ನವೆಂಬರ್ 29: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇಡಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಜ್ ಕುಂದ್ರಾ ಅವರ ಮುಂಬೈನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಪೋರ್ನ್ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಮೇಲೆ ರಾಜ್ ಕುಂದ್ರಾ ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಜುಲೈ 2021 ರಲ್ಲಿ ರಾಜ್ ಕುಂದ್ರಾ ಅವರನ್ನು ಮುಂಬೈ ಅಪರಾಧ ವಿಭಾಗವು ಬಂಧಿಸಿತ್ತು.