Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾ.ಹೆ. 169 : ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇಲಾಖೆ : ಸಾಣೂರಿನಲ್ಲಿ  ತಾತ್ಕಾಲಿಕ ತಂಗುದಾಣ ನಿರ್ಮಿಸಿದ ಸ್ಥಳೀಯರು .!!

Dhrishya News by Dhrishya News
30/10/2024
in मौसम
0
0
SHARES
35
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 30:ಕಳೆದೆರಡು ವರ್ಷಗಳಿಂದ ಕಾರ್ಕಳದ ಸಾಣೂರಿನಿಂದ ಮಂಗಳೂರಿನ ಬಿಕರ್ನ ಕಟ್ಟೆಯ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯ ಪ್ರಯಾಣಿಕರ ತಂಗುದಾಣ ಮತ್ತು ರಿಕ್ಷಾ ತಂಗುದಾಣಗಳನ್ನು ಕೆಡವಲಾಗಿದ್ದು ದಿನಂಪ್ರತಿ ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ,ಅಧ್ಯಾಪಕರು ಹಾಗೂ ಇನ್ನಿತರ ಪ್ರಯಾಣಿಕರು ರಸ್ತೆ ಬದಿಯಲ್ಲಿಯೇ ಬಿಸಿಲು ಮಳೆಗೆ ಬಸ್ಸಿಗಾಗಿ ಕಾಯಬೇಕಾಗಿದ್ದು, ಕಳೆದ ಎರಡು ವರ್ಷಗಳಿಂದ ತೀರಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಈ ಬಗ್ಗೆ ಹಲವಾರು ಬಾರಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರಿಗೆ, ಜಿಲ್ಲಾಧಿಕಾರಿಯವರಿಗೆ, ಜನಪ್ರತಿನಿಧಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. 

 ಹೊಸ ತಂಗುದಾಣಕ್ಕೆ ಸ್ಥಳ ನಿಗದಿಪಡಿಸಿಲ್ಲ 

ಹೊಸ ತಂಗುದಾಣ ನಿರ್ಮಾಣ ಆಗುವವರೆಗೆ ಕನಿಷ್ಠ ಪಕ್ಷ ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕ ನೆಲೆಯಲ್ಲಿಯೂ ಕೂಡ ಯಾವುದೇ ಅನುಕೂಲಗಳನ್ನು ಒದಗಿಸಿಲ್ಲ. 

ಹೊಸ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡಲು ಇನ್ನೂ ಕೂಡ ಸ್ಥಳ ನಿಗದಿ ಮಾಡಲು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೀನ ಮೇಷ ಎಣಿಸುತ್ತಿದ್ದು, ತೀರಾ ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ.

 ಸಾಣೂರು ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ತಾತ್ಕಾಲಿಕ ಪ್ರಯಾಣಿಕರ ತಂಗುದಾಣ ನಿರ್ಮಾಣ  ಹೆದ್ದಾರಿ ಇಲಾಖೆಯ ಜನ ವಿರೋಧಿ ನೀತಿಯಿಂದ ಬೇಸತ್ತು ಸ್ಥಳೀಯ ರಿಕ್ಷಾ ಮಾಲಕ ಚಾಲಕರು, ಸಾಣೂರು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಬಿಸಿಲಿನ ಬೇಗೆಯಿಂದ ಹೆದ್ದಾರಿ ಬದಿಯಲ್ಲಿ ನಿಲ್ಲಲು ನೆರಳು ಬಲೆ ಮತ್ತು ಮರದ ಕಂಬಗಳಿಂದ ಸಾಣೂರಿನಲ್ಲಿ ತಾತ್ಕಾಲಿಕ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದುದರಿಂದ, ಹೆದ್ದಾರಿ ಕಾಮಗಾರಿಗೆ ತಡೆಯುಂಟಾಗಿತ್ತು.

ಇದೀಗ ನಾಲ್ಕು ತಿಂಗಳ ಬಳಿಕ ಕಳೆದ ಒಂದು ವಾರದಿಂದ ಗುತ್ತಿಗೆದಾರ ದಿಲೀಪ್ ಬಿಲ್ಡ್ ಕಾನ್ ಕಂಪನಿಯವರು ಹೆದ್ದಾರಿ ಕಾಮಗಾರಿಯನ್ನು ಆರಂಭಿಸಿರುತ್ತಾರೆ. 

 ಆದಷ್ಟು ಶೀಘ್ರವಾಗಿ ನೆನೆಗುದಿಗೆ ಬಿದ್ದಿರುವ ತಡೆಗೋಡೆ ನಿರ್ಮಾಣ ಕಾಮಗಾರಿ, ಹೊಸ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾರ್ಯ, ಬಾಕಿ ಉಳಿದಿರುವಸರ್ವಿಸ್ ರಸ್ತೆಗಳ ಕಾಮಗಾರಿ, ಬೀದಿ ದೀಪಗಳ ಅಳವಡಿಕೆ, ಸೂಕ್ತ ಚರಂಡಿ ನಿರ್ಮಾಣ, ಗ್ರಾಮದ ಹೆದ್ದಾರಿ ಅಡ್ಡರಸ್ತೆಗಳಿಗೆ ಡಾಮರೀಕರಣ ಮೊದಲಾದ ಅಗತ್ಯದ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಕೊಂಡು ಗ್ರಾಮದ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಒತ್ತಾಯಿಸಿರುತ್ತಾರೆ.

Previous Post

ಬೈಂದೂರು:ನಿಯಂತ್ರಣ ತಪ್ಪಿ ಪಲ್ಟಿಯಾದ ಸಿಮೆಂಟ್‌ ಲಾರಿ: ಚಾಲಕ ಸಾವು..!!

Next Post

ರಾಷ್ಟ್ರೀಯ ಹೆದ್ದಾರಿ  ಕಾಮಗಾರಿಗಳ ಕಾರ್ಯ ಪ್ರಗತಿಯ ಬಗ್ಗೆ ಸಮಲೋಚನಾ ಸಭೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರೀಯ ಹೆದ್ದಾರಿ  ಕಾಮಗಾರಿಗಳ ಕಾರ್ಯ ಪ್ರಗತಿಯ ಬಗ್ಗೆ ಸಮಲೋಚನಾ ಸಭೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News