Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

ಪ್ರಶಸ್ತಿಯ ಹಿಂದೆ ಹೋಗಬಾರದು- ಪ್ರವೀಣ್ ಕುಮಾರ್ ಶೆಟ್ಟಿ 

Dhrishya News by Dhrishya News
10/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಹೆಬ್ರಿ :ಸೆಪ್ಟೆಂಬರ್ 10:ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ.ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ ಬದುಕು ಶಿಕ್ಷಣ ನೀಡುವ ಮತ್ತು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಪ್ರಯತ್ನವನ್ನು ಶಿಕ್ಷಣದ ಜೊತೆ ಮಾಡಿದಾಗ ನಮ್ಮ ಬದುಕು ಸುಂದರವಾಗುತ್ತದೆ ಎಂದು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಾಡಿನ ಹೆಸರಾಂತ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡಮಾಡುವ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳ ಬದುಕಿನ ಆಶಾಕಿರಣ – ಸುನೀಲ್ ಕುಮಾರ್

ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವುದರ ಜತೆಗೆ ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣವಾಗಿದ್ದಾರೆ ಎಂದು ಚಾರ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಸುನೀಲ್ ಕುಮಾರ್ ಹೇಳಿದರು.

 ಸಮಾಜಮುಖಿ ಕಾರ್ಯ ಶ್ಲಾಘನೀಯ – ನಿತ್ಯಾನಂದ ಶೆಟ್ಟಿ 

 ಕೇವಲ ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನು ಗುರುತಿಸುವ ಚಾಣಕ್ಯ ಸಂಸ್ಥೆಯ ಸಮಾಜ ಮುಖಿ ಚಿಂತನೆ ಶ್ಲಾಘನೀಯ ಎಂದು ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಹೇಳಿದರು.

 ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಅವರ ಪುತ್ರ ಸನತ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೇ ವೀಣಾ ಯು.ಶೆಟ್ಟಿ ವಹಿಸಿದ್ದರು.ಇದೇ ಸಂದರ್ಭದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ ಹಾಗು ಜೇಸಿಐ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಸಮಾರಂಭದಲ್ಲಿ ಚಾರ ಜವಾಹರ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲ ವಿ.ಕೆ. ಮನೋಹರ್, ನೇತಾಜಿ ಫ್ರೆಂಡ್ಸ್ ಕ್ಲಬ್‌ಮುದ್ರಾಡಿ ಇದರ ಅಧ್ಯಕ್ಷ ಸಂತೋಷ್ ಪೂಜಾರಿ ಬಲ್ಲಾಡಿ,ಜೇಸಿಐ ಅಧ್ಯಕ್ಷೆ ರಕ್ಷಿತಾ ಪುಟ್ಟಣ್ಣ ಭಟ್, ಪೂರ್ವಾಧ್ಯಕ್ಷ ಪ್ರಶಾಂತ್ ಪೈ,ಜೇಸಿರೆಟ್ ಪೂರ್ವಾದ್ಯಕ್ಷೆ ಅನಿತಾ ಪಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ,ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Previous Post

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

Next Post

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026
imunify-bot-check