೆ ಸಂಬಂಧಿಸಿ 10ವರ್ಷ ಕಠಿಣ ಶಿಕ್ಷೆ ಮತ್ತು 10ಸಾವಿರ ರೂ. ದಂಡ, ಬಲವಂತವಾಗಿ ಹಣ ಮತ್ತು ಚಿನ್ನಾಭರಣ ಪಡೆದ ಪ್ರಕರಣಕ್ಕೆ ಒಂದು ವರ್ಷ ಜೈಲುಶಿಕ್ಷೆ ಮತ್ತು 3000ರೂ. ದಂಡ, ಬೆದರಿಕೆಗೆ ಒಂದು ವರ್ಷ ಜೈಲುಶಿಕ್ಷೆ ಮತ್ತು 2ಸಾವಿರ ರೂ. ದಂಡ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ 20ವರ್ಷ ಜೈಲುಶಿಕ್ಷೆ ಮತ್ತು 20ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು. ದಂಡದ 40ಸಾವಿರ ರೂ. ದಂಡದ ಮೊತ್ತದಲ್ಲಿ 10ಸಾವಿರ ರೂ. ಸರಕಾರಕ್ಕೆ ಮತ್ತು 30ಸಾವಿರ ರೂ. ಸಂತ್ರಸ್ತೆಗೆ ನೀಡುವಂತೆ ಮತ್ತು ಸರಕಾರದಿಂದ ನೊಂದ ಬಾಲಕಿಗೆ 2ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಆರೋಪಿಯು ಎಲ್ಲ ಶಿಕ್ಷೆಯನ್ನು ಒಟ್ಟಾಗಿ ಅನುಭವಿಸುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು

Previous Post

ತುಳುನಾಡಿನಲ್ಲಿಂದು ಸಂಭ್ರಮದ ಆಟಿ ಅಮಾವಾಸ್ಯೆ:” ಪಾಲೆದ ಕಷಾಯ”ಸೇವನೆ ಇಂದಿನ ವಿಶೇಷತೆ …!!

Next Post

ವಿಶಾಖಪಟ್ಟಣಂ : ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ : 3 ಬೋಗಿಗಳು ಅಗ್ನಿಗಾಹುತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶಾಖಪಟ್ಟಣಂ : ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ : 3 ಬೋಗಿಗಳು ಅಗ್ನಿಗಾಹುತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026

Recent News

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved