Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳು:ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಸಿ. ಎಂ ಸಿದ್ದರಾಮಯ್ಯ.!

Dhrishya News by Dhrishya News
21/09/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಮೈಸೂರು,ಸೆ.21: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿ, ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ.ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳು “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ:

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು

Previous Post

ಉಡುಪಿ :ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ..!!

Next Post

ಶಿರೂರು ಗುಡ್ಡ ಕುಸಿತ ಪ್ರಕರಣ :  ಗಂಗಾವಳಿ ನದಿಯಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಕಾರ್ಯಾಚರಣೆ : ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರೂರು ಗುಡ್ಡ ಕುಸಿತ ಪ್ರಕರಣ :  ಗಂಗಾವಳಿ ನದಿಯಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಕಾರ್ಯಾಚರಣೆ : ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News