ಹಾಸನ:ಸೆಪ್ಟೆಂಬರ್ 08:ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ದಶಕಗಳ ಹಿಂದೆ ಕರಾವಳಿ ಮೂಲದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ಯೋಜನೆಗೆ ಬುನಾದಿ ಹಾಕಿದ್ದರು. ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ಅವರು ಆ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಾಗಿ ವಾಗ್ಧಾನ ನೀಡಿದ್ದರು. ಈಗ ಅದೇ ಕಾಂಗ್ರೆಸ್ ಅವಧಿಯಲ್ಲಿ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ದೊರಕಿದೆ