Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ಕರ್ನಾಟಕ ಬ್ಯಾಂಕ್‌ ಕೋಣಿ ಬ್ರಾಂಚ್ ನಲ್ಲಿ ಕಳ್ಳತನ ಯತ್ನ ಪ್ರಕರಣ :ಅಪ್ರಾಪ್ತ ಬಾಲಕ ಸಹಿತ ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ..!!

Dhrishya News by Dhrishya News
29/10/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಕುಂದಾಪುರ :ಅಕ್ಟೋಬರ್ 29:ಕುಂದಾಪುರದ ಕರ್ನಾಟಕ ಬ್ಯಾಂಕ್‌ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್‌ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್‌ ಹುಸೇನ್‌ (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.

ಅ. 16ರ ಮಧ್ಯರಾತ್ರಿ 2.45ರ ಸುಮಾರಿಗೆ ಕೋಣಿಯ ಬ್ಯಾಂಕಿನ ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಹೈದರಾಬಾದ್‌ನ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ವಾಪಾಸು ಹೋಗಿರುವುದಾಗಿದೆ.

ಎಟಿಎಂ ನಿರ್ವಹಿಸುವ ಸಂಸ್ಥೆಯ ಭದ್ರತಾ ನಿಗಾ ವಹಿಸುವವರು ಹೈದರಾಬಾದಿನಲ್ಲಿ ಸಿಸಿ ಟಿವಿ ಮಾನಿಟರಿಂಗ್‌ ಮಾಡುತ್ತಿದ್ದು, ಅವರ ಗಮನಕ್ಕೆ ಬಂದ ತತ್‌ಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ರಾತ್ರಿಯೇ ಎಸ್‌ಐ ಹಾಗೂ ಪೊಲೀಸ್‌ ತಂಡ ಸ್ಥಳಕ್ಕೆ ನೀಡಿದ್ದು, ಅಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ.

ಕುಂದಾಪುರ ವೃತ್ತ ನಿರೀಕ್ಷಕ ನಂಜಪ್ಪ ಎನ್‌., ಎಸ್‌ಐಗಳಾದ ವಿನಯ್‌ ಎಂ. ಕೊರ್ಲಹಳ್ಳಿ, ಪುಷ್ಪಾ, ಸಿಬಂದಿ ಮೋಹನ, ಸಂತೋಷ, ಅವಿನಾಶ, ಶ್ರೀಧರ, ಘನಶ್ಯಾಮ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಈ ಆರೋಪಿತರು ಕುಂದಾಪುರ ಠಾಣೆ ಮಾತ್ರವಲ್ಲದೆ, ಇದಕ್ಕೂ ಹಿಂದೆ ಬೆಳ್ತಂಗಡಿ ಠಾಣೆ, ಪಡುಬಿದ್ರಿ ಠಾಣೆ, ಬಳ್ಳಾರಿ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್‌ ಕಳ್ಳತನ, ಬೈಕ್‌ ಕಳ್ಳತನ, ಅಂಗಡಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.

Previous Post

ನಾಳೆ KSRTC`ಐರಾವತ ಕ್ಲಬ್ ಕ್ಲಾಸ್ 2.0′ ಲೋಕಾರ್ಪಣೆ..!!

Next Post

ಉಡುಪಿ :ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved