ವಿಟ್ಲ : ನವೆಂಬರ್ 13:ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ.
ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.
ಕಾರು ಚಾಲಕ ಮುಳಿಯ ರಾಮಣ್ಣ ಎಂಬವರ ತಲೆಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.








