Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಕ್ಟೋಬರ್ 3ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  ಮೂರನೇ ಬಾರಿಯ “ಉಡುಪಿ  ಉಚ್ಚಿಲ ದಸರಾ-2024”..!!

Dhrishya News by Dhrishya News
25/09/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 25: ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ಮೂರನೇ ಬಾರಿಯ ಉಡುಪಿ ಉಚ್ಚಿಲ ದಸರಾ-2024ನ್ನು ಅ.3ರಂದು ಅ.12ರವರೆಗೆ ಹಮ್ಮಿಕೊ ಳ್ಳಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಗೌರವ ಸಲಹೆಗಾರ ಜಿ.ಶಂಕರ್ ತಿಳಿಸಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾವನ್ನು ಶಾಸ್ರೋಕ್ತವಾಗಿ, ಸಾಂಪ್ರದಾ ಯಿಕವಾಗಿ ಹಾಗೂ ಶಿಸ್ತುಬದ್ಧ ವಾಗಿ ಆಚರಿಸಲು ಸಂಕಲ್ಪ ಮಾಡಲಾಗಿದೆ. ಈ ಬಾರಿ ಚುನಾವಣಾ ನೀತಿ ಸಂಹಿತೆ ಜಾರಿಯ ಲ್ಲಿರುವುದರಿಂದ ಪೂರ್ವನಿಗದಿಯಾದ ಈ ಕಾರ್ಯಕ್ರಮ ವನ್ನು ನೀತಿಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ನಡೆಸಲಾಗುವುದು ಎಂದರು. 

ಅ.2ರಂದು ಸಂಜೆ 6.30ಕ್ಕೆ ಪಡುಬಿದ್ರಿಯಿಂದ ಕಾಪು ಸಮುದ್ರತೀರದ ದೀಪಸ್ತಂಭದವರೆಗಿನ ವಿದ್ಯುದ್ದೀಪಾಲಂಕಾರದ ಉದ್ಘಾಟನೆ, ಅ.3ರಂದು ಬೆಳಗ್ಗೆ 10ಗಂಟೆಗೆ ದಸರಾ ಉತ್ಸವದ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ವಿವಿಧ ಮೇಳ, ಮಾಹಿತಿ ಶಿಬಿರ ಹಾಗೂ ವಸ್ತು ಪ್ರದರ್ಶನವನ್ನು ಉದ್ಘಾಟಿಸ ಲಾಗುವುದು. ಬೆಳಗ್ಗೆ 10.45ಕ್ಕೆ ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಉದ್ಘಾಟನೆ ಜರಗಲಿದೆ ಎಂದು ಅವರು ತಿಳಿಸಿದರು. 

ಅ.3ರಿಂದ 12ರವರೆಗೆ ದಸರಾ ಪ್ರಯುಕ್ತ ಪ್ರತಿ ದಿನ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಶ್ರೀ ಕ್ಷೇತ್ರದ ಮಹತ್ವದ ಬಗ್ಗೆ ವಿಶೇಷ ಲೇಸರ್ ಶೋ ಜರಗಲಿವೆ. ದಸರಾ ಪ್ರಯುಕ್ತ ನೃತ್ಯ, ಮಕ್ಕಳಿಗಾಗಿ ಶ್ರೀಶಾರದಾ ಮಾತೆಯ ಛದ್ಮವೇಷ, ಹೆಣ್ಣುಮಕ್ಕಳ ಹುಕುಣಿತ, ಚಿತ್ರಕಲಾ, ರಂಗೋಲಿ, ಕುಸ್ತಿ, ದೇಹದಾಡ್ಯ ಸ್ಪರ್ಧೆಗಳು ನಡೆಯಲಿವೆ. 

ಅ.12ರಂದು ಅಪರಾಹ್ನ 3ಗಂಟೆಗೆ ಶ್ರೀಕ್ಷೇತ್ರದಿಂದ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿ-66 ಮೂಲಕ ಹೊರಟು ಎರ್ಮಾಳ್- ಉಚ್ಚಿಲ- ಮೂಳೂರು -ಕಾಪು ಬೀಚ್(ದೀಪಸ್ತಂಭ) ತಲುಪಲಿದೆ. ಈ ಸಂದರ್ಭದಲ್ಲಿ ಕಾಪು ದೀಪಸ್ತಂಭದ ಬಳಿ ಬೋಟುಗಳಿಂದ ಸಮುದ್ರ ಮಧ್ಯೆ ವಿದ್ಯುದ್ದೀಪಾ ಲಂಕಾರ, ಲೇಸರ್ ಶೋ, ಆಕರ್ಷಕ ಸುಡುಮದ್ದು ಪ್ರದರ್ಶನ, ಸುಮಂಗಲೆಯರಿಂದ ಸಾಮೂಹಿಕ ಮಂಗಳಾರತಿ, ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. 

ಸುದ್ದಿಗೋಷ್ಠಿಯಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್ ಎಸ್.ಸುವರ್ಣ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮೋಹನ್ ಬಂಗೇರ, ರತ್ನಾಕರ ಸಾಲ್ಯಾನ್, ಸುಜೀತ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ  ಕಾಣಿಸಿಕೊಂಡ ಬೆಂಕಿ..!!

Next Post

ಉಡುಪಿ: ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ- ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ- ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check