Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಪ್ರಯುಕ್ತ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ “ಬಾಪೂಜಿ ಪ್ರಬಂಧ ಸ್ಪರ್ಧೆ”..!!

Dhrishya News by Dhrishya News
24/08/2024
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಬೆಂಗಳೂರು : ಆಗಸ್ಟ್ 24: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ

ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ 

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ

ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ 

1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ 2 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು

– ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. – ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. – ಆಕರವಾಗಿ ಬಳಸಿದ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. – ಪ್ರಬಂಧ ಬರೆಯುವ ಸ್ಥಳದಲ್ಲಿ ಪರಾಮರ್ಶನ/ಆಧಾರ ಗ್ರಂಥಗಳು/ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. – ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. – ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. – ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

Previous Post

ಕಾರ್ಕಳ : ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ..!!

Next Post

ಸಂತೆಕಟ್ಟೆ:ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ವಿರುದ್ಧದ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂತೆಕಟ್ಟೆ:ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ವಿರುದ್ಧದ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved