ಸೋಮೇಶ್ವರ: ನವೆಂಬರ್ 24:ಯುವತಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.
ಸೋಮೇಶ್ವರದ ರುದ್ರಬಂಡೆಯಿಂದ ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿದ್ದಾರೆ. ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.








