Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ; ಪತ್ನಿ ಸಹಿತ ಇಬ್ಬರ ಬಂಧನ…!!

Dhrishya News by Dhrishya News
25/10/2024
in ಸುದ್ದಿಗಳು
0
0
SHARES
188
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 25:  ಅಜೆಕಾರಿನ ಬಾಲಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹಲವು ವಿಚಾರಗಳು ಹೊರ ಬರುತ್ತಿದೆ. ಬಾಲಕೃಷ್ಣರ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಮಧ್ಯರಾತ್ರಿ ಬಾಲಕೃಷ್ಣರ ಮುಖಕ್ಕೆ ಬೆಡ್‌ ಶೀಟ್ ಒತ್ತಿ ಹಿಡಿದು ಕೊಲೆ ಮಾಡಿದ್ದಾರೆಂಬ ಮಾಹಿತಿ ಬಹಿರಂಗವಾಗಿದೆ.

 

ಅಜೆಕಾರು ಮರ್ಣೆ ಗ್ರಾಮದ ಬಾಲಕೃಷ್ಣ (44) ಕೊಲೆ ಪ್ರಕರಣದಲ್ಲಿ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಎಂಬ ಇಬ್ಬರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ,

ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕೃಷ್ಣರಿಗೆ ಕಾರ್ಕಳ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್‌ಲಾಕ್‌ ಮತ್ತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖರಾದ ಕಾರಣ ಅ.19 ರಂದು ರಾತ್ರಿ ಅಜೆಕಾರಿನ ದೆಪ್ಪುತ್ತೆಗೆ ಕರೆದುಕೊಂಡು ಬರಲಾಗಿತ್ತು. ಮಧ್ಯರಾತ್ರಿ ಸುಮಾರು 3:30 ಗಂಟೆಗೆ ಮನೆಯಲ್ಲಿ ಬೊಬ್ಬೆ ಕೇಳಿಬಂದಿತ್ತು. ಬಾಲಕೃಷ್ಣ ತಂದೆ ಸಂಜೀವ ಹೋಗಿ ನೋಡಿದಾಗ ಬಾಲಕೃಷ್ಣ ಮಾತನಾಡದ ಸ್ಥಿತಿಯಲ್ಲಿದ್ದರು. ಬೆಳಿಗ್ಗೆ 8 ಗಂಟೆಗೆ ಅಜೆಕಾರಿನ ಸರಕಾರಿ ಆಸ್ಪತ್ರೆಯ ವೈದ್ಯರನ್ನು ಕರೆಸಿ ಪರೀಕ್ಷಿಸಿದಾಗ ಬಾಲಕೃಷ್ಣ ಮೃತ ಪಟ್ಟಿರುವುದು ತಿಳಿದು ಬಂದಿತ್ತು.

ಒಮ್ಮೆಲೆ ಅನಾರೋಗ್ಯದಿಂದ ಬಾಲಕೃಷ್ಣ ಮೃತಪಟ್ಟ ಬಗ್ಗೆ ಮನೆಯವರು ಅನುಮಾನದಿಂದ ಪೊಲೀಸರಿಗೆ ದೂರು ನೀಡಿದ್ದರು.

ಅಜೆಕಾರಿನಲ್ಲಿ ಬ್ಯೂಟಿ ಪಾರ್ಲರ್‌ ನಡೆಸುತ್ತಿದ್ದ ಪ್ರತಿಮಾಗೆ ಇನ್ಸ್ಟಾಗ್ರಾಮ್‌ ನಲ್ಲಿ ಸಕ್ರಿಯವಾಗಿದ್ದಳು. ಗಂಡನೊಂದಿಗೂ ರೀಲ್ಸ್‌ ಗಳನ್ನು ಮಾಡುತ್ತಿದ್ದಳು. ಇದೇ ವೇಳೆ ಕಾರ್ಕಳದ ದಿಲೀಪ್‌ ಹೆಗ್ಡೆ ಎಂಬಾತ ಇನ್ಸ್ಟಾಗ್ರಾಮ್‌ ನಲ್ಲಿ ಪರಿಚಯವಾಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿ ಬಳಿಕ ಅದು ಅನೈತಿಕ ಸಂಬಂಧದತ್ತ ಬೆಳೆದಿತ್ತು. ತಮ್ಮ ಸಂಬಂಧಕ್ಕೆ ಗಂಡ ಬಾಲಕೃಷ್ಣ ಅಡ್ಡಿ ಬರಬಹುದೆಂದು ಇಬ್ಬರೂ ಮಾತನಾಡಿಕೊಂಡು ಆತನನ್ನು ಕೊಲೆ ಮಾಡಬೇಕೆಂದು ಸಂಚು ರೂಪಿಸಿದ್ದಾರೆ.

ಅವರ ಸಂಚಿನಂತೆ ದಿಲೀಪ್‌ ಹೆಗ್ಡೆಯು ಪ್ರತಿಮಾಳಿಗೆ ವಿಷ ಪದಾರ್ಥವನ್ನು ತಂದು ಕೊಟ್ಟಿದ್ದು, ಅದನ್ನು ಬಾಲಕೃಷ್ಣರವರಿಗೆ ಊಟದಲ್ಲಿ ಸೇರಿಸಿ ಕೊಡುವಂತೆ ತಿಳಿಸಿದ್ದ. ಅದರಂತೆ ಅವಳು ಊಟದಲ್ಲಿ ಸೇರಿಸಿ ಹಲವು ಬಾರಿ ಕೊಟ್ಟಿದ್ದಾಳೆ. ಇದರಿಂದ ಬಾಲಕೃಷ್ಣ ಅನಾರೋಗ್ಯಗೊಂಡು ಹಾಸಿಗೆ ಹಿಡಿದಿದ್ದ. ಕೊನೆಗೆ ಅ.20ರಂದು ಗಂಡನನ್ನು ಶಾಶ್ವತವಾಗಿ ತೊಲಗಿಸುವ ಉಪಾಯ ಹೂಡಿದ್ದ ಪ್ರತಿಮಾ, ದಿಲೀಪ್‌ ಹೆಗ್ಡೆಯನ್ನು ದೆಪ್ಪುತ್ತೆಯ ಮನೆಗೆ ಬರಲು ಹೇಳಿದ್ದಳು.

ಮಧ್ಯರಾತ್ರಿ 1:30 ಗಂಟೆಯ ಸುಮಾರಿಗೆ ಪ್ರತಿಮಾಳ ಮನೆಗೆ‌ ಆತ ಬಂದಿದ್ದು, ದಿಲೀಪ್‌ ಹೆಗ್ಡೆ ಮತ್ತು ಪ್ರತಿಮಾ ಇಬ್ಬರೂ ಸೇರಿ ಬೆಡ್‌ ಶೀಟನ್ನು ಬಾಲಕೃಷ್ಣ ಮುಖಕ್ಕೆ ಒತ್ತಿ ಹಿಡಿದು ಕೊಲೆ ಮಾಡಿದ್ದಾರೆ.  ಅಜೆಕಾರು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.

 

 

Previous Post

ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR) ವತಿಯಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ “ಸೆಲ್ ಥೆರಪಿ ಕಾನ್ಕ್ಲೇವ್” ಉದ್ಘಾಟನೆ..!!

Next Post

ಕಟಪಾಡಿ; ಅಚ್ಚಡದ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟಪಾಡಿ; ಅಚ್ಚಡದ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026