ಉಡುಪಿ:ನವೆಂಬರ್ 29:ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆ ನವೆಂಬರ್ 30 ರಂದು ಶನಿವಾರ ಸಂಜೆ 3.00 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಕಟ್ಟಡದ ಮೊದಲನೇ ಮಹಡಿಯಲ್ಲಿ ನಡೆಯಲಿದೆ.
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ .
ಕರ್ನಾಟಕ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಪ್ರತಿ ತಾಲ್ಲೂಕುಗಳಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ರಚಿಸಲಾಗಿದ್ದು ಅದರಂತೆ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಅವರು ಆಯ್ಕೆಯಾಗಿದ್ದಾರೆ.
ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಶಬರೀಶ್ ಸುವರ್ಣ, ಉಸ್ತಾದ್ ಸಾದಿಕ್, ಡಾ. ಸಂತೋಷ್ ಕುಮಾರ್, ದಿನೇಶ್ ಜತ್ತನ್ನ, ಪ್ರವೀಣ್ ಕುಮಾರ್ ಹೆಗ್ಡೆ, ಸಂತೋಷ್ ಶೆಟ್ಟಿ, ಮಾಲತಿ ಆಚಾರ್ಯ, ಸುಧಾಕರ್ ಪೂಜಾರಿ, ದಿನೇಶ್ ಪೂಜಾರಿ, ಪ್ರೇಮಲತಾ ಸೋನ್ಸ್, ಗಣೇಶ್ ಶೆಟ್ಟಿಬೆಟ್ಟು, ವಿಜಯ್ ನಾಯ್ಕ್ ಹಾಗೂ ಅರ್ಚನಾ ದೇವಾಡಿಗ ಆಯ್ಕೆಯಾಗಿದ್ದಾರೆ.