Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೆನ್ಲಾಕ್ ಆಸ್ಪತ್ರೆ ಮುಂಭಾಗ ವೈದ್ಯಾಧಿಕಾರಿಗಳು,ಸಿಬ್ಬಂದಿಗಳಿಂದ ಗುಳಿಗ ದೈವದ ಪ್ರತಿಷ್ಠಾಪನೆ  : ಮತ್ತೊಮ್ಮೆ ದೈವದ ಪವಾಡಕ್ಕೆ ಸಾಕ್ಷಿಯಾದ ತುಳುನಾಡು ..?!!

Dhrishya News by Dhrishya News
28/09/2024
in ಸುದ್ದಿಗಳು
0
0
SHARES
109
VIEWS
Share on FacebookShare on Twitter

ಮಂಗಳೂರು :ಸೆಪ್ಟೆಂಬರ್ 28:ಮಂಗಳೂರಿನ ಹಂಪನಕಟ್ಟೆಯಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್‌ ಸೂಪರ್ ಸ್ಪೆಷಾಲಿಟಿ ವಿಭಾಗ ಕಟ್ಟಡ ನಿರ್ಮಾಣಕ್ಕೆಂದು ಇಲ್ಲಿದ್ದ ಹಲವು ಮರಗಳನ್ನು ಕಡಿಯಲಾಗಿತ್ತು. 

ಈ ವೇಳೆ ಅಲ್ಲಿದ್ದ ಗುಳಿಗ ದೈವದ ಸಾನಿಧ್ಯವಿದ್ದ ಬೃಹದಾಕಾರದ ಅಶ್ವಥ ಮರವನ್ನೂ ಕಡಿಯಲಾಗಿತ್ತು. ಭಕ್ತರ ಆಕ್ರೋಶಕ್ಕೆ ಕೊನೆಗೆ ಗುಳಿಗ ದೈವದ ಕಟ್ಟೆಯನ್ನು ಸ್ಥಳಾಂತರಿಸಲಾಗಿತ್ತು.

ಆದರೆ ಯಾವಾಗ ದೈವ ಸಾನಿಧ್ಯವಿದ್ದ ಮರವನ್ನು (ದೈವದ ಕಟ್ಟೆ) ತೆರವು ಮಾಡಲಾಯಿತೋ ಅಂದಿನಿಂದ ಇಲ್ಲಿ ಗುತ್ತಿಗೆದಾರನಿಗೆ ಹಲವು ಸಂಕಷ್ಟಗಳು ಎದುರಾಗಿವೆ. ಕಾರ್ಮಿಕರು, ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಹಲವು ಅವಘಡಗಳು, ಸಮಸ್ಯೆಗಳಿಗೆ ಸಿಲುಕಿ ಆಸ್ಪತ್ರೆ ಸೇರಿದ್ದಾರೆ. ಕಾಮಗಾರಿಯ ವೇಳೆ ನಾಗರ ಹಾವು ಕೂಡ ಬಲಿಯಾದ ಘಟನೆ ನಡೆದಿದೆ ಎನ್ನಲಾಗಿದೆ 

ಒ.ಟಿ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಓರ್ವ ಸಿಬ್ಬಂದಿಗೆ ಗಂಭೀರ ಸಮಸ್ಯೆ ಎದುರಾಗಿದೆ. ಸದ್ಯ ಇದೀಗ ಕುಂಟುತ್ತಾ ಸಾಗಿದ್ದ ಕಾಮಗಾರಿ ಇತ್ತೀಚೆಗಷ್ಟೇ ಪೂರ್ಣಗೊಂಡು ಆಸ್ಪತ್ರೆಯ ಉದ್ಘಾಟನೆ ಆಗಿದೆ.

ಅಕಾಲಿಕ ಸಾವು ನೋವಿನ ಬಳಿಕ ಸರ್ಕಾರಿ ವೈದ್ಯಾಧಿಕಾರಿ, ಅಧಿಕಾರಿ ಸಿಬ್ಬಂದಿ ಪ್ರಶ್ನಾಚಿಂತನೆಯ ಮೊರೆ ಹೋಗಿದ್ದಾರೆ. ಪ್ರಶ್ನಾ ಚಿಂತನೆಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಈ ಹಿಂದೆ ಗುಳಿಗ ದೈವದ ಸಾನಿಧ್ಯವಿದ್ದು ಗುಳಿಗ ದೈವ ಕೋಪಗೊಂಡಿರುವುದು ಬೆಳಕಿಗೆ ಬಂದಿದೆ. 

ಸದ್ಯ ಈಗ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳೇ ಹಣ ಸಂಗ್ರಹಿಸಿ ಗುಳಿಗ ದೈವದ ಪುನರ್ ಪ್ರತಿಷ್ಠಾಪನೆ ಮಾಡಿದ್ದಾರೆ. ಸ್ಥಳಾಂತರ ಮಾಡಿದ್ದ ಅಶ್ವಥ ಮರದ ಬುಡದಲ್ಲೇ ಗುಳಿಗ ದೈವಕ್ಕೆ ಕಟ್ಟೆ ನಿರ್ಮಾಣ ಮಾಡಲಾಗಿದೆ. ಪ್ರಾಯಶ್ಚಿತ ಸಹಿತ ವಿವಿಧ ಧಾರ್ಮಿಕ ವಿಧಿಗಳನ್ನು ನಡೆಸಲಾಗಿದೆ. ಇದೀಗ ದೈವದ ಪ್ರತಿಷ್ಠೆ ಕಾರ್ಯದ ಬಳಿಕ 15 ದಿನದಲ್ಲೇ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಾಗಿದೆ. ಐಸಿಯುಗೆ ಬರುವ ರೋಗಿಗಳ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ. ಗುಳಿಗ ದೈವದ ಕಾರಣಿಕಕ್ಕೆ ಸರ್ಕಾರಿ ಜಿಲ್ಲಾಸ್ಪತ್ರೆಯ ಆಡಳಿತ ಮಂಡಳಿ ತಲೆಬಾಗಿದೆ.

Previous Post

ಕಾರ್ಕಳ : ಅನನ್ಯ ಸ್ಟುಡಿಯೋ ಮಾಲಕ ಛಾಯಾಗ್ರಾಹಕ ದೊಂಡೆರಂಗಡಿಯ ಅಶೋಕ್‌ ಶೆಟ್ಟಿ ಆತ್ಮಹತ್ಯೆ..!!

Next Post

ಉಡುಪಿ :ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved