Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ..!!

ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ'ದ ಪೂರ್ವಭಾವಿ ಭಜನಾ ತರಬೇತಿಯ ಉದ್ಘಾಟನೆ..!!

Dhrishya News by Dhrishya News
19/10/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 19:ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಭಜನಾ ತರಂಗ ಸಹಸ್ರ ಸಹಸ್ರ ಕಂಠಗಳೊಂದಿಗೆ ಎಲ್ಲೆಡೆ ಮಾರ್ಧನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹೇಳಿದರು.

 

ಅವರು ಶ್ರೀ ವಿಜಯದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಶ್ರೀನಿವಾಸ ಉತ್ಸವ ಬಳಗ ಬೆಂಗಳೂರು ಇವರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇವರ ಸಹಯೋಗದೊಂದಿಗೆ ನ.10ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜಾoಗಣದಲ್ಲಿ ಹಮ್ಮಿಕೊಂಡಿರುವ 4 ದಿನಗಳ ಭಜನಾ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

 

ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದಿವ್ಯ ಸಾನಿಧ್ಯದಲ್ಲಿ, ಅ.20 ರಿಂದ ನ.3ರ ವರೆಗೆ ಪ್ರತೀ ರವಿವಾರ ಮಧ್ಯಾಹ್ನ ಗಂಟೆ 2.00ರಿಂದ ಸಂಜೆ 5.00ರವರೆಗೆ ರಾಜಾoಗಣದಲ್ಲಿ ಮಠದ ವಿದ್ವಾಂಸ ಗೋಪಾಲಾಚಾರ್ಯ ಅವರ ಮಾರ್ಗದರ್ಶನದಲ್ಲಿ ಖ್ಯಾತ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ ಅವರಿಂದ ನಡೆಯುವ ಭಜನಾ ತರಬೇತಿಯಲ್ಲಿ ಭಜನಾ ಮಂಡಳಿಗಳ ಸದಸ್ಯರು ಮತ್ತು ಭಜನಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ.10 ರವಿವಾರ ಮಧ್ಯಾಹ್ನ ಗಂಟೆ 2.00ರಿಂದ ಸಂಜೆ 5.00ರ ವರೆಗೆ ರಾಜಾoಗಣದಲ್ಲಿ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಪಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ, ಭಜನಾ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷರುಗಳಾದ ವಜ್ರಾಕ್ಷಿ ಪಿ. ದಾಸ್ ಕಡಿಯಾಳಿ, ಸುಮಿತ್ರಾ ನಾಯ್ಕ್ ಪೆರಂಪಳ್ಳಿ, ಜೊತೆ ಕಾರ್ಯದರ್ಶಿ ಸತೀಶ್ ಕುಮಾರ್ ಕೇದಾರ್, ಯೋಜನೆಯ ತಾಲೂಕು ಕೃಷಿ ಅಧಿಕಾರಿ ಮಂಜುನಾಥ್, ಉಡುಪಿ ವಲಯ ಮೇಲ್ವಿಚಾರಕಿ ಪವಿತ್ರಾ, ಪ್ರಮುಖರಾದ ರಘುಪತಿ ರಾವ್, ಮನೀಶ್, ನಾಗರಾಜ್ ಖಾರ್ವಿ, ನಿತ್ಯಾನಂದ ನಾಯಕ್, ಸೇವಾ ಪ್ರತಿನಿಧಿಗಳಾದ ವಾರಿಜಾ ಶಿವಳ್ಳಿ, ರಜನಿ ಅಲೆವೂರು, ಒಕ್ಕೂಟಗಳ ಪದಾಧಿಕಾರಿಗಳು, ಭಜನಾ ಮಂಡಳಿಗಳ ಸದಸ್ಯರು ಮತ್ತು ಭಜನಾಸಕ್ತರು ಉಪಸ್ಥಿತರಿದ್ದರು.

Previous Post

ಮಲ್ಪೆ ಬೀಚ್ ಸಮೀಪ ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ..!!

Next Post

ನಟ ಕಿಚ್ಚ ಸುದೀಪ್‌ಗೆ ಮಾತೃವಿಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಟ ಕಿಚ್ಚ ಸುದೀಪ್‌ಗೆ ಮಾತೃವಿಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved