Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ವಿಶ್ವವಿದ್ಯಾನಿಲಯ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Dhrishya News by Dhrishya News
15/11/2024
in ಸುದ್ದಿಗಳು
0
0
SHARES
56
VIEWS
Share on FacebookShare on Twitter

ಮಂಗಳೂರು ನವೆಂಬರ್ 15:  ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ 2024-25ನೇ ಸಾಲಿನಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳು ಹಾಗೂ (ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳು), ಯು.ಜಿ.ಸಿ.ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ website ನಲ್ಲಿ ನೀಡಲಾದ Link https://faculty.mangaloreuniversity.in ರಲ್ಲಿ ಸಲ್ಲಿಸಬೇಕು.

ಅತಿಥಿ ಉಪನ್ಯಾಸಕರು ಬೇಕಾದ ವಿಷಯಗಳು: ಇಂಗ್ಲೀಷ್ (UG), ಅರ್ಥಶಾಸ್ತ್ರ (PG), ಸಸ್ಯಶಾಸ್ತ್ರ (PG), ಸೈಬರ್ ಸೆಕ್ಯುರಿಟಿ (PG), ಕಂಪ್ಯೂಟರ್ ಸೈನ್ಸ್(UG/PG), ವಾಣಿಜ್ಯ ಶಾಸ್ತ್ರ (PG), (Specilization Finance Mgt) ಹಾಗೂ ಕೈಗಾರಿಕ ರಸಾಯನಶಾಸ್ತ್ರ (PG).

ಅರ್ಜಿ ಸಲ್ಲಿಸಲು ನ. 19 ರಂದು ಕೊನೆಯ ದಿನ. ನ.22 ರಂದು ಬೆಳಿಗ್ಗೆ 9 ಗಂಟೆಯಿಂದ ವಿಶ್ವವಿದ್ಯಾನಿಲಯ ಆಡಳಿತ ಸೌಧ, ಮಂಗಳ ಗಂಗೋತ್ರಿಯಲ್ಲಿ ಸಂದರ್ಶನ ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ದಾಖಲೆಯ ಜೆರಾಕ್ಸ್ ಪ್ರತಿಗಳೊಂದಿಗೆ ವಿಶ್ವವಿದ್ಯಾನಿಲಯ ಆಡಳಿತ ಸೌಧದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾದ ಮತ್ತು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದನುಸಾರ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಅರ್ಜಿ ಶುಲ್ಕ ರೂ. 250/- ಹಾಗೂ (SC/ST/Cat-1 ಅಭ್ಯರ್ಥಿಗಳಿಗೆ ರೂ.125/)ನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್: www.mangaloreuniversity.ac.in ನಲ್ಲಿರುವ ಆನ್‍ಲೈನ್ ಪೇಮೆಂಟ್ https://www.onlinesbi.sbi/sbicollect/payment/listcategory ಮುಖಾಂತರ ಪಾವತಿಸಿ e-Receipt ಅನ್ನು ಅರ್ಜಿಯೊಂದಿಗೆ ತಪ್ಪದೇ ಅಪ್‍ಲೋಡ್ ಮಾಡಬೇಕು.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ, ವಿಶ್ವವಿದ್ಯಾನಿಲಯದ ನಿರ್ಣಯವೇ ಅಂತಿಮವಾಗಿದೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಅತಿಥಿ ಉಪನ್ಯಾಸಕರ ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಸಾವಿನಲ್ಲೂ ಸಾರ್ಥಕತೆ  ಮೆರೆದ ಉಪನ್ಯಾಸಕಿ ಗ್ಲೋರಿಯಾ..!!

Next Post

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದು ಸಂಜೆ 5ಗಂಟೆ ಯಿಂದ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದು ಸಂಜೆ 5ಗಂಟೆ ಯಿಂದ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News