Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಗಸ್ಟ್ 18 ರಂದು ರೂಪಕಲಾ ಆಳ್ವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ..!!

Dhrishya News by Dhrishya News
13/08/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಆಗಸ್ಟ್ 13: ಉಡುಪಿ ತುಳುಕೂಟವು ನೀಡುವ 29ನೇ ವರ್ಷದ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಕಾದಂಬರಿ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವು ಆ. 18 ರಂದು, ಸಂಜೆ 4 ಗಂಟೆಗೆ ಯಕ್ಷಗಾನ ಕಲಾರಂಗದ ನೂತನ ಸಭಾಂಗಣ ಐವೈಸಿಯಲ್ಲಿ ನಡೆಯಲಿದೆ.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟದ ಜಯಕರ್ ಶೆಟ್ಟಿ ಇಂದ್ರಾಳಿ ವಹಿಸಲಿದ್ದು, ಅತಿಥಿಗಳಾಗಿ ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ, ಮಂಗಳೂರಿನ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಉದ್ಯಮಿ ವೈ. ಸುಧೀರ್ ಕುಮಾರ್ ಮತ್ತು ಸಮಾಜಸೇವಕ ಯು. ವಿಶ್ವನಾಥ ಶೆಣೈ ಭಾಗವಹಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತ ಕಾದಂಬರಿಯನ್ನು ಅಮಿತಾಂಜಲಿ ಕಿರಣ್ ಅವರು ಪರಿಚಯಿಸಲಿದ್ದಾರೆ.

 ಇದೇ ಸಂದರ್ಭದಲ್ಲಿ, ತುಳುಭಾಷೆಯನ್ನು ತೃತೀಯ ಐಚ್ಛಿಕ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಈ ಬಾರಿಯ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಅಂಕ ಪಡೆದ ಜಿಲ್ಲೆಯ 17 ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ ಎಂದು ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಹಾಗೂ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಸಂಚಾಲಕಿ ತಾರಾ ಉಮೇಶ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  29 ನೇ ವರ್ಷದ ಪ್ರಶಸ್ತಿ

 ತುಳು ಭಾಷೆ, ಸಂಸ್ಕೃತಿ, ಸಾಹಿತ್ಯಕ್ಕಾಗಿ ಅಪಾರ ಸೇವೆ ಸಲ್ಲಿಸಿದ, ತುಳು ಚಳುವಳಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡ, ಹಿರಿಯ ಸಾಹಿತ್ಯ ಚೇತನ ದಿ. ಶ್ರೀನಿವಾಸ ಉಪಾಧ್ಯಾಯ ಪಣಿಯಾಡಿ ಅವರ ಸ್ಮರಣಾರ್ಥ ತುಳುಕೂಟವು ತುಳುನಾಡಿನ ಸಾಂಸ್ಕೃತಿಕ, ಸಾಮಾಜಿಕ ಬದುಕಿನ ಮೇಲೆ ಬೆಳಕು ಚೆಲ್ಲುವ ತುಳು ಕಾದಂಬರಿಗೆ ಕಳೆದ 29 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿಯು 10 ಸಾವಿರ ರು. ನಗದು ಬಹುಮಾನವನ್ನು ಒಳಗೊಂಡಿದೆ.

 ಈ ಬಾರಿ ಖ್ಯಾತ ವಿಮರ್ಶಕ ಪ್ರೊ.ಮುರಳಿಧರ ಉಪಾಧ್ಯಾಯ ಹಿರಿಯಡ್ಕ, ಸಾಹಿತಿ ಪದ್ಮನಾಭ ರೈ ಪುತ್ತಿಗೆ, ಕಲಾವಿದ ಸಕು ಪಂಗಾಳ ಅವರು ತೀರ್ಪುಗಾರರಾಗಿ ಪ್ರಶಸ್ತಿಗೆ ಕಾದಂಬರಿಯನ್ನು ಆಯ್ಕೆ ಮಾಡಿದ್ದಾರೆ.

 ಸಾಹಿತಿ ರೂಪಕಲಾ ಆಳ್ವ

ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಸಾಹಿತ್ಯ ರಚಿಸುತ್ತಿರುವ ರೂಪಕಲಾ ಅವರು ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಸಂಶೋದಕಿಯಾಗಿದ್ದಾರೆ. ಮೇರು ನಾಟಿ, ಜೋಳಿಗೆಯಿಂದ ಹೊಳಿಗೆ, ಪಡಿಪ್ಪಿರೆ ಇತ್ಯಾದಿ ಕೃತಿಗಳನ್ನು ರಚಿಸಿರುವ ಅವರಿಗೆ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ, ಸಾರಾ ಅಬೂಬಕ್ಕರ್ ಸಾಹಿತ್ಯ ಪ್ರಶಸ್ತಿಗಳು ಲಭಿಸಿವೆ.

ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ, ಮಂಗಳೂರು ನಗರ ಗ್ರಂಥಾಲಯದ ಸಲಹಾ ಪ್ರಾಧಿಕಾರದ ಸದಸ್ಯರಾಗಿ, ಲೇಖಕಿಯರು ವಾಚಕಿಯರು ಸಂಘ ಇತ್ಯಾಗಿ ಅನೇಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Previous Post

ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯ..!!

Next Post

ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಹಾಗೂ ಸಿಐಟಿಯು ಬ್ರಹ್ಮಾವರ ವಲಯ ಸಮಿತಿ ನೇತೃತ್ವದಲ್ಲಿ ತುಂಗಾ ನಾರಾಯಣ ಸಂಕೀರ್ಣದಲ್ಲಿ ನೂತನ ಗ್ರಂಥಾಲಯದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಹಾಗೂ ಸಿಐಟಿಯು ಬ್ರಹ್ಮಾವರ ವಲಯ ಸಮಿತಿ ನೇತೃತ್ವದಲ್ಲಿ ತುಂಗಾ ನಾರಾಯಣ ಸಂಕೀರ್ಣದಲ್ಲಿ ನೂತನ ಗ್ರಂಥಾಲಯದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News