Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ..!!

Dhrishya News by Dhrishya News
16/11/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಮಂಗಳೂರು :ನವೆಂಬರ್ 16:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಶುಕ್ರವಾರ ವಿವಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು .

ಉಡುಪಿ, ದಕ್ಷಿಣ ಕನ್ನಡ ಸಹಿತ ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಸಹಸ್ರಾರು ವಿದ್ಯಾರ್ಥಿಗಳು ಮಂಗಳಗಂಗೋತ್ರಿ ಕ್ಯಾಂಪಸ್‌ಗೆ ವಿಶೇಷ ಬಸ್‌ಗಳಲ್ಲಿ ಆಗಮಿಸಿ ಆಡಳಿತ ಸೌಧದ ವರೆಗೆ ಮೆರವಣಿಗೆಯಲ್ಲಿ ತೆರಳಿದರು. ಪೊಲೀಸರು ಆಡಳಿತ ಸೌಧದ ಪಾರ್ಕಿಂಗ್‌ ಪ್ರದೇಶದಲ್ಲೇ ಬ್ಯಾರಿಕೇಡ್‌ ಹಾಕಿ ವಿದ್ಯಾರ್ಥಿಗಳನ್ನು ತಡೆದಿದ್ದು, ಏಕಾಏಕಿ ವಿದ್ಯಾರ್ಥಿಗಳ ಒಂದು ತಂಡ ಬ್ಯಾರಿಕೇಡ್‌ ತಪ್ಪಿಸಿ ನೇರವಾಗಿ ಆಡಳಿತ ಸೌಧದ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ.

ಪ್ರತಿಭಟನಾ ಸಂದರ್ಭದಲ್ಲಿ ನಡೆದ ನೂಕಾಟ ತಳ್ಳಾಟದಲ್ಲಿ ಆಡಳಿತ ಸೌಧ ಕಚೇರಿಯ ಪ್ರವೇಶ ದ್ವಾರದ ಗಾಜು ಪುಡಿಯಾಗಿ ಮಹಿಳಾ ಪೊಲೀಸ್‌ ಹಾಗೂ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಮಸ್ಯೆ ತತ್‌ಕ್ಷಣ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಗಣೇಶ್‌ ಪೂಜಾರಿ, ಮಂಗಳೂರು ಸಂಘಟನಾ ಕಾರ್ಯ ದರ್ಶಿ ಚಂದ್ರಶೇಖರ್‌ ಮರಾಠೆ, ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ಮಂಗಳೂರು ಮಹಾನಗರ ಕಾರ್ಯದರ್ಶಿ ಮೋನಿಷ್‌, ಉಡುಪಿ ನಗರ ಕಾರ್ಯದರ್ಶಿ ಶ್ರೀವತ್ಸ, ಮುಖಂಡರಾದ ಶ್ರೀಲಕ್ಷಿಮಂದಾರ, ಭರತ್‌, ಹರ್ಷ, ಪ್ರತೀಕ್‌ ಮುಂತಾದವರಿದ್ದರು.

ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಕ್ಕೆ ಕುಲಪತಿ ಪ್ರೊ| ಪಿ.ಎಲ್‌. ಧರ್ಮ ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮತ್ತು ಕುಲಪತಿ ನಡುವೆ ಚರ್ಚೆ, ಘೋಷಣೆಗಳು ನಡೆದು ಅಂತಿಮವಾಗಿ ಸರಕಾರಕ್ಕೆ ವರದಿ ಸಲ್ಲಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಮಧ್ಯಾಹ್ನದ ವೇಳೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Previous Post

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

Next Post

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News