ಬಂಟ್ವಾಳ :ಸೆಪ್ಟೆಂಬರ್ 08:ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪೆರ್ನೆ ಸಮೀಪದ ಒಡ್ಗದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವ ದಂಪತಿಗಳ ಆಲ್ಲೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.