Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು – ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ..!!

Dhrishya News by Dhrishya News
11/08/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ:ಆಗಸ್ಟ್ 11:ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಅವರು ಭಾನುವಾರ ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕ್ರೈಸ್ತ ಸಮುದಾಯದ ಸೇವೆಯನ್ನು ಎಲ್ಲಾ ವ್ಯಕ್ತಿಗಳು ಗುರುತಿಸುತ್ತಾರೆ. ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಹಾಗೂ ಸಾಮಾಜಿಕ ಸೇವೆ ಸಂಘಟನೆಗಳಲ್ಲಿ ಚುನಾಯಿತರಾದವರು ದೀನದಲಿತರ ಹಿಂದುಳಿದವರ ನೋವುಗಳಿಗೆ ಸ್ಪಂದಿಸಿ ಅವರ ಕೆಲಸವನ್ನು ಮಾಡಿಕೊಟ್ಟಾಗ ಅದಕ್ಕಿಂದ ದೊಡ್ಡ ಬಹುಮಾನ ಇನ್ನೊಂದಿಲ್ಲ. ಈ ಮೂಲಕ ಸಮಾಜದಲ್ಲಿ ಇನ್ನಷ್ಟು ಸೇವೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಸಮಾಜದ ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿದಾಗ ಮಾತ್ರ ಸೇವೆಗೆ ನಿಜವಾದ ಅರ್ಥಲಭಿಸುತ್ತದೆ. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಶಿಕ್ಷಣದ ಮೂಲಕ ಸಜ್ಜನ ನಾಗರಿಕನ್ನಾಗಿ ಮಾಡುವ ಕೆಲಸ ಸಮುದಾಯದಿಂದ ನಡೆಯುತ್ತಿದ್ದು ಈ ಕಾರ್ಯ ಇನ್ನಷ್ಟು ಮುಂದುವರೆಯಲಿ ಎಂದರು.

ವಿಧಾನಪರಿಷತ್ ಸದಸ್ಯ ಎಸ್ ಎಲ್ ಭೋಜೆಗೌಡ ಮಾತನಾಡಿ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಆರೋಗ್ಯದ ಸೇವೆಯನ್ನು ನೀಡುವ ಮೂಲಕ ಸ್ವಾಸ್ಥ್ಯಯುತ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಿರುವ ಕ್ರೈಸ್ತ ಸಮುದಾಯದ ಕಾರ್ಯ ಶ್ಲಾಘನೀಯವಾಗಿದೆ. ಶಿಕ್ಷಣ ಸಂಸ್ಥೆಗಳ ಕುರಿತು ಇರುವ ಯಾವುದೇ ರೀತಿಯ ಕೆಲಸಗಳನ್ನು ಮಾಡಿಕೊಡುವ ಕೆಲಸದಲ್ಲಿ ತಾನು ಪ್ರಾಮಾಣಿಕವಾಗಿ ಮಾಡಲು ಸಿದ್ದನಿರುವುದಾಗಿ ಹೇಳಿದರು.

ಇದೇ ವೇಳೆ ನೂತನವಾಗಿ ಚುನಾಯಿತರಾದ ಜನಪ್ರತಿನಿಧಿಗಳಿಗೆ, ಹಾಗೂ ಸಾಮಾಜಿಕ ಸೇವಾ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಚುನಾಯಿತರಾದವರನ್ನು ಕೂಡ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಸಂತೋಷ್ ಕರ್ನೇಲಿಯೊ ವಹಿಸಿದ್ದರು.

ಮೈಸೂರು ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಇದರ ಮಾಜಿ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೊ ಪ್ರಾಸ್ತಾವಿಕ ಮಾತುಗಳನ್ನಾಡಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜೆರಾಲ್ಡ್ ಫೆರ್ನಾಂಡಿಸ್ ಅಭಿನಂದನಾ ನುಡಿಗಳನ್ನಾಡಿದರು.

ಮೈಸೂರು ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಇದರ ಮಾಜಿ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೊ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜೆರಾಲ್ಡ್ ಫೆರ್ನಾಂಡಿಸ್, ಕಥೊಲಿಕ್ ಸಭಾ ನಿಕಟಪೂರ್ವ ಅಧ್ಯಕ್ಷರಾದ ಮೇರಿ ಡಿ’ಸೋಜ, ಪ್ರಧಾನ ಕಾರ್ಯದರ್ಶಿ ಒಲಿವಿಯಾ ಜೆ. ಡಿಮೆಲ್ಲೊ ಉಪಸ್ಥಿತರಿದ್ದರು.

ಕೇಂದ್ರಿಯಸಮಿತಿಯ ರಾಜಕೀಯ ಸಂಚಾಲಕರಾದ ಎಲ್ರೋಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿ, ಎಡ್ವರ್ಡ್ ಲಾರ್ಸನ್ ಕಾರ್ಯಕ್ರಮ ನಿರೂಪಿಸಿದರು.

ಬಾಕ್ಸ್ 

ಸರಕಾರಗಳು ಇಂದು ಮಕ್ಕಳ ಕಲಿಕೆಗಾಗಿ ಹಾಲು, ಮೊಟ್ಟೆ, ಪುಸ್ತಕ, ಸಮವಸ್ತ್ರ ಎಲ್ಲವನ್ನೂ ಒದಗಿಸುತ್ತದೆ ಆದರೆ ಅದೇ ಮಕ್ಕಳ ಭೋದನೆಗೆ ಅಗತ್ಯವಿರುವ ಶಿಕ್ಷಕರನ್ನು ನೇಮಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತವೆ. ಮಕ್ಕಳಿಗೆ ಎಲ್ಲಾ ಸೌಲಭ್ಯಗಳ ಜೊತೆಯಲ್ಲಿ ಉತ್ತಮ ಶಿಕ್ಷಕರು ಇಲ್ಲದೆ ಹೋದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಅಲ್ಲದೆ ಸರಕಾರಗಳು ನಿಯಮವಳಿಗಳ ಹೆಸರಿನಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮೇಲೆ ಹೇರಿಕೆ ಮಾಡುವುದರ ಕುರಿತು ಕೂಡ ಜನಪ್ರತಿನಿಧಿಗಳು ಸರಕಾರದ ಗಮನ ಸೆಳೆಯಬೇಕು ಎಂದು ಧರ್ಮಾಧ್ಯಕ್ಷರು ಕಿವಿ ಮಾತು ಹೇಳಿದರು.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವರಾದ ಶ್ರೀ ಸುರೇಶ್ ಪ್ರಭು ದಂಪತಿ ಭೇಟಿ..!!

Next Post

ಮಧ್ಯಪ್ರದೇಶ :ತರಬೇತಿ ವಿಮಾನ ಪತನ – ಇಬ್ಬರು ಪೈಲಟ್ ಗಳಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಧ್ಯಪ್ರದೇಶ :ತರಬೇತಿ ವಿಮಾನ ಪತನ - ಇಬ್ಬರು ಪೈಲಟ್ ಗಳಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News