Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

KSRTC ಹೊಸ 20 ‘ಅಂಬಾರಿ ಉತ್ಸವ’ ವೋಲ್ವೋ ಬಸ್‌ಗಳಿಗೆ ಚಾಲನೆ..!!

Dhrishya News by Dhrishya News
25/12/2024
in मौसम
0
KSRTC ಹೊಸ 20 ‘ಅಂಬಾರಿ ಉತ್ಸವ’ ವೋಲ್ವೋ ಬಸ್‌ಗಳಿಗೆ ಚಾಲನೆ..!!
0
SHARES
28
VIEWS
Share on FacebookShare on Twitter

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಲ್ಲಿ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿತು. ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಅವರು ಬಸ್‌ಗಳಿಗೆ ಚಾಲನೆ ನೀಡಿದರು. ಈ ಬಸ್‌ಗಳು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಂತರರಾಜ್ಯಗಳಿಗೆ ಸಂಚರಿಸಲಿವೆ. ಸರ್ಕಾರ 9000 ನೌಕರರ ನೇಮಕಾತಿಗೆ ಅನುಮತಿ ನೀಡಿದ್ದು, 750 ವಿದ್ಯುತ್ ಬಸ್‌ಗಳ ಯೋಜನೆಗೂ ಅನುಮೋದನೆ ನೀಡಿದೆ.

ಇದೇ ವೇಳೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಎರಡು ತಿಂಗಳ ಮುಂಚೆ ವೋಲ್ವೋ 20 ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದು ತಿಳಿಸಿದರು

9 ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ನಲ್ಕೂ ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿವೆ. 750 ವಿದ್ಯುತ್​ ಚಾಲಿತ ಬಸ್​ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್​ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದರೇ ಇನ್ನಷ್ಟು ಬಸ್​ಗಳನ್ನ ರಸ್ತೆಗಿಳಿಸುತ್ತೇವೆ ಎಂದರು.

ಇಂದು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ನಿಗಮದ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳಿಗೆ ರಾಮಲಿಂಗಾರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು, ದಿನೇಶ್ ಗುಂಡುರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಎಸ್.‌ ಆರ್.‌ ಶ್ರೀನಿವಾಸ್‌ (ವಾಸು), ಅಧ್ಯಕ್ಷರು ಹಾಗೂ ಶಾಸಕರು ಗುಬ್ಬಿ ವಿಧಾನಸಭಾ ಕ್ಷೇತ್ರ ಮತ್ತು ಮೊಹಮ್ಮದ್‌ ರಿಜ್ವಾನ್‌ ನವಾಬ್‌, ಉಪಾಧ್ಯಕ್ಷರು, ಕರಾರಸಾ ನಿಗಮರವರು ಚಾಲನೆ ನೀಡಿದರು.

 

ಕರಾರಸಾ ನಿಗಮದ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ನಡೆಸದ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ 1406 ಅಭ್ಯರ್ಥಿಗಳ ಪೈಕಿ 50 ಅಂಕಗಳಿಗೆ 50/49/48 ಅಂಕ ಪಡೆದಿರುವ 82 ಅಭ್ಯರ್ಥಿಗಳಿಗೆ ಪೈಕಿ 14 ಮಂದಿಗೆ ಚಾಲಕ ಕಂ ನಿರ್ವಾಹಕರ ಹುದ್ದೆಗೆ ತಾತ್ಕಾಲಿಕ ನಿಯೋಜನೆ ಆದೇಶ ವಿತರಣೆ ಮಾಡಿದರು.

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 8896 ವಾಹನಗಳ ಮೂಲಕ 8063 ಅನುಸೂಚಿಗಳಿಂದ 28.76 ಲಕ್ಷ ಕಿ.ಮೀ ಕ್ರಮಿಸಿ 35.43 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ.

ನಮ್ಮ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಈ ಪೈಕಿ ನಾಲ್ಕು ನಿಗಮಗಳಲ್ಲಿ ಕಳೆದ ಒಂದುವರೆ ವರ್ಷದಲ್ಲಿ 4301 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ.

ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ನಮ್ಮ ಸರ್ಕಾರವು ಅನುಮತಿ ನೀಡಿದ್ದು, ಈ ಪೈಕಿ 2144, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6856 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು.

ಶಕ್ತಿ ಯೋಜನೆ ನಿಗಮಗಳ ವಾಹನಗಳಲ್ಲಿ 356.00 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್ ಮೌಲ್ಯ ರೂ. 8598.23 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.37 ಆಗಿರುತ್ತದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ನಾಲ್ಕು ನಿಗಮಗಳ ವಾಹನಗಳಲ್ಲಿ ಸರಾಸರಿ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಸ್ತುತ ಈ ಸಂಖ್ಯೆಯು 108.70 ಲಕ್ಷಗಳಿಗೆ ಹೆಚ್ಚಳವಾಗಿರುತ್ತದೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 1004 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ.

