Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ : she box ಪೋರ್ಟಲ್ ಆರಂಭ..!!

Dhrishya News by Dhrishya News
31/08/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ : ಆಗಸ್ಟ್ಇ 31 :ತ್ತೀಚಿನ ದಿನಗಳಲ್ಲಿ ದೇಶದ ವಿವಿಧೆಡೆ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳು  ಹೆಚ್ಚುತ್ತಿರುವ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಅತ್ಯಂತ ಮಹತ್ವದ ಕ್ರಮಕ್ಕೆ ಚಾಲನೆ ನೀಡಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಮತ್ತು ಮೇಲ್ವಿಚಾರಣೆಗಾಗಿ ಕೇಂದ್ರ ಸರಕಾರ ಶಿ- ಬಾಕ್ಸ್‌ ಪೋರ್ಟಲ್‌ ಅನ್ನು ಆರಂಭಿಸಿದೆ. ಕೇಂದ್ರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಈ ಪೋರ್ಟಲ್‌ ರೂಪಿಸಿದ್ದು, ಇನ್ನು ಮುಂದೆ ಮಹಿಳಾ ಉದ್ಯೋಗಿಗಳು ತಾವು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯಕ್ಕೀಡಾದಲ್ಲಿ ಈ ಪೋರ್ಟಲ್‌ನ ಮೂಲಕ ದೂರನ್ನು ದಾಖಲಿಸಬಹುದಾಗಿದೆ.

ಇಂತಹ ದೂರುಗಳ ಬಗೆಗೆ ಸಂಬಂಧಿತ ಅಧಿಕಾರಿಗಳು ತತ್‌ಕ್ಷಣ ಸ್ಪಂದಿಸುವುದರ ಜತೆಯಲ್ಲಿ ದೂರುಗಳ ವಿಲೇವಾರಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳ ಮೇಲ್ವಿಚಾರಣೆಗೆ ನೆರವಾಗಲಿದೆ.

ಮಹಿಳಾ ಉದ್ಯೋಗಿಗಳಲ್ಲಿ ಧೈರ್ಯ ತುಂಬಿ, ಸುರಕ್ಷೆಯ ಮನೋಭಾವವನ್ನು ಮೂಡಿಸುವುದರ ಜತೆಯಲ್ಲಿ ಕೆಲಸದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಲು ಪೂರಕವಾದ ಉತ್ತಮ ವಾತಾವರಣವನ್ನು ರೂಪಿಸುವ ನಿಟ್ಟಿನಲ್ಲಿ ಈ ಪೋರ್ಟಲ್‌ ಸಹಕಾರಿಯಾಗಲಿದೆ. ಸಂತ್ರಸ್ತರಿಗೆ ಕ್ಷಿಪ್ರವಾಗಿ ದೂರು ದಾಖಲಿಸಲು ಮತ್ತು ಇದರಿಂದ ತಪ್ಪಿತಸ್ಥರನ್ನು ತತ್‌ಕ್ಷಣ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯಕವಾಗಲಿದೆ. ಇಂತಹ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಈ ಪೋರ್ಟಲ್‌ ಪರಿಣಾಮಕಾರಿಯಾಗಿದೆ. ದೂರುದಾರರು ಮತ್ತು ಅವರ ಬಗೆಗಿನ ಎಲ್ಲ ಮಾಹಿತಿಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ಸರಕಾರ ಸ್ಪಷ್ಟಪಡಿಸಿದ್ದು ಈ ಬಗ್ಗೆ ಯಾರಿಗೂ ಯಾವುದೇ ತೆರನಾದ ಸಂದೇಹ ಬೇಡ ಎಂದು ಅಭಯ ನೀಡಿದೆ.

ಕೇಂದ್ರ ಸರಕಾರ ಶಿ-ಬಾಕ್ಸ್‌ ಪೋರ್ಟಲ್‌ಗೆ ಚಾಲನೆ ನೀಡುವ ಮೂಲಕ ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಿದೆ. ಉದ್ಯೋಗ ಸ್ಥಳ ಮಾತ್ರವಲ್ಲದೆ ಒಟ್ಟಾರೆ ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷೆಯ ಬಗೆಗೆ ಯಾವುದೇ ಅನುಮಾನ ಕಾಡದಿರುವಂತಹ ವಾತಾವರಣ ರೂಪಿಸುವ ಕೆಲಸವಾಗಬೇಕು. ಕೇವಲ ಸರಕಾರದ ಉಪಕ್ರಮ, ಕಾನೂನುಗಳ ಜಾರಿ ಮತ್ತಿತರ ಕ್ರಮಗಳಿಂದ ಇಂತಹ ವಾತಾವರಣ ರೂಪಿಸುವುದು ಕಷ್ಟಸಾಧ್ಯವಾಗಿದ್ದು, ಇಡೀ ಸಮಾಜ ಒಗ್ಗೂಡಿ ಈ ಕಾರ್ಯದಲ್ಲಿ ಕೈಜೋಡಿಸಬೇಕು.

Previous Post

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ..!!

Next Post

ಮಾಹೆಯ ಎಂಕಾಪ್ಸ್‌ನಿಂದ 3 ನೆಯ ರಾಷ್ಟ್ರೀಯ ಮಣಿಪಾಲ್‌ ಫಾರ್ಮಾಸ್ಯುಟಿಕ್ಸ್‌ ಸಮಾವೇಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಎಂಕಾಪ್ಸ್‌ನಿಂದ 3 ನೆಯ ರಾಷ್ಟ್ರೀಯ ಮಣಿಪಾಲ್‌ ಫಾರ್ಮಾಸ್ಯುಟಿಕ್ಸ್‌ ಸಮಾವೇಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check