Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ ..!!

Dhrishya News by Dhrishya News
16/08/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ನವದೆಹಲಿ : ಆಗಸ್ಟ್ 16:ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಆರನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಶುಕ್ರವಾರ) ಗೌರವ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ರಕ್ಷಣಾ ಸಚಿವ ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ‌ ಸಲ್ಲಿಸಿದ್ದರು.

‘ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅಸಂಖ್ಯಾತ ಜನರು ವಾಜಪೇಯಿ ಅವರನ್ನು ಸ್ಮರಿಸುತ್ತಿದ್ದಾರೆ. ಅವರು ಜನರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಆಶಯಗಳನ್ನು ಪೂರೈಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ 2018ರ ಆಗಸ್ಟ್ 16ರಂದು ವಿಧಿವಶರಾಗಿದ್ದರು.

Previous Post

ನದಿಯ ಮದ್ಯೆ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನದಿಗೆ ಸೇತುವೆ ರಚಿಸಿ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರ ಪ್ರೇಮ ಮೆರೆದ ಸಾಲಿಗ್ರಾಮ ಕಯಾಕಿಂಗ್ ತಂಡ..!!

Next Post

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಾಳೆ (ಆಗಸ್ಟ್ 17) ದೇಶಾದ್ಯಂತ ವೈದ್ಯರ ಮುಷ್ಕರ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಾಳೆ (ಆಗಸ್ಟ್ 17) ದೇಶಾದ್ಯಂತ ವೈದ್ಯರ ಮುಷ್ಕರ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News