Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಪರರ ಪ್ರಾಣ ಉಳಿಸಲು ಲಿವರ್ ಧಾನ ಮಾಡಿ ತಾನೇ ಪ್ರಾಣ ಕಳೆದುಕೊಂಡ ಉಪನ್ಯಾಸಕಿ..!!

Dhrishya News by Dhrishya News
17/09/2024
in ಸುದ್ದಿಗಳು
0
0
SHARES
202
VIEWS
Share on FacebookShare on Twitter

ಮಂಗಳೂರು :ಸೆಪ್ಟೆಂಬರ್ 17:ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ ಬಲಿಯಾಗಿದ್ದಾರೆ. ಅರ್ಚನಾ ಕಾಮತ್ ಪತಿ ಸಿಎ ಆಗಿರು ಚೇತನ್ ಕಾಮತ್ ಅವರ ಪತಿಯ ಸಂಬಂಧಿ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದರು

ಅವರಿಗೆ ಲಿವರ್‌ನ ಅಗತ್ಯವಿತ್ತು. ಹಲವರನ್ನು ತಪಾಸಣೆ ಮಾಡಿದ್ದರೂ ರಕ್ತದ ಗುಂಪು ಹೊಂದಾಣಿಕೆಯಾಗಿರಲಿಲ್ಲ. ಆದರೆ ಅರ್ಚನಾ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಆದ್ದರಿಂದ ಅರ್ಚನಾ ಅವರೇ ಲಿವರ್‌ನ ಭಾಗದ ದಾನಕ್ಕೆ ಮುಂದೆ ಬಂದಿದ್ದಾರೆ. ಅದರಂತೆ 12ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಅಂಶವನ್ನು ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತಚಿಕಿತ್ಸೆ ನಡೆದಿತ್ತು. ಆ ಬಳಿಕ ಅರ್ಚನಾ ಅವರು ಆರೋಗ್ಯದಿಂದ ಇದ್ದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಲಿವರ್ ಜೋಡಿಸಲ್ಪಟ್ಟ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಆದರೆ ಕಳೆದ 4ದಿನಗಳ ಹಿಂದೆ ಅರ್ಚನಾ ಕಾಮತ್ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೆ.15ರಂದು ಅವರು ಮೃತಪಟ್ಟಿದ್ದಾರೆ. ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಅವರು ಬಳಿಕ ನಗರದ ಬೋಂದೆಲ್ ಬಳಿಯಿರುವ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಅರ್ಚನಾ ಅವರು ಪತಿ ಸಿಎ ಚೇತನ್ ಕಾಮತ್ ಹಾಗೂ ನಾಲ್ಕು ವರ್ಷದ ಗಂಡು ಮಗುವನ್ನು ಅಗಲಿದ್ದಾರೆ.

Previous Post

ಉಡುಪಿ :ಗಣೇಶೋತ್ಸವ ಮೆರವಣಿಗೆ ಸಂದರ್ಭ ತಡರಾತ್ರಿಯವರೆಗೆ ಡಿಜೆ ಸೌಂಡ್‌ ಬಳಕೆ : ಪ್ರಕರಣ ದಾಖಲು..!!

Next Post

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್. ಪ್ರಯಾಣಿಕರು ಅಪಾಯದಿಂದ ಪಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್. ಪ್ರಯಾಣಿಕರು ಅಪಾಯದಿಂದ ಪಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News