Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾರ್ವಜನಿಕರು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ತಾವಾಗಿಯೇ ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚನೆ..!!

Dhrishya News by Dhrishya News
25/10/2024
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 26: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆಎಸ್‌ಡಿಸಿಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬಂಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದೆ.

ಈ ಬಗ್ಗೆ ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬರುತ್ತಿವೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅ.18ನೇ ತಾರೀಕಿನಿಂದ) ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ ಪ್ರಾರಂಭವಾಗಿರುವುದರಿಂದ ಆಹಾರ ಇಲಾಖೆಯ ಆಯುಕ್ತರು ಅಕ್ಟೋಬರ್-2024ರ ಮಾಹೆಗೆ ಮಾತ್ರ ಪಡಿತರ ವಿತರಣೆಯನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ನಿಗದಿಪಡಿಸಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ಪಡಿತರ ವಿತರಣೆಯು ವಿಳಂಬವಾಗಿರುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯಲು ತೊಂದರೆ ಯಾಗುತ್ತಿರುವುದು ಆಹಾರ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿದ್ದು, ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಹಾಗೂ ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡವೆಂದು ತಿಳಿಸಿದ್ದಾರೆ.

ಅನರ್ಹ ಪಡಿತರ ಚೀಟಿದಾರರ ಬಗ್ಗೆ, ಜಿಲ್ಲೆಯ ಎಲ್ಲಾ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಸಾರ್ವಜನಿಕರು ತಾವಾಗಿಯೇ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ಸ್ವತಃ/ ತಾವಾಗಿಯೇ ಪಡಿತರ ಚೀಟಿಯನ್ನು ಸೆರೆಂಡರ್ ಮಾಡಬೇಕು. ಈ ಬಗ್ಗೆ ಆಹಾರ ಶಾಖೆಗೆ ಪರಿಶೀಲನೆಗೆ ಒಳಪಡಿಸಲು ತಿಳಿಸಿರುವ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳಲ್ಲಿ ಪಡಿತರವನ್ನು ನೀಡಲು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

Next Post

ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR) ವತಿಯಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ “ಸೆಲ್ ಥೆರಪಿ ಕಾನ್ಕ್ಲೇವ್” ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR) ವತಿಯಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ "ಸೆಲ್ ಥೆರಪಿ ಕಾನ್ಕ್ಲೇವ್" ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News