Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ `ಕನ್ನಡ ಮುದ್ರಣ’ ಕಡ್ಡಾಯ : ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
02/11/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 02:ಕರ್ನಾಟಕದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ‘ಕನ್ನಡ’ ದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಇಂಗ್ಲೀಷ್ ನಲ್ಲಿ ಬರೆಯಲಾಗುತ್ತಿದೆ.

ಇನ್ನುಂದೆ ಕನ್ನಡದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ, ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಬೇಕು. ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತನ್ನು ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ, ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ.

ರಾಜ್ಯದ ಸಂಸದರು ಕೇಂದ್ರಕ್ಕೆ ಹೋಗಿದ್ದು, ಕೇಂದ್ರದಲ್ಲಿ ಕನ್ನಡಪರ ಧ್ವನಿ ಎತ್ತಬೇಕು. ಈ ಶಕ್ತಿಯನ್ನು ಆಯ್ಕೆಯಾಗಿ ಹೋದವರು ಬೆಳೆಸಿಕೊಂಡರೆ ರಾಜ್ಯಕ್ಕೆ ನ್ಯಾಯ ದೊರೆಯುತ್ತದೆ. ಕೇಂದ್ರದ ಅನ್ಯಾಯದ ನಡುವೆಯೂ, ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಸುಮಾರು 200ಕ್ಕೂ ಹೆಚ್ಚು ಭಾಷೆಗಳಿವೆ. ಇಲ್ಲಿಯ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ ಪ್ರತಿಯೊಬ್ಬರೂ ಕನ್ನಡಿಗರಾಗುತ್ತಾರೆ. ಯಾವುದೇ ಭಾಷೆ, ಧರ್ಮ, ಜಾತಿಗೆ ಸೇರಿದವರೇ ಆಗಿರಲಿ ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡಿಗರು. ಹೀಗಾಗಿ ಕನ್ನಡಿದಲ್ಲಿಯೇ ವ್ಯವಹರಿಸೋಣ, ಇತರರಿಗೂ ಕನ್ನಡ ಕಲಿಸೋಣ. ಬೇರೆ ಭಾಷೆಗಳನ್ನು ಗೌರವಿಸೋಣ ಆದರೆ ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ. ಕರ್ನಾಟಕ ಮುಂದುವರೆದ ರಾಜ್ಯವೆಂದು ನ್ಯಾಯಯುತ ಅನುದಾನ ನೀಡದೆ ನಮಗೆ ಅನ್ಯಾಯ ಮಾಡಲಾಗುತ್ತಿದೆ.

ಹಸು ಹಾಲು ಕೊಡುತ್ತದೆ ಎಂದು ಅಷ್ಟೂ ಹಾಲನ್ನು ಕರೆದರೆ ಕರು ಬಡವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೀಗಾಗಿ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ಸಮಸ್ತ ಕನ್ನಡಿಗರು ಧ್ವನಿಯೆತ್ತಬೇಕಿದೆ ಎಂದರು.

Previous Post

ಉಡುಪಿ :ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ದಿನಕರ್ ಹೇರೂರು ನೇಮಕ..!!

Next Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ರಿಕ್ಷಾ ಚಾಲಕರೊಂದಿಗೆ ರಾಜ್ಯೋತ್ಸವ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ರಿಕ್ಷಾ ಚಾಲಕರೊಂದಿಗೆ ರಾಜ್ಯೋತ್ಸವ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News