Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆ…!!

Dhrishya News by Dhrishya News
04/09/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 04: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಉಡುಪಿ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳುಇಂದು ಸೆಪ್ಟಂಬರ್ 4ರಂದು ಬೆಳಗ್ಗೆ 9 ಗಂಟೆಗೆ  ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಭಾಗವಹಿಸಲಿದ್ದಾರೆ.

ಹಿರಿಯ ನಾಗರಿಕರ ಕ್ರೀಡಾ ಸ್ಪರ್ಧೆಗಳ ವಿವರ: 60ರಿಂದ 70 ವರ್ಷ ವಯೋಮಿತಿಯ ಪುರುಷ ಮತ್ತು ಮಳೆಯರಿಗೆ ಮ್ಯೂಸಿಕಲ್ ಚೇರ್ ಸ್ಪರ್ಧೆ, 60ರಿಂದ 69 ವರ್ಷ ಮತ್ತು 70 ವರ್ಷ ಹಾಗೂ ಮೇಲ್ಪಟ್ಟ ವಯೋಮಿತಿಯ ಪುರುಷರು ಮತ್ತು ಮಹಿಳೆಯರಿಗೆ ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳು ನಡೆಯಲಿವೆ. 

ಹಿರಿಯ ನಾಗರಿಕರ ಸಾಂಸ್ಕೃತಿಕ ಸ್ಪರ್ಧೆಗಳ ವಿವರ: 60ರಿಂದ 69 ವರ್ಷ ಮತ್ತು 70 ವರ್ಷ ಹಾಗೂ ಮೇಲ್ಪಟ್ಟ ವಯೋಮಿತಿಯ ಪುರುಷರು ಮತ್ತು ಮಹಿಳೆಯರಿಗೆ ಗಾಯನ ಸ್ಪರ್ಧೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆಯಲಿವೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ತಮ್ಮ ವಯಸ್ಸಿನ ದಾಖಲೆಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Previous Post

ಮಣಿಪಾಲ:ಅಕ್ರಮವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಿಸಿ ಕಿರುಕುಳ ಪ್ರಕರಣ ದಾಖಲು..!

Next Post

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved