Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು..!!

Dhrishya News by Dhrishya News
03/11/2024
in ಸುದ್ದಿಗಳು
0
0
SHARES
92
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 03:ನಟ, ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ

ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ನಟರೂ ಹೌದು. ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

1972ರಲ್ಲಿ ರಾಮನಗರ ಜಿಲ್ಲೆ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.

ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು. ಆದ್ರೆ, ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದೇ ಕುತೂಹಲ. ಮಾಹಿತಿ ಪ್ರಕಾರ ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ. ಡೆತ್ ನೋಟ್ ಬರೆದಿಟ್ಟಿದ್ದು, ಏನೆಲ್ಲಾ ಅಂಶಗಳಿವೆ ಎಂಬುದು ಕುತೂಹಲ ಗರಿಗೆದರುವಂತೆ ಮಾಡಿದೆ.

ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಆತ್ಮಹತ್ಯೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ.

ಗುರುಪ್ರಸಾದ್‌ ಸಿನಿಮಾ ವಿಚಾರವಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ ಎಂಬ ಮಾತೂ ಹೇಳಿಬರುತ್ತಿದೆ.

ಬಸವೇಶ್ವರನಗರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಗುರುಪ್ರಸಾದ್ ನಂತರ ಜಯನಗರ ಕನಕನಪಾಳ್ಯದ ಅಶೋಕ್ ಪಿಲ್ಲರ್ ಬಳಿ ವಾಸವಿದ್ದರು. ಕೆಲ ದಿನಗಳ ಕಾಲ ಮನೆ ಬಿಟ್ಟು ಒಬ್ಬಂಟಿಯಾಗಿ ಹೋಟೆಲಿನಲ್ಲಿ ಗುರುಪ್ರಸಾದ್‌ ರೂಂ ಮಾಡಿಕೊಂಡಿದ್ದರು.

ಸದ್ಯ ಕಳೆದ ಕೆಲ ತಿಂಗಳುಗಳಿಂದ ಮಾದನಾಯಕನಹಳ್ಳಿ ಬಳಿಯ ನ್ಯೂ ಹೆವೆನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಮಾದನಾಯಕನಹಳ್ಳಿ ಬಳಿಯ ಫ್ಲಾಟ್ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿಯನ್ನು ಗುರುಪ್ರಸಾದ್‌ ನೀಡಿರಲಿಲ್ಲ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಗುರುಪ್ರಸಾದ್‌ ಕೋರ್ಟ್‌, ಕಚೇರಿ ಅಲೆಯುತ್ತಿದ್ದರು. ಈ ನಡುವೆ ಜಯನಗರದಲ್ಲಿ ಪುಸ್ತಕ ಖರೀದಿ ಮಾಡಿ ಹಣ ನೀಡಿಲ್ಲ ಎಂಬ ಆರೋಪದ ಅಡಿ ಮತ್ತೊಂದು ಕೇಸ್ ದಾಖಲಾಗಿತ್ತು. ಹೀಗಾಗಿ ಆರ್ಥಿಕವಾಗಿ ಒಂದಷ್ಟು ಸಮಸ್ಯೆಯನ್ನು ಗುರುಪ್ರಸಾದ್ ಎದುರಿಸುತ್ತಿದ್ದರು ಎನ್ನಲಾಗಿದೆ 

Previous Post

ಪ್ರಮೋದ್ ಮಧ್ವಾರಾಜ್ ಅವರ ಅಮ್ಮುಂಜೆ ಮನೆಯ ಗೋಶಾಲೆಯಲ್ಲಿ ಗೋಪೂಜೆ ..!!

Next Post

ಉಡುಪಿಯಲ್ಲಿ ನವೆಂಬರ್ .16 ಮತ್ತು 17ರಂದು ‘ಬೃಹತ್ ಉದ್ಯೋಗ ಮೇಳ’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ನವೆಂಬರ್ .16 ಮತ್ತು 17ರಂದು 'ಬೃಹತ್ ಉದ್ಯೋಗ ಮೇಳ'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved