Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಕ್ಟೋಬರ್ 26ರಂದು ಈ ವರ್ಷದ ಮೊದಲ ಕಂಬಳಕ್ಕೆ ಬೆಂಗಳೂರಿನಿಂದ ಚಾಲನೆ : ಏಪ್ರಿಲ್ 19ರಂದು ಶಿವಮೊಗ್ಗದಲ್ಲಿ ಮುಕ್ತಾಯ ..!!

Dhrishya News by Dhrishya News
11/08/2024
in ಸುದ್ದಿಗಳು
0
0
SHARES
62
VIEWS
Share on FacebookShare on Twitter

ಮೂಡುಬಿದ್ರೆ : ಆಗಸ್ಟ್ 11:ಈ ಬಾರಿಯ ಕಂಬಳ ಋತು ಬೆಂಗಳೂರಿನಲ್ಲಿ ಕಂಬಳ ನಡೆಯುವ ಮೂಲಕ ಆರಂಭವಾಗಲಿದೆ.ಬಳಿಕ ಕರಾವಳಿಯಾದ್ಯಂತ ಕಂಬಳಗಳು ನಡೆಯಲಿವೆ.

ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಒಟ್ಟು 26 ಕಂಬಳಗಳು ಈ ಸಲ ನಡೆಯಲಿವೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಋತುವಿನ ಕಂಬಳದ ವೇಳಾಪಟ್ಟಿ ಸಿದ್ಧಪಡಿಸಲು ಇಲ್ಲಿ ಶನಿವಾರ ಸಭೆ ಸೇರಿದ ಜಿಲ್ಲಾ ಕಂಬಳ ಸಮಿತಿ ಈ ನಿರ್ಧಾರ ಕೈಗೊಂಡಿದ್ದು ಬೆಂಗಳೂರಿನಲ್ಲಿ ಮೊದಲ ಕಂಬಳ ಅಕ್ಟೋಬರ್ 26ರಂದು ಮತ್ತು ಕೊನೆಯ ಕಂಬಳವನ್ನು ಮುಂದಿನ ವರ್ಷದ ಏಪ್ರಿಲ್‌ 19ರಂದು ಶಿವಮೊಗ್ಗದಲ್ಲಿ ಆಯೋಜಿಸಲು ತೀರ್ಮಾನಿಸಿದೆ.

ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ‘ಈ ವರ್ಷ ಒಟ್ಟು 26 ಕಂಬಳಗಳನ್ನು ನಡೆಸಲಾಗುವುದು, ಮಂಗಳೂರಿನ ಪಿಲಿಕುಳ ಕಂಬಳಕ್ಕೆ ಮತ್ತೆ ಚಾಲನೆ ನೀಡಲಾಗುವುದು’ ಎಂದರು.

ಕಂಬಳಗಳು ಈಚೆಗೆ ಶಿಸ್ತುಬದ್ಧವಾಗಿ ನಡೆಯುತ್ತಿವೆ. ಕರಾವಳಿಯ ಈ ಕ್ರೀಡೆಯನ್ನು ಹೆಚ್ಚು ಆಕರ್ಷಕವಾಗಿಸಲು ನಿಯಮಗಳನ್ನು ಬಿಗಿ ಮಾಡಲಾಗಿದೆ. ಆಯಾ ಕಂಬಳ ಸಮಿತಿಗಳು ಕಡ್ಡಾಯವಾಗಿ ಪಾಲಿಸಬೇಕಾಗಿರುವ ನಿಯಮಾವಳಿಗಳನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುವುದು. ಕಂಬಳ ವಿಳಂಬವಾಗುವುದನ್ನು ತಡೆಯುವ ರೂಪುರೇಷೆಗೆ ಅದು ನೆರವಾಗಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಪಿಲಿಕುಳ ಕಂಬಳದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಆ ಕಂಬಳದ ಸಂದರ್ಭದಲ್ಲಿ ನಾಲ್ಕು ದಿನ ‘ತುಳುನಾಡ ವೈಭವ’ ಕಾರ್ಯಕ್ರಮ ನಡೆಯಲಿದೆ. ಕಂಬಳಕ್ಕೆ ಸಂಬಂಧಿಸಿದ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದ ಅವರು ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿಸುವ ಯೋಜನೆ ಇದೆ, ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೆ ತಲಾ ₹ 5 ಲಕ್ಷ ಅನುದಾನ ನೀಡುವಂತೆ ಸರ್ಕಾರವನ್ನು ಕೋರಲಾಗಿದೆ ಎಂದರು.

ಸಮಿತಿಯ ಗೌರವಾಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾದ ನವೀನಚಂದ್ರ ಆಳ್ವ, ಶ್ರೀಕಾಂತ ಭಟ್, ಸಂದೀಪ ಶೆಟ್ಟಿ, ಪ್ರಶಾಂತ ಕಾಜವ, ರಶ್ಮಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು, ಕೋಶಾಧಿಕಾರಿ ಚಂದ್ರಹಾಸ ಸನಿಲ್, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ ಇದ್ದರು.

Previous Post

ಪ್ಯಾರಿಸ್ ಒಲಿಂಪಿಕ್ಸ್​ 2024 :ಕ್ರೀಡಾಕೂಟಕ್ಕೆ ಇಂದು ತೆರೆ ..!!

Next Post

ಆಗಸ್ಟ್‌ 13 ರಂದು ಮಾಹೆಯಲ್ಲಿ ‘ಆಟಿದ ತುಳು ಪರ್ಬ’ :ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳ ಆಯೋಜನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗಸ್ಟ್‌ 13 ರಂದು ಮಾಹೆಯಲ್ಲಿ ‘ಆಟಿದ ತುಳು ಪರ್ಬ’ :ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳ ಆಯೋಜನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News