ಉಡುಪಿ :ಸೆಪ್ಟೆಂಬರ್ 08:ಹೆಚ್ಚಳ ಮಾಡಿದ್ದ ಕುಡಿಯುವ ನೀರಿನ ದರವನ್ನು ಇಳಿಕೆ ಮಾಡಲು ಶುಕ್ರವಾರ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು
ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯರಾದ ಸುಂದರ ಕಲ್ಮಾಡಿ, ಸುಮಿತ್ರಾ ಆರ್.ನಾಯಕ್ ಅವರು, ನೀರಿನ ದರ ಏರಿಕೆಯಿಂದ ಜನರಿಗೆ ತೊಂದರೆಯಾಗಿರುವುದನ್ನು ಸಭೆಯ ಗಮನಕ್ಕೆ ತಂದರು.
ಸಾಮಾನ್ಯ ಸಭೆಯಲ್ಲಿ ಸದಸ್ಯೆ ಸುಮಿತ್ರಾ ಆರ್. ನಾಯಕ್ ಮಾತನಾಡಿದರು-ಪ್ರಭಾಕರ ಪೂಜಾರಿ ನಗರಸಭೆ ಅಧ್ಯಕ್ಷಉಳಿದಿರುವ 14 ತಿಂಗಳಲ್ಲಿ ಆದಷ್ಟು ಶ್ರಮಪಟ್ಟು ಉಡುಪಿ ನಗರಕ್ಕೆ ಒಳ್ಳೆಯ ಹೆಸರು ಬರುವ ಹಾಗೆ ಪ್ರಾಮಾಣಿಕವಾಗಿ ತಂಡವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು
ಸಭೆಯಲ್ಲಿ 11 ಮಂದಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸದಸ್ಯರು ಉಪಸ್ಥಿತರಿದ್ದರು.