Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು  ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ..!!

Dhrishya News by Dhrishya News
23/08/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ:ಆಗಸ್ಟ್ 23:ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ತಾಹೋರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ ಸಂಚಾಲಕ ಪ್ರೊ. ಫಣಿರಾಜ್ ಮಾತನಾಡಿ, ” ಈ ಪ್ರತಿಭಟನೆಯು ಆಡಳಿತ ಸರ್ಕಾರದ ಪರವಾಗಿ ಅಲ್ಲ. ಬದಲಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರವಾಗಿಸಲು ನಡೆಯುತ್ತಿರುವ ಹುನ್ನಾರದ ವಿರುದ್ಧವಾಗಿದೆ” ಎಂದರು.

“2020 ರಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯೇ ಆಗಿರಲಿಲ್ಲ. ಅಧಿಕಾರದಲ್ಲಿ ಇಲ್ಲದಾಗ ಹಗರಣ ನಡೆದಿದೆ ಎನ್ನುವುದನ್ನು ರಾಜ್ಯಪಾಲರು ನಂಬುವುದು ಹಾಸ್ಯಾಸ್ಪದ” ಎಂದು ಹೇಳಿದರು.

ವಿರೋಧ ಪಕ್ಷದಲ್ಲಿರುವ ಬಿಜೆಪಿಯ ಹಲವರು ಮಂದಿ ಅಂದು ಆಡಳಿತ ಪಕ್ಷದ ಭಾಗವಾಗಿದ್ದರು.

ಜಿ.ಟಿ ದೇವೇಗೌಡ ಆ ಸಂದರ್ಭದಲ್ಲಿ ಮುಡಾದ ಮುಖ್ಯಸ್ಥರಾಗಿದ್ದರು. ಆದರೆ ಪ್ರಸ್ತುತ ಯಾವುದೇ ಆಧಾರ ಇಲ್ಲದೇ ವಿರೋಧ ಪಕ್ಷ ಇದರ ಕುರಿತು ಆರೋಪ ಮಾಡುತ್ತಿದೆ ಎಂದು ಹೇಳಿದರು.

ಖಾಸಗಿ ವ್ಯಕ್ತಿಗಳು ನಮಆಗಸ್ಟ್ 25 ರಂದು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್’ಗೆ ಮನವಿ ಕೊಡುತ್ತಾರೆ. ಒಂದೇ ಒಂದು ದಿನದಲ್ಲಿ ಪತ್ರ ಬರೆದು ಮಂತ್ರಿ ಮಂಡಲಕ್ಕೆ ಅವಕಾಶ ಕೊಡಬಹುದೇ ಎಂದು ಕೇಳಿದಾಗ ಕೊಡಬಾರದು ಎಂಬ ನಿರ್ಣಯ ತಿಳಿಸುತ್ತಾರೆ. ಅದರ ಹೊರತಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ. ಈ ಹಿಂದೆ ಕೂಡ ರಾಜ್ಯಪಾಲರು ವಿವೇಚನೆ ಬಳಸಿ ನಿರ್ಧಾರ ಕೈಗೊಂಡ ಉದಾಹರಣೆಗಳಿವೆ. ಆದರೆ ಸ್ಪಷ್ಟವಾದ ಆಧಾರ, ಕಾನೂನಾತ್ಮಕ ಪ್ರಕ್ರಿಯೆ ಬಳಸಿ ನಿರ್ಣಯ ಕೈಗೊಳ್ಳುತ್ತಿದ್ದರು. ಆದರೆ ಈ ಪ್ರಕರಣದಲ್ಲಿ ಹಾಗೆ ನಡೆದಿಲ್ಲ ಎಂದರು

 

