Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿದಾನ ದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ..!!

Dhrishya News by Dhrishya News
26/11/2024
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಧರ್ಮಸ್ಥಳ :ನವೆಂಬರ್ 26:ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇಂದಿನಿಂದ ಆರಂಭ ಗೊಂಡಿದೆ ಈ ಬಾರಿ ನ. 26 ರಿಂದ 30ರ ವರೆಗೆ ಲಕ್ಷದೀಪೋತ್ಸವ ವಿಜೃಂಭಣೆಯಿಂದ ನಡೆಯುತ್ತವೆ. 

ಇಂದು ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಮಂಗಳವಾರ (ನವೆಂಬರ್ 26) ಅಪರಾಹ್ನ ಮೂರು ಗಂಟೆಗೆ 25,000 ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಮಾರ್ಗದರ್ಶನ ನೀಡುವರು.

ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವ, ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

ನ. 26 ರಿಂದ 30ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿ ವರ್ಷದಂತೆ ಲಕ್ಷದೀಪೋತ್ಸವದ ದಿನ ಶನಿವಾರ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಧರ್ಮಸ್ಥಳಕ್ಕೆ ಬರುತ್ತಾರೆ. ಕೆಎಸ್‌ಆರ್‌ಟಿಸಿ ನಾಡಿನ ವಿವಿಧ ಊರುಗಳಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. 

Previous Post

NEET’, ‘JEE’ ಸೇರಿ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ..!!

Next Post

ಉಡುಪಿ : ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸಂವಿಧಾನ ದಿನದ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸಂವಿಧಾನ ದಿನದ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News