ಉಡುಪಿ: ಡಿಸೆಂಬರ್ 09:ಮಾದಕ ದ್ರವ್ಯ ಗಾಂಜಾ ಸೇವಿಸಿದ ಆರೋಪದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದ ಸೆನ್ ಅಪರಾಧ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಿಟಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಅನಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿರುತ್ತದೆ.ಅದರಂತೆ ಪ್ರಕರಣ ದಾಖಲಿಸಲಾಗಿದೆ.








