Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಿ.10ರಿಂದ 15ರ ವರೆಗೆ ಮೂಡುಬಿದಿರೆಯಲ್ಲಿ ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ..!!

Dhrishya News by Dhrishya News
05/12/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಮೂಡುಬಿದ್ರೆ :ಡಿಸೆಂಬರ್ 05:ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ  ಡಿ.10ರಿಂದ 15ರ ವರೆಗೆ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ 30ನೇ ವರ್ಷದ “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ಜರಗಲಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ|ಎಂ. ಮೋಹನ್‌ ಆಳ್ವ ತಿಳಿಸಿದ್ದಾರೆ.

ಡಿ. 10ರ ಸಂಜೆ 5.30ರಿಂದ 6.30ರ ವರೆಗೆ ಉದ್ಘಾಟನ ಕಾರ್ಯಕ್ರಮ ನಡೆಯಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಜಿ. ಶಂಕರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.35ರಿಂದ ರಾತ್ರಿ 8.30ರ ವರೆಗೆ 100ಕ್ಕೂ ಅಧಿಕ ದೇಶಿಯ ಜಾನಪದ ಕಲಾ ತಂಡ ಗಳಿಂದ ಕೂಡಿದ 3 ಸಾವಿರಕ್ಕೂ ಅಧಿಕ ಕಲಾವಿದರನ್ನು ಒಳಗೊಂಡ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ರಾತ್ರಿ 8.30ರಿಂದ 9.30ರ ವರೆಗೆ ವಿರಾಸತ್‌ ಸಾಂಸ್ಕೃತಿಕ ರಥ ಸಂಚಲನ ಹಾಗೂ ರಥಾರತಿ ನಡೆಯಲಿದೆ 

ಡಿ. 11ರಂದು ಸಂಜೆ 5.45ರಿಂದ 6.30ರ ವರೆಗೆ ಆಳ್ವಾಸ್‌ ವಿರಾಸತ್‌ 2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರಿಗೆ ಆಳ್ವಾಸ್‌ ವಿರಾಸತ್‌ ಪ್ರಶಸ್ತಿ ಪ್ರದಾನಿಸಲಾಗುವುದು. ಬಳಿಕ ಹಿಂದೂಸ್ಥಾನಿ ಗಾಯನ, ಗುಜರಾತ್‌ನ “ರಂಗ್‌ ಮಲಹರ್‌ ದಿ ಫೋಕ್‌ ಆರ್ಟ್ಸ್’ ತಂಡದಿಂದ ಗುಜರಾತಿ ಜಾನಪದ ನೃತ್ಯ ಪ್ರದರ್ಶನ, 9 ಗಂಟೆಯಿಂದ ಆಳ್ವಾಸ್‌ ವೈವಿಧ್ಯಮಯ ಸಾಂಸ್ಕೃತಿಕ ವೈಭವ ನಡೆಯಲಿದೆ.

ಡಿ. 12ರಂದು ಸಂಜೆ 6ರಿಂದ 8ರ ವರೆಗೆ ಗುಜರಾತ್‌ನ ಒಸ್ಮಾನ್‌ ಮೀರ್‌ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8.15ರಿಂದ ನೃತ್ಯ ವೈವಿಧ್ಯ, 9.15ರಿಂದ ಆಳ್ವಾಸ್‌ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಪ್ರಸ್ತುತಗೊಳ್ಳಲಿದೆ.

ಡಿ.13ರಂದು ಸಂಜೆ 6ರಿಂದ 8ರವರೆಗೆ ನೀಲಾದ್ರಿ ಕುಮಾರ್‌ ಮತ್ತು ತಂಡದಿಂದ “ಸೌಂಡ್‌ ಆಫ್ ಇಂಡಿಯಾ’ ಹಾಗೂ 8.15ರಿಂದ 9ರ ವರೆಗೆ ಕೋಲ್ಕತ್ತಾದ ಆಶೀಮ್‌ ಬಂಧು ಭಟ್ಟಾಚಾರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್‌ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ.

ರಾತ್ರಿ 9ರಿಂದ ಬೆಂಗಳೂರು ಕಾರ್ತೀಸ್‌ ಫ‌ರ್‌ಫಾರ್ಮಿಂಗ್‌ ಆರ್ಟ್ಸ್ ನೃತ್ಯೋಲ್ಲಾಸ ಹಾಗೂ ಬೆಂಗಳೂರು ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ ಆಳ್ವಾಸ್‌ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.

ಡಿ. 14ರಂದು ಸಂಜೆ 6ರಿಂದ 9ರ ವರೆಗೆ ಚೆನ್ನೈಯ ಸ್ಟೆಕೇಟೋದ 25 ಕಲಾವಿದರಿಂದ ಸಂಗೀತ ರಸದೌತಣ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ ಬೀಳಲಿದೆ 

ಡಿ. 15ರಂದು ದಿನಪೂರ್ತಿ ವಿವಿಧ ಮೇಳಗಳು ನಡೆಯಲಿವೆ. ಪ್ರತಿನಿತ್ಯ ಅಂದಾಜು ತಲಾ 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದೇ ವೇಳೆ ರಾಜ್ಯಮಟ್ಟದ ಸ್ಕೌಟ್ಸ್‌-ಗೈಡ್ಸ್‌ ರೋವರ್ಸ್‌-ರೇಂಜರ್ಸ್‌ ಸಾಂಸ್ಕೃತಿಕ ಉತ್ಸವ, ತರಬೇತಿ ನಡೆಯಲಿದೆ 

ಭಾರತದ 30 ಪ್ರದೇಶವಾರು ಹಾಗೂ ಜಿಐ ಟ್ಯಾಗ್‌ ಹೊಂದಿದ ಕೈಮಗ್ಗ ಸೀರೆ, ಬಟ್ಟೆಗಳ ಉತ್ಸವ ವಿರಾಸತ್‌ನ ಈ ವರ್ಷದ ಪ್ರಮುಖ ಆಕರ್ಷಣೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನೇಕಾರರಿಂದ ಗ್ರಾಹಕರಿಗೆ ನೇರ ಮಾರಾಟ ನಡೆಯಲಿದೆ 

ಕಲೆ ಮತ್ತು ಕರಕುಶಲ ವಸ್ತುಗಳು, ಉಡುಪುಗಳು, ಆಭರಣಗಳು, ಗೃಹಾಲಂಕಾರಿಕ ವಸ್ತುಗಳು, ಅಪರೂಪದ ಹಾಗೂ ಸಮಕಾಲೀನ ವಸ್ತುಗಳ ಬಜಾರ್‌ ಈ ಬಾರಿಯ ವಿರಾಸತ್‌ನಲ್ಲಿರಲಿದೆ. ದಿಲ್ಲಿಯ ಮೀನಾ ಬಝಾರ್‌ ಮೇಳದಂತೆ ಈ ಮೇಳ ನಡೆಯಲಿದೆ.

ಕೃಷಿ ಕುರಿತು ಯುವಜನತೆಯಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ಕೃಷಿ ಮೇಳ ನಡೆಯಲಿದೆ. 600 ವಿವಿಧ ಮಳಿಗೆಗಳು ಇರಲಿದೆ. ತರಕಾರಿ, ಹಣ್ಣಹಂಪಲು, ಅಲಂಕಾರಿಕ ಗಿಡಗಳು, ಕೃಷಿ ಉಪಕರಣ ಇಲ್ಲಿನ ವಿಶೇಷತೆ.

ದೇಶ ವಿದೇಶಗಳಿಂದ ತಂದ ತಳಿಗಳು, ನಮ್ಮದೇ ಮಣ್ಣಿನ ದೇಸೀಯ ತಳಿಗಳು, ಕಸಿ ಮಾಡಿದ ವೈವಿಧ್ಯ ಫಲಗಳು ಇಲ್ಲಿರಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳು ಇರಲಿವೆ.

ತುಳುನಾಡಿನ ಪರಂಪರೆಯಿಂದ ಆರಂಭಿಸಿ ಅಪ್ಪಟ ದೇಸೀಯ ತಿನಿಸುಗಳು ಆಹಾರ ಮೇಳದಲ್ಲಿರಲಿದೆ. ಆಹಾರೋತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಕರಕುಶಲ, ಪ್ರಾಚ್ಯವಸ್ತು ಪ್ರದರ್ಶನ ಮೇಳ ಈಶಾನ್ಯ, ಉತ್ತರ, ಪೂರ್ವ ಸಹಿತವಿವಿಧ ರಾಜ್ಯಗಳ 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗುಡಿ ಕೈಗಾರಿಕೆ, ಕರಕುಶಲ, ಪ್ರಾಚ್ಯವಸ್ತುಗಳ ಪ್ರದರ್ಶನ ಹಾಗೂ ಮಾರಾಟ.ಲಲಿತ ಕಲಾ ಮೇಳ, ಚಿತ್ರ ಪ್ರದರ್ಶನ ಬಣ್ಣ ಕುಂಚದ ಮೂಲಕ ರಂಗು ಮೂಡಿಸುವ ಚಿತ್ರಕಲಾವಿದರ ಕಲಾಕೃತಿಗಳ ಪ್ರದರ್ಶನ, ಮಾರಾಟ. 600ಕ್ಕೂ ಅಧಿಕ ಛಾಯಾಚಿತ್ರಗಳ ಪ್ರದರ್ಶನ, ವಿವಿಧ ಕಲಾಕೃತಿಗಳ ಬೃಹತ್‌ ಪ್ರದರ್ಶನ.ನಡೆಯಲಿದೆ 

Previous Post

ಕದ್ರಿ :ಪೋಕ್ಸೋ ಪ್ರಕರಣದ ಆರೋಪಿ ಅರ್ಚಕ ಅಮಾನತು..!

Next Post

ಮಂಗಳೂರು :ಕಾರಾಗೃಹಕ್ಕೆ ದಾಳಿ ಸಂದರ್ಭ ನಿಷೇಧಿತ ವಸ್ತುಗಳು ಪತ್ತೆ :ಜೈಲು ಅಧಿಕ್ಷಕ ಅಮಾನತು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು :ಕಾರಾಗೃಹಕ್ಕೆ ದಾಳಿ ಸಂದರ್ಭ ನಿಷೇಧಿತ ವಸ್ತುಗಳು ಪತ್ತೆ :ಜೈಲು ಅಧಿಕ್ಷಕ ಅಮಾನತು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check