ದೂರು ನೀಡಿದವರು ಪ್ರಾಧಿಕಾರಕ್ಕೆ ದೂರು ನೀಡದೆ ರಾಜ್ಯಪಾಲರಿಗೆ ನೇರ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದೆ‌‌ ಯಾವ ಪ್ರಾಧಿಕಾರ ಕೂಡ ಈ ಪ್ರಕರಣದ ತನಿಖೆ ನಡೆಸಿಲ್ಲ. ವರದಿ ಸಲ್ಲಿಸಿ ಪ್ರಾಸಿಕ್ಯೂಷನ್ ಗೆ ಕೇಳಿಲ್ಲ ಅದರ ಹೊರತಾಗಿ ರಾಜ್ಯಪಾಲರು ಕೇವಲ ಖಾಸಗಿ ವ್ಯಕ್ತಿಗಳ ದೂರಿನ ಆಧಾರದಲ್ಲಿ ತರಾತುರಿಯಲ್ಲಿ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಜನರಿಂದ ಆಯ್ಕೆಯಾದ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಅಪರೇಷನ್ ಕಮಲದಿಂದ ಅಧಿಕಾರಕ್ಕೆ ಬಂದವರು ಯಾವ ಕೃತ್ಯಕ್ಕೂ ಹೇಸುವವರಲ್ಲ..ಅದರ ಮುಂದುವರಿದ ಭಾಗವಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ನೋಡಬಹುದಾಗಿದೆ. ಇಂತಹ ನಿರ್ಣಯಗಳನ್ನು ಸಂವಿಧಾನ ಸ್ಥಾನದಲ್ಲಿ ಕುಳಿತು ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಒಳ್ಳೆಯದಲ್ಲ.ಯಾವ ಸರಕಾರ, ವ್ಯಕ್ತಿ ಇದ್ದರೂ‌ಈ ನಡೆ ಸರಿಯಿಲ್ಲ ಇದನ್ನು ಖಂಡಿಸಬೇಕು ಎಂದರು.

ಪ್ರತಿಭಟನೆಯನ್ನುದ್ದೇಶಿಸಿ ಫಾ.ವಿಲಿಯಂ ಮಾರ್ಟಿಸ್, ಮಂಜುನಾಥ್ ಗಿಳಿಯಾರ್ ಬಾಲಕೃಷ್ಣ ಶೆಟ್ಟಿ, ಇದ್ರಿಸ್ ಹೂಡೆ ಸೇರಿದಂತೆ ಹಲವಾರು ಮಂದಿ ಮಾತನಾಡಿದರು.

ನಂತರ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೆರೋನಿಕಾ ಕರ್ನೆಲಿಯೋ, ಯಾಸೀನ್ ಮಲ್ಪೆ, ಸುಂದರ್ ಮಾಸ್ತರ್, ಪ್ರಸಾದ್ ಕಾಂಚನ್, ಪ್ರಶಾಂತ್ ಜತ್ತನ್,ಅಝೀಜ್ ಉದ್ಯಾವರ, ಅಶ್ಫಾಕ್ ಕಾರ್ಕಳ, ಇಸ್ಮಾಯಿಲ್ ಕಿದೆವರ್, ಜಾಬೀರ್ ಖತೀಬ್ ಮುಹಮ್ಮದ್ ಗೌಸ್ ಕಾರ್ಕಳ, ಹುಸೇನ್ ಕೋಡಿಬೆಂಗ್ರೆ ಮತ್ತು ಮಂಜುನಾಥ್ ಗಿಳಿಯಾರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು

Previous Post

ಉಡುಪಿ :ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ ಜೊತೆಗೆ 5 ಮೊಬೈಲ್, 13 ಲಕ್ಷ  ನಗದು ವಶಕ್ಕೆ ಪಡೆದ ಪೊಲೀಸರು.!!

Next Post

ಕೋಟ ನವವಿವಾಹಿತೆ ಹತ್ಯೆ : ಕೊಲೆ ಆರೋಪಿ ಪತಿಯನ್ನು ವಶಕ್ಕೆ ಪಡೆದ ಪೊಲೀಸರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಟ ನವವಿವಾಹಿತೆ ಹತ್ಯೆ : ಕೊಲೆ ಆರೋಪಿ ಪತಿಯನ್ನು ವಶಕ್ಕೆ ಪಡೆದ ಪೊಲೀಸರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026
imunify-bot-check