Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಅ. 29ರಂದು  ಪ್ರತಿಭಟನೆ..!!

Dhrishya News by Dhrishya News
26/10/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 26: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ಇದೇ ಅ. 29ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ಸಂಚಾಲಕ ಅಮೃತ್ ಶೆಣೈ ಹೇಳಿದರು.

ಹಲವು ಅಪಘಾತಗಳು ಸಂಭವಿಸಿದ್ದು, ಕೆಲವು ಮಂದಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಪ್ರತಿದಿನ ಟ್ರಾಫಿಕ್ ಜಾಮ್ ನಿಂದಾಗಿ ಗಂಟೆ ಗಟ್ಟಲೆ ರಸ್ತೆಯಲ್ಲೇ ಸಮಯ ಕಳೆಯುವ ದುಸ್ಥಿತಿ ಎದುರಾಗಿದೆ. ಸಂಸದರು, ಶಾಸಕರು‌ ಸಾಕಷ್ಟು ಬಾರಿ ಗಡುವು ನೀಡಿದ್ದು, ಕಾಮಗಾರಿ ಮುಗಿಯುವ ಲಕ್ಷಣವಂತೂ ಕಾಣುತ್ತಿಲ್ಲ ಎಂದರು.

ಈ ಸಮಸ್ಯೆ ಉಡುಪಿ ಜಿಲ್ಲೆಯ ಎಲ್ಲ ನಾಗರಿಕರ ಸಮಸ್ಯೆ. ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಈ ಪ್ರದೇಶಗಳಲ್ಲಿ ಮಸೀದಿ, ರೈಲ್ವೆ ನಿಲ್ದಾಣ, ಪ್ರತಿಷ್ಠಿತ ಎಂಜಿಎಂ ಕಾಲೇಜು ಇದೆ. ಅಲ್ಲಿ ಬರುವ ಜನರಿಗೆ ಅಪಘಾತವಾಗುವ ಭಯದ ವಾತಾವರಣವಿದೆ.ಈ ಸಮಸ್ಯೆಯಿಂದ ನಾಗರಿಕರು ಹೈರಾಣಾಗಿದ್ದು, ಅದಕ್ಕಾಗಿ ಈ ಬಾರಿ ರಾಜಕೀಯ ಪಕ್ಷ, ಸಾಮಾಜಿಕ ಹೋರಾಟಗಾರರು ಸೇರಿ ಸೇತುವೆ ಬಳಿ ಎರಡು ಗಂಟೆ ಪ್ರತಿಭಟನಾ ಸಭೆ ಆಯೋಜಿಸುತ್ತಿದ್ದೇವೆ.

ಈ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ಜನವರಿ ಅಂತ್ಯದ ಒಳಗೆ ಈ ಸೇತುವೆಯನ್ನು ಜನ ಬಳಕೆಗೆ ಬಿಡಬೇಕು ಎಂಬುವುದು ನಮ್ಮ ಬೇಡಿಕೆ. ರೈಲ್ವೆ ಸಚಿವರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಮನವಿ ಸಲ್ಲಿಸುತ್ತೇವೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ರೈಲ್ವೆ ಸಮನ್ವಯದ ಕೊರತೆಯಿಂದ ಸಮಸ್ಯೆಯಾಗಿದೆ ಎಂದು ಹೇಳಿದರು.

ನಮ್ಮ ಬೇಡಿಕೆ ಕ್ಲಪ್ತ ಸಮಯದಲ್ಲಿ ಈಡೇರದಿದ್ದರೆ ಜನವರಿ 3೦ಕ್ಕೆ ದೊಡ್ಡ ಹೋರಾಟ ಸಂಘಟಿಸಲಾಗುವುದು. ದರಣಿ, ಸಂಸದರ ಮನೆಗೆ ಮುತ್ತಿಗೆ, ರಸ್ತೆ ತಡೆ ಸೇರಿದಂತೆ ಹಲವು ರೀತಿಯಲ್ಲಿ ಹೋರಾಟ ಹಮ್ಮಿಕೊಳ್ಳುತ್ತೇವೆ. ಅದಕ್ಕಿಂತ ಮುನ್ನ ಸರಕಾರ ಎಚ್ಚೆತ್ತು ಸಮಸ್ಯೆ ಬಗೆಹರಿಸಬೇಕು ಆಗ್ರಹಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಜನವರಿ‌ 15ರೊಳಗೆ ಕಾಮಗಾರಿ‌ ಮುಗಿಸುವ ಭರವಸೆ ನೀಡಿದ್ದಾರೆ. ಆ ಅವಧಿಯೊಳಗೆ ಕಾಮಗಾರಿ ಮುಗಿದರೆ ಸಂಸದ ಕೋಟ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿಯ ಜ್ಯೋತಿ ಹೆಬ್ಬಾರ್, ಕರ್ನಾಟಕ ರಕ್ಷಣಾ ವೇದಿಕೆಯ ಅನ್ಸಾರ್ ಉಡುಪಿ,ಜಯನ್ ಮಲ್ಪೆ ಕುಶಾಲ್ ಶೆಟ್ಟಿ, ಅಝೀಝ್ ಉದ್ಯಾವರ, ಕೀರ್ತಿ ಶೆಟ್ಟಿ,ಪೀರ್ ಮುಹಮ್ಮದ್ ಸಾಹೇಬ್, ಸುರೇಶ್ ಶೆಟ್ಟಿ ಬನ್ಬಂಜೆ, ನಗರ ಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್, ಮಹಾಬಲ ಕುಂದರ್, ಚಂದ್ರಮೋಹನ್, ಶ್ರೀಧರ್, ಜನಾಕಿ, ಗಣೇಶ್ ನೇರ್ಗಿ, ಸೃಜನ್ ಶೆಟ್ಟಿ, ಸಜ್ಜನ್ ಶೆಟ್ಟು, ಚಾರ್ಲ್ಸ್ ಅಂಬ್ಲೇರ್, ರಮೇಶ್ ತಿಂಗಳಾಯ, ಸುರೇಂದ್ರ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous Post

ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!

Next Post

ಮಣಿಪಾಲ :ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಬಿದ್ದ ಕಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಬಿದ್ದ ಕಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News