Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೀಪಾವಳಿ ಸಂಭ್ರಮ : ಖಾಸಗಿ ಬಸ್​ಗಳ ಟಿಕೆಟ್ ದರ ಮತ್ತಷ್ಟು ದುಬಾರಿ..!!

Dhrishya News by Dhrishya News
28/10/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್ 28: ದೀಪಾವಳಿ ಹಬ್ಬ ಹಾಗೂ ದೀರ್ಘ ರಜೆ ಕಾರಣ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಕೆಲವು ಖಾಸಗಿ ಬಸ್ ಸಂಸ್ಥೆಗಳೂ ಸಹ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲು ಮುಂದಾಗಿವೆ. ಆದರೆ, ಈ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ನಿಗದಿಪಡಿಸಲಾಗುತ್ತಿದೆ. ಲಗೇಜ್‌ಗೂ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ .

ಬೆಂಗಳೂರು ಹಾಗೂ ಉಡುಪಿ ಮಧ್ಯೆ ಸಾಮಾನ್ಯವಾಗಿ 400 ರೂ.ನಿಂದ 700 ರೂ. ಇರುತ್ತಿದ್ದ ಖಾಸಗಿ ಬಸ್ ಟಿಕೆಟ್ ದರ ಈಗ 1,000 ರೂ. ದಾಟಿದೆ.

ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಖಾಸಗಿ ಬಸ್​ಗಳು 1,000 ರೂ.ನಿಂದ 1,500 ರೂ.ವರಗೆ ಟಿಕೆಟ್ ದರ ವಸೂಲಿ ಮಾಡುತ್ತಿವೆ. ಕೆಲವು ಬಸ್​​ಗಳಲ್ಲಂತೂ ಟಿಕೆಟ್ ದರ 2,000 ರೂ. ವರೆಗೆ ಇದೆ.

ನೈಋತ್ಯ ರೈಲ್ವೆ ವಿಶೇಷ ದೀಪಾವಳಿ ರೈಲುಗಳ ಸೇವೆ ಒದಗಿಸುತ್ತಿದೆ. ಆದರೆ, ವಿಶೇಷ ರೈಲುಗಳ ಎಲ್ಲ ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿವೆ. ಹೀಗಾಗಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಕೆಎಸ್​​ಆರ್​ಟಿಸಿ ಬಸ್​​ಗಳಲ್ಲಿಯೂ ಬಹುತೇಕ ಸೀಟ್​​ಗಳು ಮುಂಗಡ ಕಾಯ್ದಿರಿಸಲಾಗಿದೆ. ವಿಶೇಷ ಬಸ್​ಗಳಲ್ಲಿಯೂ ಮುಂಗಡ ಕಾಯ್ದಿರಿಸುವಿಕೆ ಜೋರಾಗಿದೆ. ಹೀಗಾಗಿ ಪ್ರಯಾಣಿಕರು ದುಬಾರಿ ದರ ತೆತ್ತು ಆನ್‌ಲೈನ್‌ನಲ್ಲಿ ಖಾಸಗಿ ಬಸ್‌ಗಳ ಟಿಕೆಟ್​ ಖರೀದಿಸುತ್ತಿದ್ದಾರೆ.

ಹಬ್ಬ ಹಾಗೂ ದೀರ್ಘ ವಾರಾಂತ್ಯದ ಕಾರಣ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಕೆಲವು ಖಾಸಗಿ ಬಸ್ ಸಂಸ್ಥೆಗಳೂ ಸಹ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲು ಮುಂದಾಗಿವೆ. ಆದರೆ, ಈ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ನಿಗದಿಪಡಿಸಲಾಗುತ್ತಿದೆ. ಲಗೇಜ್‌ಗೂ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಪ್ರಯಾಣಿಕರು ಅಲವತ್ತುಕೊಳ್ಳುತ್ತಿದ್ದಾರೆ.

, ಮಂಗಳೂರು ಮತ್ತು ಬೆಂಗಳೂರು ನಡುವಿನ ಕೆಎಸ್‌ಆರ್‌ಟಿಸಿ ಬಸ್ ದರಗಳು ಸ್ಥಿರವಾಗಿವೆ. ಹೆಚ್ಚುವರಿ ವಿಶೇಷ ಬಸ್​​ ಸೇವೆಗಳಿಗೆ ಮಾತ್ರ ಶೇ 20 ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಡುಪಿ ಮತ್ತು ಕುಂದಾಪುರ ಮಾರ್ಗಗಳು ಸೇರಿದಂತೆ ಕರಾವಳಿ ಪ್ರದೇಶಗಳಿಗೆ ಈವರೆಗೆ 18 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ನಿಯೋಜಿಸಿದೆ.

Previous Post

ಉಡುಪಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿಶೇಷ ಚೇತನರಿಂದ ಪ್ರತಿಭಟನೆ..!!

Next Post

” ಪರಿಸರ ಸ್ನೇಹಿ ದೀಪಾವಳಿ” ಆಚರಿಸಲು ರಾಜ್ಯ ಸರ್ಕಾರ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

" ಪರಿಸರ ಸ್ನೇಹಿ ದೀಪಾವಳಿ" ಆಚರಿಸಲು ರಾಜ್ಯ ಸರ್ಕಾರ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News