ಸಾರಿಗೆ ಸುರಕ್ಷಾ ಅಪಘಾತ ಪರಿಹಾರ ವಿಮಾ ಯೋಜನೆ: ಅಪಘಾತದಿಂದ ಮೃತಪಟ್ಟ 22 ಸಿಬ್ಬಂದಿಗಳ ಅವಲಂಭಿತರಿಗೆ ತಲಾ ರೂ. 1 ಕೋಟಿಯಂತೆ ಇದುವರೆಗೆ ರೂ.22 ಕೋಟಿಗಳ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ: ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ತಲಾ ರೂ.10 ಲಕ್ಷಗಳಂತೆ 81 ಸಿಬ್ಬಂದಿಗಳ ಅವಲಂಭಿತರಿಗೆ ರೂ. 8.10 ಕೋಟಿಗಳ ಪರಿಹಾರ ವಿತರಿಸಲಾಗಿದೆ.

ಸಾರಿಗೆ ವಿದ್ಯಾ ಚೇತನʼ: ಕ.ರಾ.ರ.ಸಾ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಅಡಿಯಲ್ಲಿ ʼಸಾರಿಗೆ ವಿದ್ಯಾ ಚೇತನʼ ಯೋಜನೆಯಡಿ ಜಾರಿಗೊಳಿಸಿದ್ದು, ಈವರೆಗೂ 6083 ಫಲಾನುಭವಿಗಳಿಗೆ ರೂ. 3.05 ಕೋಟಿ ಸ್ಕಾಲರ್‌ಶಿಪ್‌ ನೀಡಲಾಗಿದೆ.

ನಿಗಮಕ್ಕೆ ಲಭಿಸಿರುವ ಪ್ರಶಸ್ತಿಗಳು: ಕಳೆದ ಒಂದುವರೆ ವರ್ಷದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 112 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುತ್ತದೆ.

ಕೆಎಸ್‌ಆರ್‌ಟಿಸಿ ಗೆ 20 ನೂತನ ವೋಲ್ವೋ ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳಿಗೆ ಚಾಲನೆ. ಅಂಬಾರಿ ಉತ್ಸವ ಸ್ಲೀಪರ್‌ ಬಸ್ಸುಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಹೀಗಿದೆ 20 ನೂತನ ವೋಲ್ವೋ ಅಂಬಾರಿ ಉತ್ಸವ್ ಸ್ಲೀಪರ್ ಬಸ್ ಸಂಚಾರದ ಮಾರ್ಗಗಳ ಪಟ್ಟಿ

ಕುಂದಾಪುರ – ಬೆಂಗಳೂರು -2

ಮಂಗಳೂರು – ಬೆಂಗಳೂರು -2

ಕೆಂಪೇಗೌಡ ಅಂತರರಾಷ್ಟ್ರೀಯ

ವಿಮಾನ ನಿಲ್ದಾಣ – ಕುಂದಾಪುರ -2

ಬೆಂಗಳೂರು – ನೆಲ್ಲೂರು -2

ಬೆಂಗಳೂರು – ಹೈದಾರಬಾದ್ -2

ಬೆಂಗಳೂರು – ವಿಜಯವಾಡ- 4

ಬೆಂಗಳೂರು – ಎರ್ನಾಕುಲಂ – 2

ಬೆಂಗಳೂರು – ತ್ರಿಶೂರು – 2

ಬೆಂಗಳೂರು – ಕ್ಯಾಲಿಕಟ್ -2

ಹೀಗಿದೆ ವಾಹನಗಳ ವಿಶೇಷತೆ

ಈ ವಾಹನವು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

ಇದು ಶಕ್ತಿಯುತ ಹಾಲೋಜನ್ ಹೆಡ್ ಲೈಟ್ಗಳು ಮತ್ತು ಡೇ ಟೈಮ್ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿರುತ್ತದೆ.

ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು, ಯು.ಎಸ್.ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಅನುಕೂಲವನ್ನು ಒದಗಿಸುತ್ತದೆ.

ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟುಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.

ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FDSS) ಸ್ಥಾಪಿಸಲಾಗಿದೆ.

ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಈ ಸಮಾರಂಭದಲ್ಲಿ ವಿ. ಅನ್ಬುಕುಮಾರ್‌, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ, ಆರ್. ರಾಮಚಂದ್ರನ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಕರಾರಸಾ ನಿಗಮ, ಕಾರ್ಮಿಕ ಸಂಘಟನೆಗಳ ಮುಖಂಡರು, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Previous Post

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಜೈಲಿಂದ ರಿಲೀಸ್..!!

Next Post

ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಯುವತಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಯುವತಿ ನಾಪತ್ತೆ..!!

ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಯುವತಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved